ಸಾರಾಂಶ
ಮದ್ದೂರು ಪಟ್ಟಣದಲ್ಲಿ ಗುರುವಾರ ನಡೆಯಲಿರುವ ಸಾಮೂಹಿಕ ಗಣೇಶಮೂರ್ತಿಗಳ ವಿಸರ್ಜನೆ ಹಿನ್ನೆಲೆಯಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಪಟ್ಟಣದ ಕೆಮ್ಮಣ್ಣು ನಾಲೆ ಸರ್ಕಲ್ ಬಳಿ ಇರುವ ಮುಖ್ಯ ಮಸೀದಿ ಹಾಗೂ ಹೂವಿನ ಸರ್ಕಲ್ ಬಳಿ ಇರುವ ಮತ್ತೊಂದು ಮಸೀದಿಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಕನ್ನಡಪ್ರಭ ವಾರ್ತೆ ಮದ್ದೂರು
ಪಟ್ಟಣದಲ್ಲಿ ಗುರುವಾರ ನಡೆಯಲಿರುವ ಸಾಮೂಹಿಕ ಗಣೇಶಮೂರ್ತಿಗಳ ವಿಸರ್ಜನೆ ಹಿನ್ನೆಲೆಯಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.ಪಟ್ಟಣದ ಕೆಮ್ಮಣ್ಣು ನಾಲೆ ಸರ್ಕಲ್ ಬಳಿ ಇರುವ ಮುಖ್ಯ ಮಸೀದಿ ಹಾಗೂ ಹೂವಿನ ಸರ್ಕಲ್ ಬಳಿ ಇರುವ ಮತ್ತೊಂದು ಮಸೀದಿಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಜಿಲ್ಲಾ ಸಶಸ್ತ್ರ ಮೀಸಲು ಪಡೆ, ಕ್ಷಿಪ್ರ ಕಾರ್ಯಾಚರಣೆ ಪಡೆ, ಪೊಲೀಸರು ಸೇರಿದಂತೆ ಸುಮಾರು 1500ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.ನಾಲ್ವರು ಪೊಲೀಸ್ ವರಿಷ್ಠಾಧಿಕಾರಿಗಳು, ನಾಲ್ವರು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳು, 15 ಡಿವೈಎಸ್ಪಿಗಳು, 35 ಇನ್ಸ್ ಪೆಕ್ಟರ್ ಗಳು, 80 ಸಬ್ ಇನ್ಸ್ ಪೆಕ್ಟರ್ ಗಳು, 10 ಡಿಎಆರ್, 15 ಕೆಎಸ್ ಆರ್ ಪಿ ಸೇರಿದಂತೆ 1500ಕ್ಕೂ ಅಧಿಕ ಪೊಲೀಸರನ್ನು ಬಂದೋಬಸ್ತ್ ಗೆ ನಿಯೋಜನೆ ಮಾಡಲಾಗಿದೆ.
ಇಂದು 28 ಗಣೇಶ ಮೂರ್ತಿಗಳ ಸಾಮೂಹಿಕ ವಿಸರ್ಜನೆಕನ್ನಡಪ್ರಭ ವಾರ್ತೆ ಮಂಡ್ಯ
ಮದ್ದೂರಿನಲ್ಲಿ ಬುಧವಾರ ನಡೆಯಲಿರುವ ಸಾಮೂಹಿಕ ಗಣೇಶ ವಿಸರ್ಜನೆಯಲ್ಲಿ ಪಟ್ಟಣದ ವಿವಿಧೆಡೆ ಪ್ರತಿಷ್ಠಾಪಿಸಿರುವ 28 ಗಣಪತಿಗಳನ್ನು ವಿಸರ್ಜನೆ ಮಾಡಲಾಗುವುದು ಎಂದು ತಿಳಿದುಬಂದಿದೆ.ಸಾಮೂಹಿಕ ಗಣೇಶ ಮೂರ್ತಿಗಳ ವಿಸರ್ಜನಾ ಕಾರ್ಯಕ್ರಮಕ್ಕೆ ವಿಪಕ್ಷ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮುಖಂಡರಾದ ಸಿ.ಟಿ.ರವಿ, ಮಾಜಿ ಸಂಸದ ಪ್ರತಾಪ್‌ಸಿಂಹ, ಛಲವಾದಿ ನಾರಾಯಣಸ್ವಾಮಿ, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಮಾಜಿ ಸಚಿವರಾದ ಡಿ.ಸಿ.ತಮ್ಮಣ್ಣ, ಸಿ.ಎಸ್.ಪುಟ್ಟರಾಜು, ಮಾಜಿ ಶಾಸಕ ಡಾ.ಕೆ.ಅನ್ನದಾನಿ ಸೇರಿದಂತೆ ಹಲವು ಮುಖಂಡರು ಭಾಗವಹಿಸುವರು.
ಪಟ್ಟಣದ ಪ್ರವಾಸಿಮಂದಿರದ ಬಳಿಯಿಂದ ಡೊಳ್ಳು ಕುಣಿತ, ಪೂಜಾಕುಣಿತ ಸೇರಿದಂತೆ ಹಲವು ಜಾನಪದ ಕಲಾತಂಡಗಳೊಂದಿಗೆ ಮೆರವಣಿಗೆ ಸಾಗಲಿದೆ. ಅಲ್ಲಿಂದ ಹೊರಟ ಮೆರವಣಿಗೆ ಮದ್ದೂರು ಪುರಸಭೆ ಉದ್ಯಾನದ ಬಳಿ ಸಮಾವೇಶಗೊಂಡು ಅಲ್ಲಿ ಬಿಜೆಪಿ ನಾಯಕರು ಸಾರ್ವಜನಿಕನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಆನಂತರ ಪೇಟೆ ಬೀದಿ, ಎಂ.ಸಿ.ರಸ್ತೆ, ಕೊಲ್ಲಿ ಸರ್ಕಲ್ ಮೂಲಕ ಶ್ರೀ ಹೊಳೆ ಆಂಜನೇಯಸ್ವಾಮಿ ಬಳಿ ಎಲ್ಲಾ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಾಗುವುದು.