ಸಾರಾಂಶ
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಪೋಡಿ ಮುಕ್ತ ಜಿಲ್ಲೆಯನ್ನಾಗಿ ಮಾಡುವ ಗುರಿ ಹೊಂದಲಾಗಿದ್ದು. ನಾಲ್ಕು ತಾಲೂಕುಗಳಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಒಳಗೊಂಡ ತ೦ಡಗಳನ್ನು ರಚಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ತಿಳಿಸಿದರು.
ಜಿಲ್ಲಾಡಳಿತ ಭವನದಲ್ಲಿ ನಡೆದ ಬೆಂ.ಗ್ರಾ. ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಅಧ್ಯಕ್ಷತೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾಹಿತಿ ನೀಡಿದರು. ಪೂರಕ ದಾಖಲೆಗಳ ಇರುವ ಜಮೀನುಗಳನ್ನು ಮೊದಲು ಸರ್ವೆ ಕಾರ್ಯ ನಡೆಸಿ ಹದ್ದುಬಸ್ತು ಮಾಡಬೇಕು. ಕೆಲವು ಭಾಗಗಳಲ್ಲಿ ಕಡತಗಳು ನಾಪತ್ತೆ ಆಗಿರುವುದರಿಂದ ಹಿನ್ನಡೆ ಆಗುತ್ತಿದೆ. ಕಡತ ಇರುವ ಪ್ರಕರಣಗಳಲ್ಲಿ ಪೋಡಿಮುಕ್ತ ಮಾಡಲು ಆದ್ಯತೆ ಮೇರೆಗೆ ಮಾಡಲಾಗುತ್ತಿದೆ. ಸಾಗುವಳಿ ಚೀಟಿ ಇರುವ ಪ್ರಕರಣಗಳನ್ನು ಎರಡನೇ ಹoತದಲ್ಲಿ ಮಾಡಲಾಗುವುದು. ತಹಸೀಲ್ದಾರ್‌ಗಳಿಗೆ ಗುರಿ ನಿಗದಿಪಡಿಸಲಾಗಿದೆ ಎಂದು ತಿಳಿಸಿದರು.ಪ್ರತಿಕ್ರಿಯಿಸಿದ ಸಚಿವ ಕೆ.ಎಚ್.ಮುನಿಯಪ್ಪ, ಕಾಲಮಿತಿಯೊಳಗೆ ತ್ವರಿತಗತಿಯಲ್ಲಿ ಪ್ರಕ್ರಿಯೆ ಮುಗಿಸುವಂತೆ ಸೂಚಿಸಿ, ಜನರು ಕಚೇರಿಗಳಿಗೆ ಅಲೆದಾಡಬಾರದು. ಜಿಲ್ಲಾಧಿಕಾರಿ ಇದರ ಬಗ್ಗೆ ನಿಗಾ ವಹಿಸಬೇಕು. ಪೋಡಿ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಅಧಿಕಾರಿಗಳಿಗೆ ಎಲ್ಲಾ ರೀತಿಯ ನೆರವು ನೀಡಲಾಗುವುದು ಎಂದು ಹೇಳಿದರು.
ಒತ್ತುವರಿ ಕುರಿತ ಅರ್ಜಿಗಳ ವಿಲೇ:ಹಾಲಿ ಸರ್ಕಾರಿ ರಸ್ತೆಗಳು, ಕಾಲುದಾರಿ, ಬಂಡಿ ದಾರಿ, ರಾಜ ಕಾಲುವೆಗಳ ಒತ್ತುವರಿಗೆ ಸಂಬಂಧಿಸಿದಂತೆ ಬಂದಿರುವ ಅರ್ಜಿಗಳನ್ನು ಒಂದು ತಿಂಗಳೊಳಗೆ ವಿಲೇವಾರಿ ಮಾಡಿ ಒತ್ತುವರಿ ತೆರವುಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಸಚಿವರಿಗೆ ಮಾಹಿತಿ ನೀಡಿದರು.
ಸಾರ್ವಜನಿಕರಿಗೆ ಕಲುಷಿತ ನೀರು ಯಾವುದೇ ಕಾರಣಕ್ಕೂ ಪೂರೈಕೆಯಾಗದoತೆ ಎಚ್ಚರಿಕೆ ವಹಿಸಬೇಕು. ಚರಂಡಿ ಜತೆಗೆ ಕುಡಿಯುವ ನೀರಿನ ಪೈಪ್ ಇರದಂತೆ ಎಚ್ಚರಿಕೆ ವಹಿಸಬೇಕು. ಏನಾದರೂ ಅನಾಹುತ ಉoಟಾದರೆ ಸಂಬಂಧಪಟ್ಟ ಅಧಿಕಾರಿಗಳೇ ಜವಾಬ್ದಾರಿ ಎಂದು ಸಚಿವರು ಅಧಿಕಾರಿಗಳಿಗೆ ತಾಕೀತು ಮಾಡಿದರು.ಶೈಕ್ಷಣಿಕ ಪ್ರಗತಿಗೆ ಒತ್ತು ನೀಡಿ:
ಜಿಲ್ಲೆಯಲ್ಲಿ ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳು ವಾರದಲ್ಲಿ ಒಂದು ಶಾಲೆಗೆ ಕಡ್ಡಾಯವಾಗಿ ಭೇಟಿ ನೀಡಿ, ಅಲ್ಲಿನ ಶೈಕ್ಷಣಿಕ ಪ್ರಗತಿ ಪರಿಶೀಲಿಸುವ ಜತೆಗೆ ಕುಂದುಕೊರತೆಗಳನ್ನು ಆಲಿಸುವ ಕೆಲಸ ಮಾಡಬೇಕು. ಅಲ್ಲದೇ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಪ್ರತಿ ವಿದ್ಯಾರ್ಥಿ ಶೇ.70 ರಿಂದ ಶೇ. 80 ಕ್ಕೂ ಹೆಚ್ಚು ಅಂಕದೊಂದಿಗೆ ತೇರ್ಗಡೆಯಾಗುವಂತೆ ಬೋಧನೆಗೆ ಕ್ರಮ ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.ಸಿಎಸ್ಆರ್ ಅನುದಾನದಡಿ ಪ್ರತಿ ಗ್ರಾಮ ಪಂಚಾಯಿತಿಯ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸಲಾಗುವುದು. ಈಗಾಗಲೇ ಹಲವು ಭಾಗಗಳಲ್ಲಿ ಶಾಲೆಗಳು ನವೀಕರಣ ಕಾರ್ಯ ಆರಂಭವಾಗಿದೆ. ಜಿಲ್ಲೆಯಲ್ಲಿರುವ ವಸತಿ ಶಾಲೆಗಳು ಹಾಗೂ ವಸತಿ ನಿಲಯಗಳಲ್ಲಿ ವಾರಕ್ಕೊಮ್ಮೆ ಭೇಟಿ ನೀಡಿ, ಅಲ್ಲಿನ ವಿದ್ಯಾರ್ಥಿಗಳಿಗೆ ನೀಡುವ ಆಹಾರದ ಗುಣಮಟ್ಟವನ್ನು ಪರೀಕ್ಷಿಸಬೇಕು. ಜತೆಗೆ ಪ್ರತಿ ವಿದ್ಯಾರ್ಥಿಗಳು ಶೇ.70 ರಿಂದ ಶೇ. 80ಕ್ಕೂ ಅಧಿಕ ಅಂಕದೊಂದಿಗೆ ತೇರ್ಗಡೆಯಾಗಲು ಎಲ್ಲ ವಸತಿ ಶಾಲೆಗಳ ಪ್ರಾಂಶುಪಾಲರು ಕ್ರಮ ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.15ಕೆಡಿಬಿಪಿ3-
ಬೆಂ.ಗ್ರಾ. ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಅಧ್ಯಕ್ಷತೆಯಲ್ಲಿ ನಡೆದ ಪ್ರಗತಿಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಶಿವಶಂಕರ್ ನೀಡಿದರು.