ಸಾರಾಂಶ
- ಕನ್ನಡ ಜಾಗೃತಿ ವೇದಿಕೆ ಪ್ರಧಾನ ಕಾರ್ಯದರ್ಶಿ ಕವಿತಾ ಪೇಟೆಮಠ ಆರೋಪ
- - - - ಅಕ್ರಮ ಪಡಿತರ ದಾಸ್ತಾನು ವಿರುದ್ಧ ದನಿಯೆತ್ತಿದ್ದ ಅಧ್ಯಕ್ಷ ಪ್ರವೀಣಕುಮಾರ್- ತಪ್ಪಿತಸ್ಥರ ವಿರುದ್ಧ ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು: ಅಧ್ಯಕ್ಷ ಆಗ್ರಹ - - - ಕನ್ನಡಪ್ರಭ ವಾರ್ತೆ ದಾವಣಗೆರೆ
ಗೋದಾಮಿನಲ್ಲಿ ಪಡಿತರ ಅಕ್ಕಿ, ರಾಗಿ ಅಕ್ರಮ ದಾಸ್ತಾನು ಮಾಡಿದ್ದ ಬಗ್ಗೆ ಧ್ವನಿ ಎತ್ತಿದ್ದ ಕನ್ನಡ ಜಾಗೃತಿ ವೇದಿಕೆ ಹರಿಹರ ತಾಲೂಕು ಅಧ್ಯಕ್ಷರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ, ಕೊಲೆಗೆ ಪ್ರಯತ್ನಿಸಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ವೇದಿಕೆ ರಾಜ್ಯ ಪ್ರಧಾನ ಕಾರ್ಯದರ್ಶಿ ಕವಿತಾ ಎಸ್. ಪೇಟೆಮಠ ಪೊಲೀಸ್ ಇಲಾಖೆಗೆ ಒತ್ತಾಯಿಸಿದರು.ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅ.24ರಂದು ಹರಿಹರದ ಗೋದಾಮುವೊಂದರಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಮತ್ತು ರಾಗಿ ಸಂಗ್ರಹ ಮಾಡಿದ್ದರು. ಈ ಬಗ್ಗೆ ವಿಷಯ ತಿಳಿದ ವೇದಿಕೆ ಹರಿಹರ ತಾಲೂಕು ಅಧ್ಯಕ್ಷ ಪ್ರವೀಣಕುಮಾರ ಅಲ್ಲಿಗೆ ಭೇಟಿ ನೀಡಿದ್ದರು. ಈ ವೇಳೆ ದಾಳಿ ಮಾಡಿ, ಕೊಲೆಗೆ ಪ್ರಯತ್ನಿಸಲಾಗಿದೆ ಎಂದು ದೂರಿದರು.
ಪಡಿತರ ಅಕ್ಕಿ, ರಾಗಿ ಸಂಗ್ರಹಿಸಿದ್ದ ವ್ಯಕ್ತಿಯು ಗೋದಾಮು ಬಳಿ ತೆರಳಿದ್ದ ಪ್ರವೀಣಕುಮಾರ ಮೇಲೆ ಹರಿತ ಚಾಕುವಿನಿಂದ ದಾಳಿ ಮಾಡಿದ್ದು, ಕೊಲೆಗೆ ಪ್ರಯತ್ನಿಸಿದ್ದಾರೆ. ಘಟನೆಯಲ್ಲಿ ಪ್ರವೀಣಕುಮಾರ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಬಗ್ಗೆ ಹರಿಹರ ನಗರ ಪೊಲೀಸ್ ಠಾಣೆಗೆ ಅ.25ರಂದು ಹೋಗಿ, ದೂರು ನೀಡಿದರೆ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳಲು ಹಿಂದೇಟು ಹಾಕಿದ್ದಾರೆ. ಹಲ್ಲೆ ಮಾಡಿದವರ ವಿರುದ್ಧ ಕ್ರಮ ಜರುಗಿಸುವಂತೆ ಆಗ್ರಹಿಸಿದರು.ಹಲ್ಲೆಗೊಳಗಾದ ಪ್ರವೀಣಕುಮಾರ ಮಾತನಾಡಿ, ಈ ಮುಂಚೆ ಅಕ್ರಮ ಪಡಿತರ ಅಕ್ಕಿ ಅಕ್ರಮ ಸಾಗಾಣಿಕೆ ಮಾಡುತ್ತಿದ್ದುದನ್ನು ಪತ್ತೆ ಮಾಡಲಾಗಿತ್ತು. ಮತ್ತೆ ಅದೇ ದಂಧೆ ಮುಂದುವರಿಸಿದ್ದ ಬಗ್ಗೆ ತಮಗೆ ಮಾಹಿತಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಹೋಗಿದ್ದಾಗ ತಮ್ಮ ಮೇಲೆ ಹಲ್ಲೆ ನಡೆಸಿ, ಕೊಲೆ ಬೆದರಿಕೆ ಹಾಕಲಾಗಿದೆ. ಈ ಬಗ್ಗೆ ಹರಿಹರ ನಗರ ಪೊಲೀಸ್ ಠಾಣೆಗೆ ದೂರು ನೀಡಿದರೆ, ಬೇರೆಯವರು ನೀಡಿದ ದೂರನ್ನು ದಾಖಲಿಸಿಕೊಂಡ ಪೊಲೀಸರು, ಸ್ಥಳದಲ್ಲಿ ನಾನು ಇದ್ದೆ ಎಂಬುದನ್ನಷ್ಟೇ ತೋರಿಸಿದ್ದಾರೆ ಎಂದು ಆರೋಪಿಸಿದರು.
ನನ್ನ ಮೇಲೆ ಹಲ್ಲೆ ನಡೆಸಿದವರ ಬಗ್ಗೆ ಬೇರೆಯವರ ದೂರಿನಲ್ಲೂ ಪೊಲೀಸರು ತೋರಿಸಿಲ್ಲ. ನಾನು ಕೊಟ್ಟ ದೂರನ್ನು ಪೊಲೀಸರು ದಾಖಲಿಸಿಕೊಳ್ಳುತ್ತಿಲ್ಲ. ತಮ್ಮ ಮೇಲೆ ಹಲ್ಲೆ ಮಾಡಿ, ಕೊಲೆ ಬೆದರಿಕೆ ಹಾಕಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹರಿಹರ ಪೊಲೀಸರಿಗೆ ಆಗ್ರಹಿಸಿದರು.ಮುಖಂಡರಾದ ಗೀತಾ, ಸಿ.ಶ್ರೀನಿವಾಸ, ಮಹಮ್ಮದ್ ಗೌಸ್ ಇತರರು ಇದ್ದರು.
- - --27ಕೆಡಿವಿಜಿ4:
ದಾವಣಗೆರೆಯಲ್ಲಿ ಭಾನುವಾರ ಕನ್ನಡ ಜಾಗೃತಿ ವೇದಿಕೆ ರಾಜ್ಯ ಪ್ರಧಾನ ಕಾರ್ಯದರ್ಶಿ ಕವಿತಾ ಎಸ್. ಪೇಟೆಮಠ, ಹರಿಹರ ತಾಲೂಕು ಅಧ್ಯಕ್ಷ ಪ್ರವೀಣಕುಮಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.