ಸಾರಾಂಶ
ಪೊಲೀಸರು ಹಬ್ಬಗಳನ್ನು ಆಚರಿಸದೇ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಗಲಿರುಳು ಸೇವೆ ಸಲ್ಲಿಸುತ್ತಿರುವ ಕಾರ್ಯ ಅಭಿನಂದನೀಯ. ದೇಶದ ರಕ್ಷಣೆಗಾಗಿ ಹುತಾತ್ಮರಾದ ಪೊಲೀಸರ ತ್ಯಾಗ, ಬಲಿದಾನವನ್ನು ಎಲ್ಲರೂ ಸ್ಮರಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು.
ಕನ್ನಡಪ್ರಭ ವಾರ್ತೆ ಬೆಳಗಾವಿ
ಪೊಲೀಸರು ಹಬ್ಬಗಳನ್ನು ಆಚರಿಸದೇ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಗಲಿರುಳು ಸೇವೆ ಸಲ್ಲಿಸುತ್ತಿರುವ ಕಾರ್ಯ ಅಭಿನಂದನೀಯ. ದೇಶದ ರಕ್ಷಣೆಗಾಗಿ ಹುತಾತ್ಮರಾದ ಪೊಲೀಸರ ತ್ಯಾಗ, ಬಲಿದಾನವನ್ನು ಎಲ್ಲರೂ ಸ್ಮರಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು. ನಗರದ ಪೊಲೀಸ್ ಕಮಿಷನರೇಟ್ ಹಾಗೂ ಜಿಲ್ಲಾ ಪೊಲೀಸ್ ಇಲಾಖೆಯಿಂದ ಡಿಎಆರ್ ಮೈದಾನದಲ್ಲಿ ಮಂಗಳವಾರ ನಡೆದ ಪೊಲೀಸ್ ಹುತಾತ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪೊಲೀಸ್ ಇಲಾಖೆಗೆ ಜಿಲ್ಲಾಡಳಿತ ಸದಾ ಪ್ರಾಶಸ್ತ್ಯ ನೀಡುತ್ತಾ ಬಂದಿದೆ. ನಿಮ್ಮೊಂದಿಗೆ ನಾವು ಸದಾ ಇದ್ದೇವೆ ಎಂದು ಹೇಳಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ನಗರ ಪೊಲೀಸ್ ಆಯುಕ್ತ ಭೂಷಣ್ ಬೊರಸೆ ಅವರು ಹುತಾತ್ಮ ಪೊಲೀಸರನ್ನು ಸ್ಮರಿಸಿದರು. ಇದೇ ವೇಳೆ ಆಕರ್ಷಕವಾಗಿ ಪಥಸಂಚಲನ ನಡೆಸಿದ ಪೊಲೀಸರು, ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸುವ ಮೂಲಕ ಗೌರವ ಸಲ್ಲಿಸಿದರು. ನಗರ ಉಪ ಆಯುಕ್ತ ನಾರಾಯಣ ಭರಮನಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಬಿ.ಬಸರಗಿ ಸೇರಿದಂತೆ ಇತರರು ಇದ್ದರು.