ಕಡೂರುಗ್ರಾಮವೊಂದರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮೂವರು ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ವೆಸಗಿದ ಆರೋಪದ ಮೇಲೆ ಶಿಕ್ಷಕ ಹಾಗೂ ಕರ್ತವ್ಯ ಲೋಪದಡಿ ಮುಖ್ಯಶಿಕ್ಷಕ ಸೇರಿ ಇಬ್ಬರ ವಿರುದ್ಧ ಶುಕ್ರವಾರ ತಡರಾತ್ರಿ ಪೋಕ್ಸೋ ಕಾಯ್ದೆಯಡಿ ತಾಲೂಕಿನ ಯಗಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮೂವರು ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ
ಕನ್ನಡಪ್ರಭ ವಾರ್ತೆ ಕಡೂರುಗ್ರಾಮವೊಂದರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮೂವರು ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ವೆಸಗಿದ ಆರೋಪದ ಮೇಲೆ ಶಿಕ್ಷಕ ಹಾಗೂ ಕರ್ತವ್ಯ ಲೋಪದಡಿ ಮುಖ್ಯಶಿಕ್ಷಕ ಸೇರಿ ಇಬ್ಬರ ವಿರುದ್ಧ ಶುಕ್ರವಾರ ತಡರಾತ್ರಿ ಪೋಕ್ಸೋ ಕಾಯ್ದೆಯಡಿ ತಾಲೂಕಿನ ಯಗಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬಿಸಲೇರಿ ಗ್ರಾಮದ ಶಾಲೆ ಸಹ ಶಿಕ್ಷಕ ನಾಗರಾಜಪ್ಪ, ಮುಖ್ಯ ಶಿಕ್ಷಕ ಲೋಕೇಶಪ್ಪ ಎರಡನೇ ಆರೋಪಿಯಾಗಿದ್ದಾರೆ.ಶಾಲೆಯ ಶಿಕ್ಷಕ ನಾಗರಾಜಪ್ಪ, 6ನೇ ತರಗತಿಯ ಮೂವರು ವಿದ್ಯಾರ್ಥಿನಿಯರ ಬಳಿ ಅಸಭ್ಯವಾಗಿ ವರ್ತಿಸಿದ್ದಲ್ಲದೆ ವಿದ್ಯಾರ್ಥಿನಿಯರು ಶಾಲೆಗೆ ಮೊಬೈಲ್ ತರುವಂತೆ ಹೇಳಿ ಅವರ ಮೊಬೈಲ್‌ಗಳಿಗೆ ಅಶ್ಲೀಲ ವಿಡಿಯೋಗಳನ್ನು ಕಳುಹಿಸಿದ್ದಾರೆ. ಒಬ್ಬ ವಿದ್ಯಾರ್ಥಿನಿಗೆ ಅಶೀಲ್ಲದ ಮಾತುಗಳನ್ನಾಡಿದ್ದಲ್ಲದೆ ಈ ಬಗ್ಗೆ ಮುಜುಗರಕ್ಕೆ ಒಳಗಾದ ವಿದ್ಯಾರ್ಥಿನಿಗೆ ಈ ವಿಷಯವನ್ನು ಯಾರಿಗೂ ಹೇಳದಂತೆ ದೇವರ ಮೇಲೆ ಆಣೆ ಪ್ರಮಾಣ ಮಾಡಿಸಿಕೊಂಡ ಪರಿಣಾಮ ವಿದ್ಯಾರ್ಥಿನಿಯರು ಶಾಲೆಗೆ ಹೋಗಲು ಹಿಂದೇಟು ಹಾಕಿದ್ದಾರೆ.
ಬಳಿಕ ಪೋಷಕರು ತಮ್ಮ ಮಕ್ಕಳು ಆತಂಕದಲ್ಲಿದ್ದ ಪರಿಸ್ಥಿತಿ ಗಮನಿಸಿ ವಿಚಾರಿಸಿದಾಗ ಶಿಕ್ಷಕನ ಅನುಚಿತ ವರ್ತನೆ ವಿಷಯ ಬೆಳಿಕಿಗೆ ಬಂದಿದೆ.ಈ ನಡುವೆ ಶಾಲೆ ಮುಖ್ಯ ಶಿಕ್ಷಕ ಲೋಕೇಶಪ್ಪ ಎಸ್.ಡಿಎಂಸಿ ಸಮಿತಿಯವರ ಉಪಸ್ಥಿತಿಯಲ್ಲಿ ನೊಂದ ವಿದ್ಯಾರ್ಥಿನಿಯರ ಪೋಷಕರೊಡನೆ ಸಭೆ ನಡೆಸಿ ಪರಿಸ್ಥಿತಿ ವಿಕೋಪಕ್ಕೆ ಹೋಗದಂತೆ ತಡೆಯಲು ಪ್ರಯತ್ನಿಸಿ ತುರ್ತು ಕ್ರಮವಹಿಸದೆ ಲೈಂಗಿಕ ದೌರ್ಜನ್ಯದ ಗಂಭೀರ ಪ್ರಕರಣದ ಅರಿವು ಇಲ್ಲದೆ ಕರ್ತವ್ಯ ನಿರ್ಲಕ್ಷ್ಯತನ ವಹಿಸಿದ ಹಿನ್ನೆಲೆಯಲ್ಲಿ ಕಡೂರು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್. ತಿಮ್ಮಯ್ಯ ಇಬ್ಬರು ಆರೋಪಿತರ ಮೇಲೆ ದೂರು ನೀಡಿದ್ದಾರೆ.
ಠಾಣೆಯಲ್ಲಿ ಪ್ರಕರಣ ದಾಖಲಾದ ಹಿನ್ನಲೆಯಲ್ಲಿ ಶನಿವಾರ ಡಿವೈಎಸ್ಪಿ ಪರಶುರಾಮಪ್ಪ, ಯಗಟಿ ಪಿಎಸೈ ಶಾಹಿದ್ ಅಫ್ರೀದಿ ಹಾಗೂ ಸಿಬ್ಬಂದಿ ಗ್ರಾಮಕ್ಕೆ ಭೇಟಿ ನೀಡಿ ಸ್ಥಳ ಮಹಜರು ಪ್ರಕ್ರಿಯೆ ನಡೆಸಿ ಇಬ್ಬರು ಆರೋಪಿತ ವ್ಯಕ್ತಿಗಳನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದರು.---ಬಾಕ್ಸ್ ---
ಅಪ್ರಾಪ್ತ ಹೆಣ್ಣುಮಕ್ಕಳಿಗೆ ಧೈರ್ಯ ತುಂಬಬೇಕುಅಪ್ರಾಪ್ತ ಹೆಣ್ಣುಮಕ್ಕಳಿಗೆ ಧೈರ್ಯ ತುಂಬುವ ಕೆಲಸ ಮಾಡಿದಾಗ ಇಂತಹ ಸೂಕ್ಷ್ಮ ಪ್ರಕರಣಗಳು ಬೆಳಕಿಗೆ ಬರಲು ಸಾಧ್ಯ ವಾಗಲಿದೆ ಎಂದು ಮಕ್ಕಳ ಕಲ್ಯಾಣ ಸಮಿತಿ ಜಿಲ್ಲಾಧ್ಯಕ್ಷೆ ಕೆ.ಆರ್. ಜಯಶೀಲ ಮಕ್ಕಳಿಗೆ ಆತ್ಮಸ್ಥೈರ್ಯ ತುಂಬಿದರು.
ತಹಸೀಲ್ದಾರ್ ಸಿ.ಎಸ್.ಪೂರ್ಣಿಮಾ ಮಾತನಾಡಿ ಹೆಣ್ಣುಮಕ್ಕಳ ಮನಸ್ಸು ಬಹಳ ಸೂಕ್ಷ್ಮವಾದದ್ದು ಶಾಲೆಯಲ್ಲಿ ಅವರಿಗೆ ಮುಕ್ತ ಮತ್ತು ಸುರಕ್ಷತೆ ವಾತಾವರಣವಿರಬೇಕು. ಇಂತಹ ಘಟನೆಗಳಿಂದ ಹೆಣ್ಣುಮಕ್ಕಳ ಮನಸ್ಸು ಘಾಸಿಗೊಳಗಾಗುತ್ತದೆ. ಇಂತಹ ಘಟನೆಗಳು ಮರುಕಳಿಸಬಾರದು. ಎಂದಿನಂತೆ ಶಾಲೆಗೆ ಮಕ್ಕಳು ಹಾಜರಾಗಲು ಶಾಲೆಯ ಶಿಕ್ಷಕರು ಅಗತ್ಯ ಕ್ರಮ ವಹಿಸುವಂತೆ ನಿರ್ದೇಶಿಸಿದರು. ಈ ಸಂದರ್ಭದಲ್ಲಿ ಗ್ರಾಮದ ಶಾಲಾ ಮಕ್ಕಳಿಗೆ ಅಧಿಕಾರಿಗಳು ಆತ್ಮಸೈರ್ಯ ತುಂಬಿ ಪೋಕ್ಸೋ ಕಾಯ್ದೆ ಬಗ್ಗೆ ಜಾಗೃತಿ ಮೂಡಿಸಿದರು. ಮಕ್ಕಳ ರಕ್ಷಣಾಧಿಕಾರಿ ಎಸ್.ಎಂ. ಮಂಜುನಾಥ್, ತಾಪಂ ಇಒ ಸಿ.ಆರ್.ಪ್ರವೀಣ್, ಸಿಡಿಪಿಒ ದೇವರಾಜ್, ಪಿಡಿಒ ಸುನೀಲ್, ಹಿರೇನಲ್ಲೂರು ಕಂದಾಯ ನಿರೀಕ್ಷಕ ರವಿ ಮತ್ತಿತರಿದ್ದರು.ಪೋಟೊ20ಕೆಡಿಆರ್1
ಕಡೂರು ತಾಲೂಕಿನ ಯಗಟಿ ಪೊಲೀಸ್ ಠಾಣಾ ವ್ಯಾಪ್ತಿಯ ಬಿಸಲೇರಿ ಗ್ರಾಮವೊಂದರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ತಹಸೀಲ್ದಾರ್ ಸಿ.ಎಸ್.ಪೂರ್ಣಿಮಾ ಮಕ್ಕಳಿಗೆ ಧೈರ್ಯ ತುಂಬಿದರು. ಕೆ.ಆರ್.ಜಯಶೀಲ, ಸಿ.ಆರ್.ಪ್ರವೀಣ್ ಮತ್ತಿತರಿದ್ದರು.