ಸಾರಾಂಶ
ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಯ ಸಂಪೂರ್ಣ ತುಣುಕನ್ನು ಹಾಕದೇ ತಮಗೆ ಬೇಕಾದಷ್ಟು ಭಾಗಶಃ ವಿಡಿಯೋ ತುಣುಕನ್ನು ಬಳಸಿ, ಬೇರೆ ರೀತಿಯಲ್ಲಿ ಅರ್ಥೈಸುವಂತೆ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಅಂಬೇಡ್ಕರ್‌ಗೆ ಅವಮಾನಿಸಲಾಗಿದೆ ಎಂದು ಕಾಂಗ್ರೆಸ್ ಪಕ್ಷದ ವಿರುದ್ಧ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಕನ್ನಡಪ್ರಭ ವಾರ್ತೆ ಬೆಳಗಾವಿ
ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಯ ಸಂಪೂರ್ಣ ತುಣುಕನ್ನು ಹಾಕದೇ ತಮಗೆ ಬೇಕಾದಷ್ಟು ಭಾಗಶಃ ವಿಡಿಯೋ ತುಣುಕನ್ನು ಬಳಸಿ, ಬೇರೆ ರೀತಿಯಲ್ಲಿ ಅರ್ಥೈಸುವಂತೆ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಅಂಬೇಡ್ಕರ್‌ಗೆ ಅವಮಾನಿಸಲಾಗಿದೆ ಎಂದು ಆರೋಪಿಸುತ್ತಿರುವ ಕಾಂಗ್ರೆಸ್ ಪಕ್ಷದ ವಿರುದ್ಧ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಕಾಂಗ್ರೆಸ್ ಕಚೇರಿ ಎದುರೇ ಪ್ರತಿಭಟನೆ ನಡೆಸಿದರು. ಈ ವೇಳೆ ಕಾಂಗ್ರೆಸ್ ಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.ಸಮಾಜದಲ್ಲಿ ಗೊಂದಲ ಸೃಷ್ಟಿಸಿ ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ನಾಯಕರು ಅವಹೇಳನ ಮಾಡುತ್ತಿದ್ದಾರೆ. ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿ ಪ್ರತಿಭಟನಾನಿರತ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ, ಲಕ್ಷ್ಮಣ ತಪಸಿ, ಈರಣ್ಣ ಅಂಗಡಿ, ಮಹಾಂತೇಶ ಚಿನ್ನಪ್ಪಗೌಡ್ರ, ಮಹಾದೇವ ಧರೆನ್ನವರಧಿತರ ಇತರರನ್ನು ಪೊಲೀಸರು ವಶಕ್ಕೆ ಪಡೆದರು.