ಸಾರಾಂಶ
ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರು ಸದಾ ಸಿದ್ಧರಾಗಿರಬೇಕು. ಇದಕ್ಕೆ ದೈಹಿಕ ಸಾಮರ್ಥ್ಯ ಹಾಗೂ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿದೆ ಎಂದು ಬೆಳಗಾವಿ ಉತ್ತರ ವಲಯದ ಐಜಿಪಿ ವಿಕಾಸಕುಮಾರ ವಿಕಾಶ್ ಹೇಳಿದರು.
ಕನ್ನಡಪ್ರಭ ವಾರ್ತೆ ಬೆಳಗಾವಿಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರು ಸದಾ ಸಿದ್ಧರಾಗಿರಬೇಕು. ಇದಕ್ಕೆ ದೈಹಿಕ ಸಾಮರ್ಥ್ಯ ಹಾಗೂ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿದೆ ಎಂದು ಬೆಳಗಾವಿ ಉತ್ತರ ವಲಯದ ಐಜಿಪಿ ವಿಕಾಸಕುಮಾರ ವಿಕಾಶ್ ಹೇಳಿದರು.
ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಮಂಗಳವಾರ ಕರ್ನಾಟಕ ರಾಜ್ಯ ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆ ಕಾಪಾಡಲು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ವರದಿ ನೀಡಬೇಕು. ಸದಾ ಒತ್ತಡದಲ್ಲಿ ಕೆಲಸ ಮಾಡುವ ಪೊಲೀಸರು ಸದಾ ಯೋಗ, ವ್ಯಾಯಾಮ ಹಾಗೂ ಸತತವಾಗಿ ಕ್ರೀಡೆಯಲ್ಲಿ ಭಾಗಿಯಾಗಬೇಕು. ಕೇವಲ ಪೊಲೀಸರು ಮಾತ್ರವಲ್ಲ. ನಮ್ಮ ಕುಟುಂಬದ ಮನೆಯವರಿಗೂ ಈ ಅಭ್ಯಾಸ ರೂಢಿ ಮಾಡಿಸಬೇಕು ಎಂದು ತಿಳಿಸಿದರು.ಪ್ರತಿನಿತ್ಯ ಪೊಲೀಸ್ ಆಡಳಿತದಲ್ಲಿ ಬದಲಾವಣೆ ಬರುತ್ತಿವೆ. ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುವಾಗ ಸಾಕಷ್ಟು ತೊಂದರೆ ಬರುತ್ತದೆ. ಇಲ್ಲಿ ಒಬ್ಬರೆ ಕೆಲಸ ಮಾಡಲು ಸಾಧ್ಯವಿಲ್ಲ. ನಾವೆಲ್ಲರೂ ಒಂದು ತಂಡವಾಗಿ ಕೆಲಸ ಮಾಡಿದರೆ ಎಂತಹದ್ದೇ ಪರಿಸ್ಥಿತಿ ಬಂದರೂ ಎದುರಿಸಲು ಸಾಧ್ಯವಾಗುತ್ತದೆ ಎಂದರು.
ಮುಖ್ಯ ಅತಿಥಿಗಳಾಗಿ ನಿವೃತ್ತ ಪೊಲೀಸ್ ಇನ್ಸ್‌ಸ್ಪೆಕ್ಟರ್ ಶ್ರೀನಿವಾಸ ಹಂಡಾ, ನಿವೃತ್ತ ಎಎಸ್‌ಐ ಇಮಾಮಸಾಬ್ ವಣ್ಣೂರ ಆಗಮಿಸಿದ್ದರು. ಈ ಸಂದರ್ಭದಲ್ಲಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ಡಿಸಿಪಿಗಳಾದ ರೋಹನ್ ಜಗದೀಶ್, ಸ್ನೇಹಾ ಪಿ.ವಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.