ಸಾರಾಂಶ
ಹೊಸಪೇಟೆ: ದೇಶದ ರಕ್ಷಣೆಯಲ್ಲಿ ಸೈನಿಕರು ಮತ್ತು ಪೊಲೀಸರ ಸೇವೆ ಅವಿಸ್ಮರಣೀಯವಾಗಿದೆ ಎಂದು ವಿಜಯನಗರ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ಯಾಲಯದ ಆವರಣದಲ್ಲಿ ಮಂಗಳವಾರ ನಡೆದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪೊಲೀಸರು ಕಾನೂನು ಸುವ್ಯವಸ್ಥೆ ಕಾಪಾಡಲು ಮತ್ತು ಪ್ರತಿಯೊಬ್ಬ ನಾಗರಿಕರನ್ನು ರಕ್ಷಿಸಲು ಅಪಾರ ಕೊಡುಗೆ ನೀಡಿದ್ದಾರೆ. ಸೈನಿಕರು ದೇಶದ ಗಡಿಯಲ್ಲಿ ಸೇವೆ ಸಲ್ಲಿಸಿ ದೇಶವನ್ನು ರಕ್ಷಣೆ ಮಾಡಿದರೆ, ಪೊಲೀಸರು ಜನರ ಮಧ್ಯೆ ಇದ್ದುಕೊಂಡೇ ಎಲ್ಲರಿಗೂ ರಕ್ಷಣೆ ನೀಡುತ್ತಾರೆ. ದೇಶದಲ್ಲಿ ಶಾಂತಿ ಮತ್ತು ಸುರಕ್ಷತೆ ಕಾಪಾಡಲು ತಮ್ಮ ವೈಯಕ್ತಿಕ ಜೀವನ ತ್ಯಾಗ ಮಾಡಿದ್ದಾರೆ. ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಅವರ ಧೈರ್ಯ, ಶೌರ್ಯ ಮತ್ತು ಸಮರ್ಪಣೆ ಮನೋಭಾವಕ್ಕೆ ಸದಾ ಋಣಿಯಾಗಿರಬೇಕು. ಪ್ರವಾಹ, ಭಯೋತ್ಪಾದನೆಯಂತಹ ಹಲವಾರು ಆಪತ್ತಿನ ವೇಳೆ ನಮ್ಮನ್ನು ರಕ್ಷಿಸಲು ತಮ್ಮ ಜೀವದ ಹಂಗನ್ನು ತೊರೆದು ಕಾರ್ಯ ನಿರ್ವಹಿಸುವ ಪೊಲೀಸರ ಸೇವೆ ಮಹತ್ವದ್ದಾಗಿದೆ. ಕಾನೂನು ಪಾಲನೆ ಮತ್ತು ಇಲಾಖೆಯನ್ನು ಬಲಪಡಿಸಲು ಮತ್ತು ಪೊಲೀಸ್ ಅಧಿಕಾರಿ ಕಲ್ಯಾಣಕ್ಕಾಗಿ ಹೆಚ್ಚಿನ ಶ್ರಮ ವಹಿಸಬೇಕಿದೆ ಎಂದರು.ಪೊಲೀಸರು ಮಾಡುವ ಸಮಾಜದ ರಕ್ಷಣೆಯ ಕಾರ್ಯಕ್ಕೆ ಪ್ರತಿಯೊಬ್ಬರು ಬೆಂಬಲಿಸಬೇಕು. ಜಿಲ್ಲೆಯಲ್ಲಿ ಇತ್ತೀಚೆಗೆ ಹುತಾತ್ಮರಾದ ಪೊಲೀಸ್‌ರ ಕುಟುಂಬಗಳಿಗೆ ನಾವೆಲ್ಲರೂ ಆತ್ಮಸ್ಥೈರ್ಯ ತುಂಬಬೇಕಾಗಿದೆ. ಹುತಾತ್ಮರ ತ್ಯಾಗವನ್ನು ಸ್ಮರಿಸುವುದು ಅಷ್ಟೇ ಅಲ್ಲ, ಅವರ ಕುಟುಂಬಗಳಿಗೆ ಬೆಂಬಲವಾಗಿ ನಿಲ್ಲುವುದು ನಮ್ಮ ಕರ್ತವ್ಯವಾಗಿರುತ್ತದೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಾಹ್ನವಿ ಮಾತನಾಡಿ, ರಾಷ್ಟ್ರದಾದ್ಯಂತ ಪೊಲೀಸ್ ಹುತಾತ್ಮರ ದಿನ ಆಚರಿಸುತ್ತಿದ್ದು, ಈ ಮೂಲಕ ಹುತಾತ್ಮ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಗೌರವ ಸಲ್ಲಿಸಲಾಗುತ್ತದೆ. ಅಕ್ಟೋಬರ್ 21, 1959ರಲ್ಲಿ ಸಿಆರ್‌ಪಿಎಫ್ ಪಡೆಯ ನೇತೃತ್ವ ವಹಿಸಿದ್ದ ಕರಣ್ ಸಿಂಗ್ ಭಾರತದಲ್ಲಿ ಅತಿಕ್ರಮಣ ಮಾಡಿದ ಚೀನಾ ದೇಶದ ಸೈನಿಕರು ಮತ್ತು ಭಾರತೀಯ ಸಿಆರ್‌ಪಿಎಫ್ ಪೊಲೀಸರ ಮಧ್ಯೆ ನಡೆದ ಘರ್ಷಣೆಯಲ್ಲಿ ಭಾರತೀಯ ಹತ್ತು ಪೊಲೀಸರು ಹುತಾತ್ಮರಾದರು. 9 ಮಂದಿಯನ್ನು ಚೀನಾ ದೇಶದ ಸೈನಿಕರು, ಸೆರೆ ಹಿಡಿದುಕೊಳ್ಳುತ್ತಾರೆ. ಅದರ ಸ್ಮರಣಾರ್ಥವಾಗಿ ಪೊಲೀಸ್ ಹುತಾತ್ಮರ ದಿನಾಚರಣೆಯನ್ನು ಆಚರಿಸುತ್ತಾ ಬರಲಾಗುತ್ತಿದೆ. ಕರ್ತವ್ಯ ಪಾಲನೆಯಲ್ಲಿ ಪೊಲೀಸ್ ಪಡೆಗಳು ತಮ್ಮ ಜೀವನವನ್ನು ಮುಡಿಪಾಗಿಟ್ಟು ಹೋರಾಡಿದ ಹುತಾತ್ಮರನ್ನು ನಾವು ಸ್ಮರಿಸಬೇಕಾಗಿದೆ. ಸಿಆರ್‌ಪಿಎಫ್ ಜವಾನರು ಧೈರ್ಯ ಮತ್ತು ಆತ್ಮ ಸಮರ್ಪಣೆಯನ್ನು ಭಾರತ ದೇಶದ ಎಲ್ಲ ಪ್ರಜೆಗಳು ಸ್ಮರಿಸುತ್ತಾರೆ. ವೀರ ಮರಣವನ್ನಪ್ಪಿದ ಜವಾನರ ಸವಿನೆನಪಿಗಾಗಿ ಒಂದು ಸ್ಮಾರಕವನ್ನು ನಿರ್ಮಿಸಲಾಗಿದೆ ಎಂದರು.ಪೊಲೀಸ್ ಕರ್ತವ್ಯ ಪಾಲನೆಯಲ್ಲಿ ಪ್ರತಿ ವರ್ಷ ದೇಶದಲ್ಲಿ ಅನೇಕ ಪೊಲೀಸ್ ಸಿಬ್ಬಂದಿಯವರು ತಮ್ಮ ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ. ಅಂತಹ ಸ್ಮರಣೆಗಾಗಿ ಪ್ರತಿ ವರ್ಷ ಅಕ್ಟೋಬರ್ 21 ರ ದಿನಾಂಕದಂದು ಪೊಲೀಸ್ ದಿನಾಚರಣೆಯನ್ನು ನಡೆಸಲಾಗುತ್ತಿದೆ. ಕಳೆದ ಒಂದು ವರ್ಷದಲ್ಲಿ ನಮ್ಮ ದೇಶದಲ್ಲಿ ಹುತಾತ್ಮರಾದ 191 ಪೊಲೀಸ್ ಅಧಿಕಾರಿ, ಸಿಬ್ಬಂದಿಯವರಲ್ಲಿ ಕರ್ನಾಟಕ ರಾಜ್ಯದ ಎಂಟು ಪೊಲೀಸ್ ಅಧಿಕಾರಿ, ಸಿಬ್ಬಂದಿಯವರು ಸಹ ಕರ್ತವ್ಯಪಾಲನೆಯಲ್ಲಿ ಹುತಾತ್ಮರಾಗಿದ್ದಾರೆ ಎಂದು ಸ್ಮರಿಸಿದರು.
ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ, ಡಿವೈಎಸ್ಪಿಗಳು, ಪೊಲೀಸ್ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಸೇರಿದಂತೆ ಹಲವು ಗಣ್ಯರು ಹಾಗೂ ಸಾರ್ವಜನಿಕರು ಇದ್ದರು.ಪೊಲೀಸ್ ಹುತಾತ್ಮರಿಗೆ ಗೌರವ ಸಮರ್ಪಣೆ:
ಕಾರ್ಯಕ್ರಮದ ಆರಂಭದಲ್ಲಿ ಪೊಲೀಸ್ ಸ್ಮಾರಕಕ್ಕೆ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಇತರೆ ಅಧಿಕಾರಿಗಳು ಹಾಗೂ ಹಲವು ಗಣ್ಯರು ಪುಷ್ಪನಮನ ಸಲ್ಲಿಸಿದರು. ಇತ್ತೀಚೆಗೆ ಹುತಾತ್ಮರಿಗೆ ಗೌರವ ಸಮರ್ಪಣೆಗಾಗಿ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಹಾಗೂ ಮೌನಾಚರಣೆ ಆಚರಿಸಲಾಯಿತು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ಯಾಲಯದ ಆವರಣದಲ್ಲಿ ಮಂಗಳವಾರ ನಡೆದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪೊಲೀಸರು ಕಾನೂನು ಸುವ್ಯವಸ್ಥೆ ಕಾಪಾಡಲು ಮತ್ತು ಪ್ರತಿಯೊಬ್ಬ ನಾಗರಿಕರನ್ನು ರಕ್ಷಿಸಲು ಅಪಾರ ಕೊಡುಗೆ ನೀಡಿದ್ದಾರೆ. ಸೈನಿಕರು ದೇಶದ ಗಡಿಯಲ್ಲಿ ಸೇವೆ ಸಲ್ಲಿಸಿ ದೇಶವನ್ನು ರಕ್ಷಣೆ ಮಾಡಿದರೆ, ಪೊಲೀಸರು ಜನರ ಮಧ್ಯೆ ಇದ್ದುಕೊಂಡೇ ಎಲ್ಲರಿಗೂ ರಕ್ಷಣೆ ನೀಡುತ್ತಾರೆ. ದೇಶದಲ್ಲಿ ಶಾಂತಿ ಮತ್ತು ಸುರಕ್ಷತೆ ಕಾಪಾಡಲು ತಮ್ಮ ವೈಯಕ್ತಿಕ ಜೀವನ ತ್ಯಾಗ ಮಾಡಿದ್ದಾರೆ. ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಅವರ ಧೈರ್ಯ, ಶೌರ್ಯ ಮತ್ತು ಸಮರ್ಪಣೆ ಮನೋಭಾವಕ್ಕೆ ಸದಾ ಋಣಿಯಾಗಿರಬೇಕು. ಪ್ರವಾಹ, ಭಯೋತ್ಪಾದನೆಯಂತಹ ಹಲವಾರು ಆಪತ್ತಿನ ವೇಳೆ ನಮ್ಮನ್ನು ರಕ್ಷಿಸಲು ತಮ್ಮ ಜೀವದ ಹಂಗನ್ನು ತೊರೆದು ಕಾರ್ಯ ನಿರ್ವಹಿಸುವ ಪೊಲೀಸರ ಸೇವೆ ಮಹತ್ವದ್ದಾಗಿದೆ. ಕಾನೂನು ಪಾಲನೆ ಮತ್ತು ಇಲಾಖೆಯನ್ನು ಬಲಪಡಿಸಲು ಮತ್ತು ಪೊಲೀಸ್ ಅಧಿಕಾರಿ ಕಲ್ಯಾಣಕ್ಕಾಗಿ ಹೆಚ್ಚಿನ ಶ್ರಮ ವಹಿಸಬೇಕಿದೆ ಎಂದರು.
ಪೊಲೀಸರು ಮಾಡುವ ಸಮಾಜದ ರಕ್ಷಣೆಯ ಕಾರ್ಯಕ್ಕೆ ಪ್ರತಿಯೊಬ್ಬರು ಬೆಂಬಲಿಸಬೇಕು. ಜಿಲ್ಲೆಯಲ್ಲಿ ಇತ್ತೀಚೆಗೆ ಹುತಾತ್ಮರಾದ ಪೊಲೀಸ್‌ರ ಕುಟುಂಬಗಳಿಗೆ ನಾವೆಲ್ಲರೂ ಆತ್ಮಸ್ಥೈರ್ಯ ತುಂಬಬೇಕಾಗಿದೆ. ಹುತಾತ್ಮರ ತ್ಯಾಗವನ್ನು ಸ್ಮರಿಸುವುದು ಅಷ್ಟೇ ಅಲ್ಲ, ಅವರ ಕುಟುಂಬಗಳಿಗೆ ಬೆಂಬಲವಾಗಿ ನಿಲ್ಲುವುದು ನಮ್ಮ ಕರ್ತವ್ಯವಾಗಿರುತ್ತದೆ ಎಂದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಾಹ್ನವಿ ಮಾತನಾಡಿ, ರಾಷ್ಟ್ರದಾದ್ಯಂತ ಪೊಲೀಸ್ ಹುತಾತ್ಮರ ದಿನ ಆಚರಿಸುತ್ತಿದ್ದು, ಈ ಮೂಲಕ ಹುತಾತ್ಮ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಗೌರವ ಸಲ್ಲಿಸಲಾಗುತ್ತದೆ. ಅಕ್ಟೋಬರ್ 21, 1959ರಲ್ಲಿ ಸಿಆರ್‌ಪಿಎಫ್ ಪಡೆಯ ನೇತೃತ್ವ ವಹಿಸಿದ್ದ ಕರಣ್ ಸಿಂಗ್ ಭಾರತದಲ್ಲಿ ಅತಿಕ್ರಮಣ ಮಾಡಿದ ಚೀನಾ ದೇಶದ ಸೈನಿಕರು ಮತ್ತು ಭಾರತೀಯ ಸಿಆರ್‌ಪಿಎಫ್ ಪೊಲೀಸರ ಮಧ್ಯೆ ನಡೆದ ಘರ್ಷಣೆಯಲ್ಲಿ ಭಾರತೀಯ ಹತ್ತು ಪೊಲೀಸರು ಹುತಾತ್ಮರಾದರು. 9 ಮಂದಿಯನ್ನು ಚೀನಾ ದೇಶದ ಸೈನಿಕರು, ಸೆರೆ ಹಿಡಿದುಕೊಳ್ಳುತ್ತಾರೆ. ಅದರ ಸ್ಮರಣಾರ್ಥವಾಗಿ ಪೊಲೀಸ್ ಹುತಾತ್ಮರ ದಿನಾಚರಣೆಯನ್ನು ಆಚರಿಸುತ್ತಾ ಬರಲಾಗುತ್ತಿದೆ. ಕರ್ತವ್ಯ ಪಾಲನೆಯಲ್ಲಿ ಪೊಲೀಸ್ ಪಡೆಗಳು ತಮ್ಮ ಜೀವನವನ್ನು ಮುಡಿಪಾಗಿಟ್ಟು ಹೋರಾಡಿದ ಹುತಾತ್ಮರನ್ನು ನಾವು ಸ್ಮರಿಸಬೇಕಾಗಿದೆ. ಸಿಆರ್‌ಪಿಎಫ್ ಜವಾನರು ಧೈರ್ಯ ಮತ್ತು ಆತ್ಮ ಸಮರ್ಪಣೆಯನ್ನು ಭಾರತ ದೇಶದ ಎಲ್ಲ ಪ್ರಜೆಗಳು ಸ್ಮರಿಸುತ್ತಾರೆ. ವೀರ ಮರಣವನ್ನಪ್ಪಿದ ಜವಾನರ ಸವಿನೆನಪಿಗಾಗಿ ಒಂದು ಸ್ಮಾರಕವನ್ನು ನಿರ್ಮಿಸಲಾಗಿದೆ ಎಂದರು.
ಪೊಲೀಸ್ ಕರ್ತವ್ಯ ಪಾಲನೆಯಲ್ಲಿ ಪ್ರತಿ ವರ್ಷ ದೇಶದಲ್ಲಿ ಅನೇಕ ಪೊಲೀಸ್ ಸಿಬ್ಬಂದಿಯವರು ತಮ್ಮ ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ. ಅಂತಹ ಸ್ಮರಣೆಗಾಗಿ ಪ್ರತಿ ವರ್ಷ ಅಕ್ಟೋಬರ್ 21 ರ ದಿನಾಂಕದಂದು ಪೊಲೀಸ್ ದಿನಾಚರಣೆಯನ್ನು ನಡೆಸಲಾಗುತ್ತಿದೆ. ಕಳೆದ ಒಂದು ವರ್ಷದಲ್ಲಿ ನಮ್ಮ ದೇಶದಲ್ಲಿ ಹುತಾತ್ಮರಾದ 191 ಪೊಲೀಸ್ ಅಧಿಕಾರಿ, ಸಿಬ್ಬಂದಿಯವರಲ್ಲಿ ಕರ್ನಾಟಕ ರಾಜ್ಯದ ಎಂಟು ಪೊಲೀಸ್ ಅಧಿಕಾರಿ, ಸಿಬ್ಬಂದಿಯವರು ಸಹ ಕರ್ತವ್ಯಪಾಲನೆಯಲ್ಲಿ ಹುತಾತ್ಮರಾಗಿದ್ದಾರೆ ಎಂದು ಸ್ಮರಿಸಿದರು.ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ, ಡಿವೈಎಸ್ಪಿಗಳು, ಪೊಲೀಸ್ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಸೇರಿದಂತೆ ಹಲವು ಗಣ್ಯರು ಹಾಗೂ ಸಾರ್ವಜನಿಕರು ಇದ್ದರು.
ಪೊಲೀಸ್ ಹುತಾತ್ಮರಿಗೆ ಗೌರವ ಸಮರ್ಪಣೆ:ಕಾರ್ಯಕ್ರಮದ ಆರಂಭದಲ್ಲಿ ಪೊಲೀಸ್ ಸ್ಮಾರಕಕ್ಕೆ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಇತರೆ ಅಧಿಕಾರಿಗಳು ಹಾಗೂ ಹಲವು ಗಣ್ಯರು ಪುಷ್ಪನಮನ ಸಲ್ಲಿಸಿದರು. ಇತ್ತೀಚೆಗೆ ಹುತಾತ್ಮರಿಗೆ ಗೌರವ ಸಮರ್ಪಣೆಗಾಗಿ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಹಾಗೂ ಮೌನಾಚರಣೆ ಆಚರಿಸಲಾಯಿತು.