ಬಡವರ ಹಸಿವು ನೀಗಿಸಬೇಕಾದ ಅನ್ನಭಾಗ್ಯ ಅಕ್ಕಿಯನ್ನೇ ಅಕ್ರಮವಾಗಿ ಸಂಗ್ರಹಿಸಿ ಮಾರಾಟ ಮಾಡುತ್ತಿರುವ ದೊಡ್ಡ ಜಾಲವನ್ನು ಕೊಪ್ಪಳ ಪೊಲೀಸರು ಮತ್ತು ಆಹಾರ ಇಲಾಖೆ ಅಧಿಕಾರಿಗಳು ಪತ್ತೆ ಮಾಡಿದ್ದಾರೆ.
ಕನ್ನಡಪ್ರಭ ವಾರ್ತೆ ಕೊಪ್ಪಳ:
ಬಡವರ ಹಸಿವು ನೀಗಿಸಬೇಕಾದ ಅನ್ನಭಾಗ್ಯ ಅಕ್ಕಿಯನ್ನೇ ಅಕ್ರಮವಾಗಿ ಸಂಗ್ರಹಿಸಿ ಮಾರಾಟ ಮಾಡುತ್ತಿರುವ ದೊಡ್ಡ ಜಾಲವನ್ನು ಕೊಪ್ಪಳ ಪೊಲೀಸರು ಮತ್ತು ಆಹಾರ ಇಲಾಖೆ ಅಧಿಕಾರಿಗಳು ಪತ್ತೆ ಮಾಡಿದ್ದಾರೆ.ತಾಲೂಕಿನ ಕೂಕನಪಳ್ಳಿ ಗ್ರಾಮದ ಬಳಿ ಜಮೀನೊಂದರಲ್ಲಿ 150 ಟನ್‌ಗೂ ಅಧಿಕ ಅನ್ನಭಾಗ್ಯ ಅಕ್ಕಿ ಸಂಗ್ರಹಿಸಿಟ್ಟಿರುವ ಖಚಿತ ಮಾಹಿತಿ ಆಧಾರದಲ್ಲಿ ದಾಳಿ ಮಾಡಿ ಪತ್ತೆ ಮಾಡಲಾಗಿದೆ. ಪತ್ತೆಯಾಗಿರುವ ಅಕ್ರಮ ಅಕ್ಕಿಯ ಮೂಟೆಗಳ ಲೆಕ್ಕ ಹಾಕಲಾಗುತ್ತಿದೆ. ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಗ್ರಾಮದ ಯಮನೂರಪ್ಪ ಮತ್ತು ಗಾಳೆಪ್ಪ ಎನ್ನುವವರ ವಿರುದ್ಧ ಪ್ರಕರಣ ಎಫ್‌ಐಆರ್ ದಾಖಲಾಗಿದೆ.
ಚಿಕ್ಕಮಗಳೂರಲ್ಲೂ ಅಕ್ರಮ ಅಕ್ಕಿ ಪತ್ತೆ:ಆಟೋ ಚಾಲಕ ಹಾಗೂ ಮತ್ತೊಬ್ಬ ಚಿಕ್ಕಮಗಳೂರು ಜಿಲ್ಲೆ ತೇಗೂರು ಗ್ರಾಮದ ಜನರಿಂದ ಅನ್ನಭಾಗ್ಯದ ಅಕ್ಕಿ ಸಂಗ್ರಹಿಸಿ, ನಗರದ ಅಂಗಡಿಯೊಂದಕ್ಕೆ ಮಾರಾಟ ಮಾಡಲು ಯತ್ನಿಸುತ್ತಿದ್ದರು. ಈ ವೇಳೆ ಸುಮಾರು 4 ಟನ್ ಅನ್ನಭಾಗ್ಯದ ಅಕ್ಕಿ ಪತ್ತೆಯಾಗಿದೆ.