ಅಪರಾಧ ನಿಯಂತ್ರಣಕ್ಕೆ ಪೊಲೀಸ್ ಜನಸ್ನೇಹಿ ಭಾವನೆ ಮೂಡಬೇಕು: ಎ.ಎಸ್ . ನಯನ್

| Published : Oct 20 2025, 01:02 AM IST

ಅಪರಾಧ ನಿಯಂತ್ರಣಕ್ಕೆ ಪೊಲೀಸ್ ಜನಸ್ನೇಹಿ ಭಾವನೆ ಮೂಡಬೇಕು: ಎ.ಎಸ್ . ನಯನ್
Share this Article
  • FB
  • TW
  • Linkdin
  • Email

ಸಾರಾಂಶ

ಶೃಂಗೇರಿಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರು ಮಹತ್ತರ ಪಾತ್ರ ವಹಿಸುತ್ತಿದ್ದು, ಸಾರ್ವಜನಿಕರೂ ಕೈಜೋಡಿಸಬೇಕು. ಅಪರಾಧ ನಿಯಂತ್ರಣಕ್ಕೆ ಪೊಲೀಸರಲ್ಲಿ ಜನಸ್ನೇಹಿ ಭಾವನೆ ಮೂಡಬೇಕು ಎಂದು ಜ್ಞಾನಭಾರತಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಎ.ಎಸ್. ನಯನ್‌ ಹೇಳಿದರು.

- ಪೊಲೀಸ್ ವಿಷಯದ ಕುರಿತ ಚಿತ್ರಕಲೆ, ಪ್ರಬಂಧ ಸ್ಪರ್ಧೆ

ಕನ್ನಡಪ್ರಭ ವಾರ್ತೆ, ಶೃಂಗೇರಿ

ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರು ಮಹತ್ತರ ಪಾತ್ರ ವಹಿಸುತ್ತಿದ್ದು, ಸಾರ್ವಜನಿಕರೂ ಕೈಜೋಡಿಸಬೇಕು. ಅಪರಾಧ ನಿಯಂತ್ರಣಕ್ಕೆ ಪೊಲೀಸರಲ್ಲಿ ಜನಸ್ನೇಹಿ ಭಾವನೆ ಮೂಡಬೇಕು ಎಂದು ಜ್ಞಾನಭಾರತಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಎ.ಎಸ್. ನಯನ್‌ ಹೇಳಿದರು.

ಪಟ್ಟಣದ ಜ್ಞಾನಭಾರತಿ ಶಿಕ್ಷಣ ವಿದ್ಯಾ ಕೇಂದ್ರದ ಆವರಣದಲ್ಲಿ ಪೊಲೀಸ್ ಇಲಾಖೆ ಆಶ್ರಯದಲ್ಲಿ ಹುತಾತ್ಮ ದಿನಾಚರಣೆ ಅಂಗವಾಗಿ ಮನೆ ಮನೆಗೆ ಪೊಲೀಸ್ ವಿಷಯದ ಕುರಿತ ಚಿತ್ರಕಲೆ ಹಾಗೂ ಪ್ರಬಂಧ ಸ್ಪರ್ಧೆಯಲ್ಲಿ ಮಾತನಾಡಿದರು.

ಪೊಲೀಸರು ಸಾರ್ವಜನಿಕ ಸಂಪರ್ಕ ಬಲಪಡಿಸಬೇಕು. ಅಪರಾಧ ನಿಯಂತ್ರಣಕ್ಕೆ ಸಹಕಾರ, ಅಹವಾಲುಗಳನ್ನು ಆಲಿಸುವುದು, ಮಾಹಿತಿ ಸಂಗ್ರಹ, ಸುರಕ್ಷತೆ ಮೂಡಿಸುವುದು,ಪೊಲೀಸರ ಬಗ್ಗೆ ಜನರಿಗೆ ವಿಶ್ವಾಸ ಬರುವಂತೆ ಕರ್ತವ್ಯ ನಿರ್ವಹಿಸಬೇಕು ಎಂದರು.

ಶೃಂಗೇರಿ ಠಾಣೆಯ ಸಹಾಯಕ ಪೊಲೀಸ್ ಉಪನಿರೀಕ್ಷಕ ಸಿ.ಆರ್.ಮೋಹನ್ ಕುಮಾರ್ ಮಾತನಾಡಿ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮದಿಂದ ಇಲಾಖೆ ಹಾಗೂ ಸಾರ್ವಜನಿಕರ ನಡುವಿನ ಬಾಂಧವ್ಯ ಗಟ್ಟಿಗೊಳಿಸಲು ಒಂದು ದಿಟ್ಟ ಹೆಜ್ಜೆ. ಅಪರಾಧ ನಿಯಂತ್ರಣಕ್ಕೆ ಸಹಕಾರಿಯಾಗಲು ಹಾಗೂ ಜನರಲ್ಲಿ ಸುರಕ್ಷತಾ ಭಾವನೆ ಮೂಡಿಸಲು ರಾಜ್ಯ ಸರ್ಕಾರ ಜಾರಿಗೊಳಿಸಿರುವ ಒಂದು ವಿನೂತನ ಹಾಗೂ ಮಹತ್ವದ ಕಾರ್ಯಕ್ರಮವಾಗಿದೆ ಎಂಧು ತಿಳಿಸಿದರು.

ಜನರಲ್ಲಿ ಪೊಲೀಸರ ಬಗ್ಗೆ ಇರುವ ಭಯ,ಆತಂಕ ದೂರವಾಗಬೇಕು. ಪೊಲೀಸ್ ಜನಸ್ನೇಹಿ ಭಾವನೆ ವೃದ್ದಿಸಬೇಕು. ಸಮಾಜದಲ್ಲಿ ಅಪರಾಧ ನಿಯಂತ್ರಣ, ಶಾಂತಿ ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕರು ಕರ್ತವ್ಯದಲ್ಲಿ ಪೊಲೀಸರಿಗೆ ಸಹಕರಿಸಬೇಕು ಎಂದರು.

ಇದೇ ಸಂದರ್ಭದಲ್ಲಿ ಚಿತ್ರಕಲೆ, ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಮುಖ್ಯ ಶಿಕ್ಷಕ ಶಂಕರನಾರಾಯಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪೊಲೀಸ್ ಇಲಾಖೆ ಮಂಜುನಾಥ್, ಶಿಕ್ಷಕಿಯರಾದ ಕಾವ್ಯ, ಐಶ್ವರ್ಯ, ಗೃಹರಕ್ಷಕ ದಳದ ಸುಂದರೇಶ್ ಮತ್ತಿತರರು ಉಪಸ್ಥಿತರಿದ್ದರು.

18 ಶ್ರೀ ಚಿತ್ರ 1-

ಶೃಂಗೇರಿ ಪಟ್ಟಣದ ಜ್ಞಾನಭಾರತಿ ವಿದ್ಯಾಕೇಂದ್ರದಲ್ಲಿ ನಡೆದ ಮನೆ ಮನೆಗೆ ಪೊಲೀಸ್ ಕುರಿತ ಚಿತ್ರಕಲಾ ಹಾಗೂ ಪ್ರಬಂಧ ಸ್ಪರ್ಧೆ ಕಾರ್ಯಕ್ರಮದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.