ಶುಕ್ರವಾರ ರೈತರಿಂದ ಹೆದ್ದಾರಿ ತಡೆ ಪ್ರತಿಭಟನೆ ಹಿನ್ನೆಲೆ ಮೈಸೂರಿಗೆ ತೆರಳುವ ವಾಹನಗಳ ಸುಗಮ ಸಂಚಾರಕ್ಕಾಗಿ ತಾಲೂಕಿನ ಗೆಜ್ಜಲಗೆರೆ ಸಮೀಪದ ಐಶ್ವರ್ಯ ಕಾನ್ವೆಂಟ್ ಬಳಿ ಸರ್ಕಲ್ ಇನ್ಸ್ ಪೆಕ್ಟರ್ ನವೀನ್ ಹಾಗೂ ಪಿಎಸ್ಐ ರಸುಲ್ ನೇತೃತ್ವದಲ್ಲಿ ಕಾನೂನು ಶಿಸ್ತು ವಿಭಾಗ ಮತ್ತು ಸಂಚಾರಿ ಠಾಣೆ ಪೊಲೀಸ್ ಸಿಬ್ಬಂದಿ ಬೆಂಗಳೂರಿನಿಂದ ಬರುತ್ತಿದ್ದ ವಾಹನಗಳನ್ನು ತಡೆದು ಸರ್ವೀಸ್ ರಸ್ತೆ ಮೂಲಕ ಮಂಡ್ಯ ಮಾರ್ಗವಾಗಿ ಮೈಸೂರಿಗೆ ತೆರಳಲು ವ್ಯವಸ್ಥೆ ಕಲ್ಪಿಸಿದರು.
ಮದ್ದೂರು: ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸುವುದು ಹಾಗೂ ಕೃಷಿ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ರೈತರು ಶ್ರೀರಂಗಪಟ್ಟಣ ಸಮೀಪದ ಗಣಂಗೂರು ಟೋಲ್ ಬಳಿ ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ ಹಿನ್ನೆಲೆ ಮದ್ದೂರು ಪೊಲೀಸರು ಮೈಸೂರಿಗೆ ತೆರಳುತ್ತಿದ್ದ ವಾಹನಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಮೂಲಕ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿದರು.
ಶುಕ್ರವಾರ ರೈತರಿಂದ ಹೆದ್ದಾರಿ ತಡೆ ಪ್ರತಿಭಟನೆ ಹಿನ್ನೆಲೆ ಮೈಸೂರಿಗೆ ತೆರಳುವ ವಾಹನಗಳ ಸುಗಮ ಸಂಚಾರಕ್ಕಾಗಿ ತಾಲೂಕಿನ ಗೆಜ್ಜಲಗೆರೆ ಸಮೀಪದ ಐಶ್ವರ್ಯ ಕಾನ್ವೆಂಟ್ ಬಳಿ ಸರ್ಕಲ್ ಇನ್ಸ್ ಪೆಕ್ಟರ್ ನವೀನ್ ಹಾಗೂ ಪಿಎಸ್ಐ ರಸುಲ್ ನೇತೃತ್ವದಲ್ಲಿ ಕಾನೂನು ಶಿಸ್ತು ವಿಭಾಗ ಮತ್ತು ಸಂಚಾರಿ ಠಾಣೆ ಪೊಲೀಸ್ ಸಿಬ್ಬಂದಿ ಬೆಂಗಳೂರಿನಿಂದ ಬರುತ್ತಿದ್ದ ವಾಹನಗಳನ್ನು ತಡೆದು ಸರ್ವೀಸ್ ರಸ್ತೆ ಮೂಲಕ ಮಂಡ್ಯ ಮಾರ್ಗವಾಗಿ ಮೈಸೂರಿಗೆ ತೆರಳಲು ವ್ಯವಸ್ಥೆ ಕಲ್ಪಿಸಿದರು.ಅಲ್ಲದೆ ಮದ್ದೂರು ಪ್ರವಾಸಿ ಮಂದಿರ ವೃತ್ತದಿಂದ ಮಳವಳ್ಳಿ - ಬನ್ನೂರು ಮಾರ್ಗವಾಗಿ ಮೈಸೂರಿಗೆ ತೆರಳಲು ಪೊಲೀಸರು ವಾಹನಗಳ ಚಾಲಕರಿಗೆ ಮಾರ್ಗದರ್ಶನ ನೀಡಿದರು.
--------------23ಕೆಎಂಎನ್ ಡಿ19
ಮದ್ದೂರಿನಲ್ಲಿ ಪೊಲೀಸರು ಮೈಸೂರಿಗೆ ತೆರಳುವ ವಾಹನಗಳ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿದರು.