ಕ್ಷೀರಭಾಗ್ಯದ ಹಾಲಿನ ಪುಡಿ ಸಾಗಾಟ, ಪೊಲೀಸರ ಕೈಗೆ ಸಿಕ್ಕಿಬಿದ್ದ ಖದೀಮರು

| Published : Mar 21 2025, 12:36 AM IST

ಸಾರಾಂಶ

ಸರ್ಕಾರದ ಕ್ಷೀರಭಾಗ್ಯ ಯೋಜನೆಯಡಿ ಪೂರೈಕೆಯಾದ ಹಾಲಿನ ಪುಡಿಯನ್ನು ಅಕ್ರಮವಾಗಿ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ ಖದೀಮರು ಬುಧವಾರ ರಾತ್ರಿ ಬೆಟಗೇರಿ ಪೊಲೀಸರು ಖಚಿತ ಮಾಹಿತಿ ಮೇರೆಗೆ ನಡೆಸಿದ ದಾಳಿಯಲ್ಲಿ ಸಿಕ್ಕಿ ಬಿದ್ದಿದ್ದಾರೆ.

ಗದಗ: ಸರ್ಕಾರದ ಕ್ಷೀರಭಾಗ್ಯ ಯೋಜನೆಯಡಿ ಪೂರೈಕೆಯಾದ ಹಾಲಿನ ಪುಡಿಯನ್ನು ಅಕ್ರಮವಾಗಿ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ ಖದೀಮರು ಬುಧವಾರ ರಾತ್ರಿ ಬೆಟಗೇರಿ ಪೊಲೀಸರು ಖಚಿತ ಮಾಹಿತಿ ಮೇರೆಗೆ ನಡೆಸಿದ ದಾಳಿಯಲ್ಲಿ ಸಿಕ್ಕಿ ಬಿದ್ದಿದ್ದಾರೆ.

ಬೆಟಗೇರಿ ಪೊಲೀಸ್ ಠಾಣೆಯ ಸಿಬ್ಬಂದಿ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳ ಜಂಟಿ ಕಾರ್ಯಾಚರಣೆಯಲ್ಲಿ ₹1 ಲಕ್ಷ 12 ಸಾವಿರ ರು. ಮೌಲ್ಯದ 313 ಕಿಲೋ ಹಾಲಿನ ಪುಡಿಯನ್ನು ವಶಕ್ಕೆ ಪಡೆಯಲಾಗಿದೆ.

ಮಿನಿ ಲಾರಿಯಲ್ಲಿ ತುಂಬಿಕೊಂಡು ಪಕ್ಕದ ರಾಜ್ಯಕ್ಕೆ ಸಾಗಿಸುತ್ತಿದ್ದ ವೇಳೆಯಲ್ಲಿ ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತೋಷ ಶಿಂಧೆ ಮತ್ತು ಖಾಜಾಹುಸೇನ್ ಎಂಬ ಇಬ್ಬರನ್ನು ಬಂಧಿಸಲಾಗಿದೆ. ಈ ಕುರಿತು ಬೆಟಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕ್ಷೀರ ಭಾಗ್ಯ ಯೋಜನೆಯ ಹಾಲಿನ ಪುಡಿ ಮಕ್ಕಳಿಗೆ ತಲುಪಬೇಕಿತ್ತು. ಆದರೆ ಇಷ್ಟೊಂದು ಪ್ರಮಾಣದಲ್ಲಿ ಹಾಲಿನ ಪುಡಿ ಎಲ್ಲಿಂದ ಬಂದಿದೆ, ಈ ಹಾಲಿನ ಪುಡಿಯನ್ನು ಮಾರಾಟ ಮಾಡಿದವರು ಯಾರು ಎನ್ನುವ ಬಗ್ಗೆ ತನಿಖೆಯಾಗಬೇಕಿದೆ.