ಪೊಲೀಸರು ಕರ್ತವ್ಯ ನಿಷ್ಠಯಿಂದ ಕೆಲಸ ಮಾಡಿ: ಪ್ರಿಯಾಂಕ್‌ ಖರ್ಗೆ

| Published : Dec 01 2024, 01:31 AM IST

ಪೊಲೀಸರು ಕರ್ತವ್ಯ ನಿಷ್ಠಯಿಂದ ಕೆಲಸ ಮಾಡಿ: ಪ್ರಿಯಾಂಕ್‌ ಖರ್ಗೆ
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯ, ಜಿಲ್ಲೆಗೆ ಒಳ್ಳೆ ಹೆಸರು ಬರುವಂತೆ ಕಾರ್ಯ ನಿರ್ವಹಿಸಬೇಕು ಎಂದು ಪ್ರಶಿಕ್ಷಣಾರ್ಥಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಕಿವಿಮಾತು ಹೇಳಿದರು. ನಗರದ ನಾಗನಹಳ್ಳಿಯ ಪೊಲೀಸ್‌ ತರಬೇತಿ ಕೇಂದ್ರದಲ್ಲಿ 7.13 ಕೋಟಿ ರು. ವೆಚ್ಚದಲ್ಲಿ ನಿರ್ಮಿಸಲಾದ ನೂತನ ಸಭಾಂಗಣ ಹಾಗೂ ಒಳಾಂಗಣ ಬ್ಯಾಡ್ಮಿಂಟನ್ ಕೋರ್ಟ್ ಉದ್ಘಾಟನೆ ನಡೆಯಿತು.

ಕನ್ನಡಪ್ರಭ ವಾರ್ತೆ ಕಲಬುರಗಿ

ಗೃಹ ಇಲಾಖೆಯಲ್ಲಿ ನೇಮಕಗೊಂಡು ಅಗತ್ಯ ತರಬೇತಿ ಪಡೆದು ಕರ್ತವ್ಯಕ್ಕೆ ಸಜ್ಜಾಗಿರುವ ಪೊಲೀಸ್‌ ಅಧಿಕಾರಿ ಹಾಗೂ ಸಿಬ್ಬಂದಿ ಕರ್ತವ್ಯ ನಿಷ್ಟೆಯಿಂದ ಕೆಲಸ ಮಾಡುವ ಮೂಲಕ ರಾಜ್ಯಕ್ಕೆ ಮತ್ತು ಜಿಲ್ಲೆಗೆ ಹೆಸರು ತರುವ ಕೆಲಸ ಮಾಡಬೇಕು ಎಂದು ಪ್ರಶಿಕ್ಷಣಾರ್ಥಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಕಿವಿಮಾತು ಹೇಳಿದರು.

ನಗರದ ನಾಗನಹಳ್ಳಿಯ ಪೊಲೀಸ್‌ ತರಬೇತಿ ಕೇಂದ್ರದಲ್ಲಿ 7.13 ಕೋಟಿ ರು. ವೆಚ್ಚದಲ್ಲಿ ನಿರ್ಮಿಸಲಾದ ನೂತನ ಸಭಾಂಗಣ ಹಾಗೂ ಒಳಾಂಗಣ ಬ್ಯಾಡ್ಮಿಂಟನ್ ಕೋರ್ಟ್ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ನಗರ ಕುಡಿಯುವ ನೀರು ವಿಭಾಗಕ್ಕೆ 900 ಜನ ಎಂಜಿನಿಯರ್‌ಗಳನ್ನು ನೇಮಕಾತಿ ಮಾಡಲಾಗಿದೆ. ಅವರಿಗೆ ನಾನೇ ಖುದ್ದಾಗಿ ನೇಮಕಾತಿ ಆದೇಶ ನೀಡುವ ಮೂಲಕ ಹೇಗೆ ಆಡಳಿತದಲ್ಲಿ ಸಾರ್ವಜನಿಕರ ಸೇವೆ ಮಾಡಬೇಕು ಎಂದು ಅವರಿಗೆ ಹೇಳುತ್ತಿದ್ದೇನೆ. ಇಲ್ಲಿ ನಿಮಗೂ ಕೂಡಾ ಇದೇ ಮಾತನ್ನೇ ಹೇಳುತ್ತಿದ್ದೇನೆ ಎಂದ ಸಚಿವರು, ನಾಗನಹಳ್ಳಿಯಲ್ಲಿ ಪೊಲೀಸ್‌ ತರಬೇತಿ ಮಹಾವಿದ್ಯಾಲಯ ಸ್ಥಾಪನೆ ಮಾಡುವುದು ಡಾ.ಮಲ್ಲಿಕಾರ್ಜುನ ಖರ್ಗೆ ಅವರ ಕನಸಾಗಿತ್ತು. ಅದರಂತೆ ಪೊಲೀಸ್‌ ತರಬೇತಿ ಕೇಂದ್ರ ನಮ್ಮ ಭಾಗದ ಹೆಮ್ಮೆಯ ಗುರುತಾಗಿ ಇದೀಗ ನಿಂತಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಅಲ್ಲಮಪ್ರಭು ಪಾಟೀಲ್ ಮಾತನಾಡಿ, ಪೊಲೀಸ್ ಇಲಾಖೆಯಲ್ಲಿ ಕಷ್ಟಪಟ್ಟು ಕೆಲಸ ಮಾಡಬೇಕಾಗುತ್ತದೆ. ಸಹನೆ ಹಾಗೂ ಸೇವಾ ಮನೋಭಾವದಿಂದ ಕೆಲಸ ಮಾಡಿ ಎಂದರು.

ವಿಧಾನ ಪರಿಷತ್ ಶಾಸಕರಾಸ ತಿಪ್ಪಣ್ಣಪ್ಪ ಕಮಕನೂರು, ಬಿ.ಜಿ.ಪಾಟೀಲ, ಜಗದೇವ ಗುತ್ತೇದಾರ, ಸಾಬಣ್ಣ ತಳವಾರ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಜರ್ ಆಲಂಖಾನ್, ಕೆಕೆಆರ್ ಡಿಬಿ ಕಾರ್ಯದರ್ಶಿ ಎಂ.ಸುಂದರೇಶ್ ಬಾಬು, ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್, ನಗರ ಪೊಲೀಸ್‌ ಆಯುಕ್ತ ಡಾ.ಎಸ್.ಡಿ.ಶರಣಪ್ಪ, ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ, ನಾಗನಹಳ್ಳಿ ಪಿ.ಟಿ.ಸಿ ಎಸ್.ಪಿ ಮತ್ತು ಪ್ರಾಂಶುಪಾಲ ಡೆಕ್ಕಾ ಕಿಶೋರ್ ಬಾಬು ಸೇರಿದಂತೆ ಹಲವರಿದ್ದರು.