ಪೋಲಿಯೋ ಮುಕ್ತ ಭಾರತ ನಮ್ಮ ಹೆಮ್ಮೆ

| Published : Mar 04 2024, 01:19 AM IST

ಸಾರಾಂಶ

ರಾಮನಗರ: ಭಾರತ ಪೋಲಿಯೊ ಮುಕ್ತವಾಗಿರುವುದು ತುಂಬಾ ಖುಷಿ ಮತ್ತು ಹೆಮ್ಮೆಯ ವಿಷಯವಾಗಿದೆ. ಆದುದರಿಂದ ಎಲ್ಲರೂ ತಪ್ಪದೇ ತಮ್ಮ 5 ವರ್ಷದ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕಿಸಿ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದರು.

ರಾಮನಗರ: ಭಾರತ ಪೋಲಿಯೊ ಮುಕ್ತವಾಗಿರುವುದು ತುಂಬಾ ಖುಷಿ ಮತ್ತು ಹೆಮ್ಮೆಯ ವಿಷಯವಾಗಿದೆ. ಆದುದರಿಂದ ಎಲ್ಲರೂ ತಪ್ಪದೇ ತಮ್ಮ 5 ವರ್ಷದ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕಿಸಿ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದರು.

ಜಿಲ್ಲಾಡಳಿತ , ಜಿಲ್ಲಾ ಪಂಚಾಯಿತಿ ಹಾಗೂ ಆರೋಗ್ಯ ಇಲಾಖೆ ವತಿಯಿಂದ ಜಿಲ್ಲಾಸ್ಪತ್ರೆಯಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಇನ್ನು ಅನೇಕ ರಾಷ್ಟ್ರಗಳಲ್ಲಿ ಪೋಲಿಯೊ ಪ್ರಕರಣಗಳು ಕಂಡುಬರುತ್ತಿರುವ ಕಾರಣ ಮುನ್ನೆಚ್ಚರಿಕೆಯಾಗಿ ನಮ್ಮಲ್ಲಿ ಇನ್ನೂ ಪೋಲಿಯೊ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಆದ್ದರಿಂದ ನಗರ ಮತ್ತು ಜಿಲ್ಲೆಯ ಸಾರ್ವಜನಿಕರು ತಮ್ಮ 5 ವರ್ಷದ ಎಲ್ಲಾ ಮಕ್ಕಳಿಗೆ 2 ಹನಿ ಪೋಲಿಯೊ ಹನಿ ಹಾಕಿಸಿ, ನಿಮ್ಮ ಮಕ್ಕಳು ಜೊತೆಗೆ ದೇಶವನ್ನು ಬಲಿಷ್ಠ ರಾಷ್ಟ್ರವಾಗಿಸಲು ಕೈಜೋಡಿಸಬೇಕು ಎಂದೂ ಮನವಿ ಮಾಡಿದರು.

ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಮಾತನಾಡಿ, ಪೋಷಕರು ತಮ್ಮ ಐದು ವರ್ಷದ ಒಳಗಿನ ಎಲ್ಲ ಮಕ್ಕಳನ್ನು ಲಸಿಕಾ ಕೇಂದ್ರಗಳಿಗೆ ಕರೆದೊಯ್ದು ಪೋಲಿಯೋ ಲಸಿಕೆಯನ್ನು ಕಡ್ಡಾಯವಾಗಿ ಕೊಡಿಸಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ವಿಜಯಾ ಕುಮಾರಿ, ಉಪಾಧ್ಯಕ್ಷ ಸೋಮಶೇಖರ್ , ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಿರಂಜನ್, ಆರ್ ಸಿಎಚ್ ಡಾ.ರಾಜು, ತಾಲೂಕು ಆರೋಗ್ಯಾಧಿಕಾರಿ ಡಾ.ಉಮಾ, ಡಾ.ಕುಮಾರ್, ಡಾ.ನಾರಾಯಣಸ್ವಾಮಿ, ಶಿಕ್ಷಣ ಆರೋಗ್ಯಾಧಿಕಾರಿ ಗಂಗಾಧರ್ ಮತ್ತಿತರರು ಹಾಜರಿದ್ದರು.

3ಕೆಆರ್ ಎಂಎನ್ 10.ಜೆಪಿಜಿ

ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಶಾಸಕ ಇಕ್ಬಾಲ್ ಹುಸೇನ್ ಮಗುವಿಗೆ ಪೋಲಿಯೋ ಹನಿ ಹಾಕುವ ಮೂಲಕ ಚಾಲನೆ ನೀಡಿದರು.ಬಾಕ್ಸ್‌.........

ಪೋಲಿಯೋ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ

ರಾಮನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಮನಗರ ವತಿಯಿಂದ ಪೋಲಿಯೋ ದಿನ ಕಾರ್ಯಕ್ರಮಕ್ಕೆ ನಗರಸಭಾ ಅಧ್ಯಕ್ಷೆ ವಿಜಯಕುಮಾರಿ ಅವರು, ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರ ಅವರ ಪುತ್ರಿ ವೃದ್ಧಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು. ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ನಿರಂಜನ್, ಡಾ. ರಾಜು, ಡಿಎಚ್ಇಒ ಗಂಗಾಧರ್ ಮತ್ತಿತರರು ಹಾಜರಿದ್ದರು.3ಕೆಆರ್ ಎಂಎನ್ 11.ಜೆಪಿಜಿ

ರಾಮನಗರ ಜಿಲ್ಲಾಧಿಕಾರಿ ಅವಿನಾಶ್ ಪುತ್ರಿ ವೃದ್ಧಿ ಅವರಿಗೆ ಪೋಲಿಯೋ ಲಸಿಕೆ ಹಾಕಲಾಯಿತು.