ಸಾರಾಂಶ
ಬೆಳಗಾವಿ: ಆಪರೇಷನ್ ಸಿಂದೂರ ಕಾರ್ಯಾಚರಣೆ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಆಣೆಕಟ್ಟುಗಳು, ವಿಮಾನ ನಿಲ್ದಾಣ, ರೈಲು ನಿಲ್ದಾಣಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಭಾರತೀಯ ಸೇನಾಪಡೆ ಆಪರೇಷನ್ ಸಿಂದೂರ ಕಾರ್ಯಾಚರಣೆ ನಡೆಸಿ ಪಾಕಿಸ್ತಾನದಲ್ಲಿನ 9 ಉಗ್ರ ನೆಲೆಗಳನ್ನು ಧ್ವಂಸಗೊಳಿಸಿ, ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿನ ಅಣೆಕಟ್ಟುಗಳು ಮತ್ತು ಕೈಗಾರಿಕೆಗಳು, ವಿಮಾನ ನಿಲ್ದಾಣ, ರೈಲು ನಿಲ್ದಾಣಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ.
ಹುಕ್ಕೇರಿ ತಾಲೂಕಿನ ಘಟಪ್ರಭಾ ಜಲಾಶಯ, ಶಿರೂರಿನ ಮಾರ್ಕಂಡೇಯ ಜಲಾಶಯ, ಸವದತ್ತಿ ತಾಲೂಕಿನ ಮಲಪ್ರಭಾ ಮತ್ತು ಬೆಳಗಾವಿ ತಾಲೂಕಿನ ರಕ್ಕಸಕೊಪ್ಪ ಜಲಾಶಯಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಜಲಾಶಯದ ಎರಡೂ ಬದಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.
ಯಾವುದೇ ರೀತಿಯ ಅಹಿತಕರ ಘಟನೆ ನಡೆದಂತೆ ಕಟ್ಟೆಚ್ಚರ ವಹಿಸಲಾಗಿದೆ. ಜಲಾಶಯಗಳ ಮೇಲೆ ಪೊಲೀಸರ ಹದ್ದಿನ ಕಣ್ಣಿಡಲಾಗಿದೆ. ಪೊಲೀಸ್ ಇಲಾಖೆಯ ಸಮನ್ವಯದೊಂದಿಗೆ ಸಂಪೂರ್ಣ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ.