ಈ ಸಂಬಂಧ ಅನೇಕ ಬಾರಿ ಹೆಲ್ಮೆಟ್ ಧರಿಸುವುದರ ಬಗ್ಗೆ ಅರಿವು ಮೂಡಿಸುವಂತಹ ಕೆಲಸ ಮಾಡಿದ್ದರೂ ಸಹ ಬೈಕ್ ಸವಾರರ ನಿರ್ಲಕ್ಷ್ಯ ಧೋರಣೆಯಿಂದ ಕಾನೂನು ಉಲ್ಲಂಘಿಸಿ ರಸ್ತೆಯಲ್ಲಿ ಸಂಚರಿಸುವುದರಿಂದ ಅಪಘಾತಗಳು ಸಂಭವಿಸಿ ಸಾವು ನೋವುಗಳ ಸಂಖ್ಯೆ ಹೆಚ್ಚಾಗುತ್ತಿವೆ.
ಬಾಗೇಪಲ್ಲಿ: ಪೊಲೀಸರು ಎಷ್ಟೇ ಜಾಗೃತಿ ಮೂಡಿಸಿದರೂ ಹೆಲ್ಮೆಟ್ ಧರಿಸದೇ ರಸ್ತೆಯಲ್ಲಿ ಓಡಾಡುವ ಸವಾರರ ಸಂಖ್ಯೆ ಹೆಚ್ಚಾಗುತ್ತಿರುವ ಪರಿಣಾಮ ಅಪಘಾತಗಳು ಸಂಭವಿಸಿ, ಸಾವು ನೋವಿನ ಸಂಖ್ಯೆಯೂ ಸಹ ಹೆಚ್ಚಾಗುತ್ತಿರುವ ಹಿನ್ನೆಲೆ ಪ್ರಾಣ ಹಾನಿ ತಪ್ಪಿಸುವ ನಿಟ್ಟಿನಲ್ಲಿ ಡಿಸೆಂಬರ್ 12ರಿಂದ ಬೈಕ್ ಸವಾರರಿಗೆ ಹೆಲ್ಮೆಟ್ ಕಡ್ಡಾಯವಾಗಿ ಜಾರಿಯಾಗುವ ನಿಟ್ಟಿನಲ್ಲಿ ಬಾಗೇಪಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಪ್ರಶಾಂತ್ ವರ್ಣಿ ನೇತೃತ್ವದಲ್ಲಿ ಹೆಲ್ಮೆಟ್ ಧರಿಸಿದ ಪೊಲೀಸ್ ಸಿಬ್ಬಂದಿ ಪಟ್ಟಣದ ಮುಖ್ಯರಸ್ತೆಯಲ್ಲಿ ಬೈಕ್ ರ್‍ಯಾಲಿ ನಡೆಸುವ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು.
ಇನ್ಸ್‍ಪೆಕ್ಟರ್ ಪ್ರಶಾಂತ್ ವರ್ಣಿ ಮಾತನಾಡಿ, ಹೆಲ್ಮೆಟ್ ಇಲ್ಲದೆ ಬೈಕ್ ಚಲಾಯಿಸುವುದು ಕಾನೂನಿನ ಪ್ರಕಾರ ಅಪರಾಧ, ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು, ಹೆಲ್ಮೆಟ್ ಧರಿಸುವುದರಿಂದ ಪ್ರಾಣಹಾನಿಯನ್ನು ತಪ್ಪಿಸಬಹುದು.ಈ ಸಂಬಂಧ ಅನೇಕ ಬಾರಿ ಹೆಲ್ಮೆಟ್ ಧರಿಸುವುದರ ಬಗ್ಗೆ ಅರಿವು ಮೂಡಿಸುವಂತಹ ಕೆಲಸ ಮಾಡಿದ್ದರೂ ಸಹ ಬೈಕ್ ಸವಾರರ ನಿರ್ಲಕ್ಷ್ಯ ಧೋರಣೆಯಿಂದ ಕಾನೂನು ಉಲ್ಲಂಘಿಸಿ ರಸ್ತೆಯಲ್ಲಿ ಸಂಚರಿಸುವುದರಿಂದ ಅಪಘಾತಗಳು ಸಂಭವಿಸಿ ಸಾವು ನೋವುಗಳ ಸಂಖ್ಯೆ ಹೆಚ್ಚಾಗುತ್ತಿವೆ. ರಸ್ತೆ ಅಪಘಾತ ತಡೆ ನಿಟ್ಟಿನಲ್ಲಿ ಡಿಸೆಂಬರ್ 12ರಿಂದ ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಎನ್ನುವ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವ ಹಿನ್ನೆಲೆ ಸವಾರರಿಗೆ ಅರಿವು ಮೂಡಿಸಲಾಗುತ್ತಿದೆ. ಡಿ. 12ರಿಂದ ಹೆಲ್ಮೆಟ್ ಧರಿಸದೆ ರಸ್ತೆಗಿಳಿಯುವ ಬೈಕ್ ಸವಾರರಿಗೆ ದಂಡ ವಿಧಿಸುವುದರ ಜೊತೆಗೆ ವಾಹನ ವಶಕ್ಕೆ ಪಡೆಯುವುದಾಗಿ ಎಚ್ಚರಿಕೆ ನೀಡಿದರು.
ಪೊಲೀಸ್ ಸಿಬ್ಬಂದಿ ಶ್ರೀನಿವಾಸ್, ಆನಂದ್, ಧನಂಜಯ ಕುಮಾರ್, ಪಿ.ಮುನಿರತ್ನಂ, ಬಯ್ಯರೆಡ್ಡಿ ಸೇರಿ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಇದ್ದರು.