ಕನ್ನಡಪ್ರಭವಾರ್ತೆ ಸುಂಟಿಕೊಪ್ಪ

ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ, ಪ್ರತಿಪಕ್ಷದ ನಾಯಕ ರಾಹುಲ್‌ಗಾಂಧಿ ಸೇರಿದಂತೆ ಕಾಂಗ್ರೆಸ್ ಮುಖಂಡರ ಬಂಧನ ವಿರೋಧಿಸಿ ಸುಂಟಿಕೊಪ್ಪ ನಗರ ಕಾಂಗ್ರೆಸ್ ಪಕ್ಷದ ವತಿಯಿಂದ ಕನ್ನಡ ವೃತ್ತದಲ್ಲಿ ಪ್ರತಿಭಟನೆ ನಡೆಯಿತು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ ಕೇಂದ್ರ ಸರ್ಕಾರ ಜನವಿರೋಧಿ ನೀತಿ ಅನುಸರಿಸುತ್ತಲೇ ಬರುತ್ತಿದ್ದು ಸರ್ಕಾರದ ಪ್ರತಿಭಟನೆ, ಹೋರಾಟಗಳನ್ನು ಹತ್ತಿಕ್ಕುವ ನೀತಿ ಹೊಂದಿದೆ ಎಂದರು.

ದೇಶದ ಮಕ್ಕಳ ಭವಿಷ್ಯ ರೂಪಿಸುವ ಕಾಯಕದಲ್ಲಿ ತೊಡಗಿಸಿಕೊಳ್ಳದೆ. ನೀಟ್ ಪರೀಕ್ಷಾ ಪ್ರಶ್ನೆ ಪತ್ರಿಕೆಗಳನ್ನು ಸೋರಿಕೆ ಮಾಡುವ ಮೂಲಕ ಮಕ್ಕಳ ಭವಿಷ್ಯವನ್ನೇ ಹಾಳು ಮಾಡಿರುವುದು ಶೋಚನೀಯ ಸಂಗತಿ. ದೇಶದಲ್ಲಿ ಪ್ರತಿಭಟನೆ ಮಾಡುವವರನ್ನು ತನಿಖಾ ಸಂಸ್ಥೆಗಳನ್ನು ಮುಂದೆ ಬಿಟ್ಟು ಬೆದರಿಸಿ ಪ್ರತಿಭಟನೆಗಳು ನಡೆಯದಂತೆ ಹತ್ತಿಕ್ಕುವ ಕಾರ್ಯದಲ್ಲಿ ತೊಡಗಿಸಿಕೊಂಡಿದೆ ಎಂದರು.ಪ್ರಶ್ನೆ ಪತ್ರಿಕೆ ಸೋರಿಕೆಗೆ ಕಾರಣರಾದ ಕೇಂದ್ರ ಶಿಕ್ಷಣ ಸಚಿವ ಧಮೇಂದ್ರ ಪ್ರದಾನ್ ತಮ್ಮ ಸಚಿವ ಸ್ಥಾನಕ್ಕೆ ನೀಡಬೇಕು. ಅಲ್ಲದೆ ತಪ್ಪಿಸ್ಥರ ವಿರುದ್ಧ ತನಿಖೆ ಕೈಗೊಂಡು ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದರು. ಇದೇ ಸಂದರ್ಭ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿದರು.

ಸುಂಟಿಕೊಪ್ಪ ನಗರ ಕಾಂಗ್ರೆಸ್ ಅಧ್ಯಕ್ಷ ರಫೀಕ್‌ಖಾನ್, ಹೋಬಳಿ ಕಾಂಗ್ರೆಸ್ ಅಧ್ಯಕ್ಷ ರಜಾಕ್, ತಾ.ಪಂ. ಮಾಜಿ ಸದಸ್ಯ ಕೆ.ಎಸ್.ಮಂಜುನಾಥ್, ಜಿ.ಪಂ. ಮಾಜಿ ಸದಸ್ಯೆ ಭಾನುಮತಿ, ಗ್ರಾ.ಪಂ.ಮಾಜಿ ಅಧ್ಯಕ್ಷರಾದ ಕೆ.ಇ.ಕರೀಂ, ರೋಸ್‌ಮೇರಿ ರಾಡ್ರಿಗಸ್, ಶಿವಮ್ಮ ಮಹೇಶ್, ಮಾಜಿ ಸದಸ್ಯರುಗಳಾದ ಶಬ್ಬೀರ್, ಆಲಿಕುಟ್ಟಿ, ೭ನೇ ಹೊಸಕೋಟೆ ಗ್ರಾ.ಪಂ.ಮಾಜಿ ಸದಸ್ಯರಾದ ಎ.ಪಿ.ರಮೇಶ್, ಮುಸ್ತಾಫ(ಕುಂಞಕುಟ್ಟಿ), ರಜಾಕ್, ಜಿಲ್ಲಾ ಯೂತ್ ಕಾಂಗ್ರೆಸ್ ಕಾರ್ಯದರ್ಶಿ ಹಕೀಂ, ಹಿರಿಯ ಮುಖಂಡ ಎಂ.ಎ.ವಸಂತ್, ಕಾನ್‌ಬೈಲ್ ವಿಭಾಗದ ಅಧ್ಯಕ್ಷ ಆದಂ ಮತ್ತಿತರರು ಇದ್ದರು.