ಕನ್ನಡಪ್ರಭ ವಾರ್ತೆ ಬೆಳಗಾವಿನಗರದಲ್ಲಿ ಅಕ್ರಮವಾಗಿ ಮದ್ಯ ಮಾರಾಟ, ಸೇವನೆಗೆ ಅವಕಾಶ ಕಲ್ಪಿಸಿದ ಹಾಗೂ ನಿಗದಿತ ಸಮಯ ಮೀರಿ ಕರ್ಕಶ ಧ್ವನಿವರ್ಧಕ ಬಳಸಿದ ಹೋಟೆಲ್, ಬಾರ್, ಕ್ಲಬ್ ಮತ್ತು ಪಬ್‌ಗಳ ವಿರುದ್ಧ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ 15 ಪ್ರಕರಣ ದಾಖಲಿಸಿದ್ದಾರೆ.

ಅ.10ರಂದು ರಾತ್ರಿ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ಡಿಸಿಪಿಗಳ ನೇತೃತ್ವದಲ್ಲಿ ನಗರದ ಸುಮಾರು 60 ಸ್ಥಳಗಳಲ್ಲಿ ದಾಳಿ ನಡೆಸಿ ಪರಿಶೀಲನೆ ಕೈಗೊಳ್ಳಲಾಯಿತು. ಈ ವೇಳೆ ನಿಯಮ ಉಲ್ಲಂಘಿಸಿದ ಹೋಟೆಲ್, ಬಾರ್, ಕ್ಲಬ್ ಮತ್ತು ಪಬ್‌ಗಳ ವ್ಯವಸ್ಥಾಪಕರು ಹಾಗೂ ಮಾಲೀಕರ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಕರ್ನಾಟಕ ಪೊಲೀಸ್ ಕಾಯ್ದೆ, ಅಬಕಾರಿ ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತೆಯಡಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣಗಳ ತನಿಖೆ ಮುಂದುವರಿದಿದೆ. ನಗರದಲ್ಲಿ ಇಂತಹ ಅಕ್ರಮ ಚಟುವಟಿಕೆಗಳು ಕಂಡುಬಂದಲ್ಲಿ ಸಾರ್ವಜನಿಕರು ಪೊಲೀಸ್ ಕಂಟ್ರೋಲ್ ರೂಂ ಅಥವಾ ತುರ್ತು ಸಹಾಯವಾಣಿ 112ಕ್ಕೆ ಕರೆ ಮಾಡಿ ಮಾಹಿತಿ ನೀಡುವಂತೆ ಪೊಲೀಸ್ ಆಯುಕ್ತರು ಮನವಿ ಮಾಡಿದ್ದಾರೆ.