ಕೂಡ್ಲಿಗಿ: ಭಾರತ ಪೋಲಿಯೋ ಮುಕ್ತವಾಗಿದೆ. ಆದರೆ ಕೆಲವು ದೇಶಗಳಲ್ಲಿ ಪೋಲಿಯೋ ಇನ್ನು ಇದೆ. ಅದು ಮತ್ತೆ ಕಾಣಿಸಿಕೊಳ್ಳಬಹುದು. ನಿಮ್ಮ ಮಗುವಿನ ರಕ್ಷಣೆಯ ವಿಷಯದಲ್ಲಿ ಯಾವುದೇ ತಪ್ಪುಗಳನ್ನು ಮಾಡಬೇಡಿ. ಪ್ರತಿ ಬಾರಿ ಎರಡು ಹನಿ ಪೋಲಿಯೋ ಹಾಕಿಸಿ ಪೋಲಿಯೋ ಮುಕ್ತ ದೇಶದ ವಿಜಯಕ್ಕೆ ನಿಮ್ಮ ಕೊಡುಗೆ ನೀಡಿ ಎಂದು ವಿಜಯನಗರ ಜಿಲ್ಲಾ ವೈಧ್ಯಾಧಿಕಾರಿ ಡಾ. ಎಂ ವಿನಯ್ ತಿಳಿಸಿದರು.
ಅವರು ಜಿಲ್ಲಾ ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಪಂಚಾಯತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೂಡ್ಲಿಗಿ ತಾಲೂಕು ವೈದ್ಯಾಧಿಕಾರಿಗಳ ಕಚೇರಿ, ಕೂಡ್ಲಿಗಿ ತಾಲೂಕು ಸಾರ್ವಜನಿಕ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ ಮಾತನಾಡುತ್ತಿದ್ದರು. ನಿಮ್ಮ ಆರೋಗ್ಯ ನಮ್ಮ ಆದ್ಯತೆ ಸೊನ್ನೆಯಿಂದ 5 ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಮಕ್ಕಳಿಗೆ ಪ್ರತಿಬಾರಿ ಎರಡು ಹನಿಗಳು ಪೋಲಿಯೋ ಹನಿ ಹಾಕುವ ಮುಖಾಂತರ ಪೋಲಿಯೋ ವಿರುದ್ಧ ನಿರಂತರ ಗೆಲುವು ಪಡೆಯಬೇಕಾಗಿದೆ ಇದಕ್ಕೆ ನಮ್ಮ ಜೊತೆ ಸಾರ್ವಜನಿಕರು, ಕುಟುಂಬಗಳು ಕೈ ಜೋಡಿಸಬೇಕಿದೆ ಎಂದರು.ಕೂಡ್ಲಿಗಿ ತಾಲೂಕು ಆರೋಗ್ಯಾಧಿಕಾರಿ ಡಾ.ಎಸ್.ಪಿ. ಪ್ರದೀಪ್ ಮಾತನಾಡಿ, ಪಲ್ಸ್ ಪೋಲಿಯೋ ಬಗ್ಗೆ ತಾಯಂದಿರಿಗೆ ಮಾಹಿತಿ ನೀಡುವುದರ ಮೂಲಕ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಮೆರುಗು ತಂದರು. ತಮ್ಮ ಮಕ್ಕಳಿಗೆ ಪೋಲಿಯೋ ಹಾಕಿಸಿಕೊಳ್ಳುವಲ್ಲಿ ತಾಯಂದಿರ ಪಾತ್ರ ಪ್ರಮುಖವಾಗಿದೆ. ತಾಯಂದಿರು ತಮ್ಮ ಮಕ್ಕಳ ಆರೋಗ್ಯದ ಕಡೆ ಗಮನನೀಡಬೇಕಿದೆ ಎಂದರು.ಈ ಸಂದರ್ಭದಲ್ಲಿ ತಾಲೂಕು ಸಾರ್ವಜನಿಕ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿಗಳಾದ ಡಾ.ಸಿ.ಮಧು, ಡಾ.ಸೋನಿ, ಡಾ.ಜೈಶೀಲ ನಾಯ್ಕ, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಕೇಂದ್ರದಿಂದ ಆಗಮಿಸಿದ್ದ ಧರ್ಮನಗೌಡ, ಸುಚಿತ್ರಶ್ರೀ ಕಿರಣಕುಮಾರ್, ಕೂಡ್ಲಿಗಿ ತಾಲೂಕು ಆಸ್ಪತ್ರೆಯ ಸಿಬ್ಬಂದಿ ಜಗದೀಶ್ ನಾಯಕ್, ಕೆ.ಪ್ರಶಾಂತಕುಮಾರ್, ದೊಡ್ಡಪ್ಪ, ರಾಮಾಂಜನಿ, ಕೊಟ್ರಮ್ಮ, ಓಬಣ್ಣ ಇದ್ದರು.