ಶಾಲಾ ಮಕ್ಕಳ ಸುರಕ್ಷತೆ ಪಾಲನೆಗೆ ಮಂಗಳೂರು ಪೊಲೀಸ್‌ ಕಮಿಷನರ್‌ ಸೂಚನೆ

| Published : May 29 2024, 12:47 AM IST

ಶಾಲಾ ಮಕ್ಕಳ ಸುರಕ್ಷತೆ ಪಾಲನೆಗೆ ಮಂಗಳೂರು ಪೊಲೀಸ್‌ ಕಮಿಷನರ್‌ ಸೂಚನೆ
Share this Article
  • FB
  • TW
  • Linkdin
  • Email

ಸಾರಾಂಶ

ಮೋಟಾರು ವಾಹನಗಳ ಕಾಯ್ದೆಯಂತೆ ಶಾಲಾ ಮಕ್ಕಳನ್ನು ಕರೆದೊಯ್ಯುವ ವಾಹನಗಳ ಸ್ಥಿತಿಗತಿ ಸೇರಿದಂತೆ 2012ರಲ್ಲಿ ಸೂಚಿಸಿರುವ ನಿಬಂಧನೆಗಳನ್ನು ಪಾಲಿಸಿ, ಶಾಲಾ-ಕಾಲೇಜುಗಳ ಮುಖ್ಯಸ್ಥರಿಗೆ ತಿಳಿಸಿ, ಪಾಲನಾ ವರದಿ ನೀಡುವಂತೆ ಅವರು ಸೂಚಿಸಿದರು.

ಕನ್ನಡಪ್ರಭ ವಾರ್ತೆ ಮಂಗಳೂರು

ಜೂನ್ ಮೊದಲ ವಾರದಲ್ಲಿ ಶಾಲಾ ಕಾಲೇಜುಗಳು ಆರಂಭಗೊಳ್ಳುತ್ತಿದ್ದು, ಎಲ್ಲ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ಮಕ್ಕಳ ಸುರಕ್ಷತೆಗೆ ಮೊದಲ ಆದ್ಯತೆ ನೀಡಬೇಕು ಎಂದು ನಗರ ಪೊಲೀಸ್ ಕಮಿಷನರ್‌ ಅನುಪಮ್ ಅಗರ್‌ವಾಲ್‌ ಸೂಚನೆ ನೀಡಿದರು.ಪೊಲೀಸ್ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ನಗರದ ಶಾಲಾ- ಕಾಲೇಜುಗಳ ಆಡಳಿತ ವರ್ಗ ಹಾಗೂ ಶಾಲಾ ವಾಹನಗಳ ಚಾಲಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಶಾಲಾ ವಾಹನಗಳಿಗೆ ಸಂಬಂಧಿಸಿದಂತೆ ಮೋಟಾರು ವಾಹನಗಳ ಕಾಯ್ದೆಯಂತೆ ಶಾಲಾ ಮಕ್ಕಳನ್ನು ಕರೆದೊಯ್ಯುವ ವಾಹನಗಳ ಸ್ಥಿತಿಗತಿ ಸೇರಿದಂತೆ 2012ರಲ್ಲಿ ಸೂಚಿಸಿರುವ ನಿಬಂಧನೆಗಳನ್ನು ಪಾಲಿಸಿ, ಶಾಲಾ-ಕಾಲೇಜುಗಳ ಮುಖ್ಯಸ್ಥರಿಗೆ ತಿಳಿಸಿ, ಪಾಲನಾ ವರದಿ ನೀಡುವಂತೆ ಅವರು ಸೂಚಿಸಿದರು.ಶಾಲಾ ಕಾಲೇಜು ವಾಹನಗಳಲ್ಲಿ ಪ್ರಯಾಣಿಸುವ ಮಕ್ಕಳ ಸುರಕ್ಷತೆಯ ಬಗ್ಗೆ ಚರ್ಚಿಸಲಾಯಿತು. ವಿಶೇಷವಾಗಿ ಮಳೆಗಾಲದ ಸಂದರ್ಭದಲ್ಲಿ ಶಾಲಾವಾಹನಗಳನ್ನು ಚಾಲಕರು ಎಲ್ಲೆಂದರಲ್ಲಿ ರಸ್ತೆಗಳಲ್ಲಿ ನಿಲುಗಡೆ ಮಾಡಿ ರಸ್ತೆಯಲ್ಲಿ ಸುಗಮ ವಾಹನ ಸಂಚಾರಕ್ಕೆ ತೊಂದರೆ ಮಾಡಬಾರದು. ರಸ್ತೆಯಲ್ಲಿ ಶಾಲಾ ವಾಹನಗಳನ್ನು ನಿಲ್ಲಿಸಿ ಶಾಲಾ ಮಕ್ಕಳನ್ನು ಇಳಿಸುವುದು/ಹತ್ತಿಸುವುದು ಮಾಡಬಾರದು. ಶಾಲಾ ವಾಹನಗಳಲ್ಲಿ ನಿಗದಿತ ಪ್ರಮಾಣಕ್ಕಿಂತ ಅಧಿಕ ಮಕ್ಕಳನ್ನು ಸಾಗಿಸಬಾರದು. ವಾಹನಗಳಲ್ಲಿ ಕರ್ಕಶ ಹಾರ್ನ್‌ಗಳನ್ನು ಬಳಸಲು ಅವಕಾಶವಿಲ್ಲ. ನಿಗದಿತ ಎಲ್ಲ ಸಂಚಾರ ನಿಯಮಗಳನ್ನು ಪಾಲನೆ ಮಾಡುವಂತೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಲಾಯಿತು. ಡಿಸಿಪಿ ದಿನೇಶ್ ಕುಮಾರ್, ಸಂಚಾರ ವಿಭಾಗ ಎಸಿಪಿ ನಜ್ಮಾ ಫಾರೂಕಿ ಮತ್ತಿತರರಿದ್ದರು.