ಸಾರಾಂಶ
ಪೊಲೀಸರು ಕಾನೂನು ಸುವ್ಯವಸ್ಥೆ ಕಾಪಾಡಲು ನಿರಂತರವಾಗಿ ಕರ್ತವ್ಯ ನಿರ್ವಹಿಸುವ ಮಧ್ಯೆ ಮನೋವಿಕಾಸಕ್ಕಾಗಿ ವರ್ಷಕ್ಕೊಮ್ಮೆ ಕ್ರೀಡಾಕೂಟವನ್ನು ನಡೆಸುತ್ತಿದ್ದು, ಕೆಜಿಎಫ್‌ನ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳು ಕ್ರೀಡೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಸಕ್ರಿಯವಾಗಿ ಕ್ರೀಡಾಸಕ್ತಿ ಮೈಗೂಡಿಸಿಕೊಳ್ಳಬೇಕು.
ಕನ್ನಡಪ್ರಭ ವಾರ್ತೆ ಕೆಜಿಎಫ್ಕೆಜಿಎಫ್ ಪೊಲೀಸ್ ಜಿಲ್ಲೆಯ ೨೦೨೪ನೇ ಸಾಲಿನ ವಾರ್ಷಿಕ ಕ್ರೀಡಾಕೂಟ ಕೆಜಿಎಫ್‌ನ ಚಾಂಫೀಯನ್‌ರೀಫ್ಸ್‌ನಲ್ಲಿನ ಡಿ.ಎ.ಆರ್. ಪೊಲೀಸ್ ಕವಾಯಿತು ಮೈದಾನದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ವಾರ್ಷಿಕ ಪೊಲೀಸ್ ಕ್ರೀಡಾಕೂಟಕ್ಕೆ ಜಿಲ್ಲಾಧಿಕಾರಿ ಅಕ್ರಂಪಾಷ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಪೊಲೀಸರು ಕಾನೂನು ಸುವ್ಯವಸ್ಥೆ ಅಡಿಯಲ್ಲಿ ನಿರಂತರವಾಗಿ ಕರ್ತವ್ಯ ನಿರ್ವಹಿಸುವ ಮಧ್ಯೆ ಮನೋವಿಕಾಸಕ್ಕಾಗಿ ವರ್ಷಕ್ಕೊಮ್ಮೆ ಕ್ರೀಡಾಕೂಟವನ್ನು ನಡೆಸುತ್ತಿದ್ದು, ಕೆಜಿಎಫ್‌ನ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳು ಕ್ರೀಡೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ, ವಾರ್ಷಿಕ ಕ್ರೀಡಾಕೂಟವನ್ನು ಯಶಸ್ವಿಗೊಳಿಸಬೇಕು ಹಾಗೂ ಸಕ್ರಿಯವಾಗಿ ಕ್ರೀಡಾಸಕ್ತಿ ಮೈಗೂಡಿಸಿಕೊಳ್ಳಬೇಕೆಂದು ಕರೆ ನೀಡಿದರು. ಪೊಲೀಸ್ ಸ್ವತ್ತಿಗೆ ಇ-ಖಾತೆ
ಜಿಲ್ಲೆಯಲ್ಲಿ ಜಿಲ್ಲಾಡಳಿತ ಪೊಲೀಸ್ ಇಲಾಖೆಯೊಂದಿಗೆ ಉತ್ತಮ ಭಾಂದವ್ಯ ಹೊಂದಿದ್ದು ನಾನು ಕೋಲಾರಕ್ಕೆ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ತಕ್ಷಣ ಟ್ರಾಫಿಕ್ ನಿರ್ವಹಣೆ ಬಗ್ಗೆ ಹೆಚ್ಚಿನ ಗಮನಹರಿಸುವ ನಿಟ್ಟಿನಲ್ಲಿ ಅನುದಾನ ಬಿಡುಗಡೆಗೊಳಿಸಿದ್ದೇವೆ. ಒಂದು ಸಾವಿರಕ್ಕೂ ಹೆಚ್ಚು ಪೊಲೀಸ್ ಕಚೇರಿಗಳಿಗೆ ಇ-ಸ್ವತ್ತು ಇರಲಿಲ್ಲ ಅವುಗಳಿಗೆ ಅರ್‌ಟಿಜಿಎಸ್ ಮಾಡಿಕೊಡಲಾಗಿದೆ ಎಂದರು,ಕೆಎಸ್‌ಆರ್‌ಪಿಗೆ 100 ಎಕರೆ
ಕೆಎಸ್‌ಆರ್‌ಪಿ ತುಕುಡಿಗಾಗಿ ಸ್ಥಾಪನೆಗಾಗಿ ಶಾಸಕಿ ರೂಪಕಲಾಶಶಿಧರ್ ಮನವಿ ಮಾಡಿದ್ದರು. ಅದರಂತೆ ಪೊಲೀಸ್ ವರಿಷ್ಠಾಧಿಕಾರಿ ಶಾಂತರಾಜು ಒತ್ತಡ ಹೇರಿದ ಹಿನ್ನೆಲೆಯಲ್ಲಿ ಕೇವಲ ೨೦ ದಿನಗಳಲ್ಲಿ ೧೦೦ ಎಕರೆ ಸರ್ಕಾರಿ ಜಮೀನು ಗುರುತಿಸಿ ಜಮೀನು ಹಸ್ತಾಂತರ ಸಹ ಮಾಡಲಾಗಿದೆ ಎಂದು ಹೇಳಿದರು.ಕ್ರೀಡಾ ಜ್ಯೋತಿ ಹಿಡಿದು ಎಪಿಸಿ ರವಿಚಂದ್ರ ಸಂಚರಿಸಿದರು. ಆರ್.ಪಿ.ಐ. ವಿ.ಸೋಮಶೇಖರ ನೇತೃತ್ವದಲ್ಲಿ ಪಥಸಂಚಲನ ನಡೆಯಿತು. ಎಪಿಸಿ ಸದಾಶಿವ ಮನಗುಳಿ, ಭೀಮಸೇನಾಕಾಂಬ್ಳೆ ನಿರೂಪಿಸಿದರು.