2011ರಲ್ಲಿ ನಮ್ಮ ದೇಶದಲ್ಲಿ ಯಾವುದೇ ಪೋಲಿಯೋ ಪ್ರಕರಣಗಳು ದಾಖಲಾಗದೇ ಪೋಲಿಯೋ ಕಾರ್ಯಕ್ರಮ ಯಶಸ್ವಿಯಾಗಿದೆ

ಕುಷ್ಟಗಿ: ನಮ್ಮ ದೇಶ ಪೋಲಿಯೋ ಮುಕ್ತವಾಗಿದ್ದರೂ ಸಹಿತ ಮಕ್ಕಳ ಆರೋಗ್ಯದ ರಕ್ಷಣೆಗಾಗಿ ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೂ ತಪ್ಪದೆ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು ಶಾಸಕ ದೊಡ್ಡನಗೌಡ ಪಾಟೀಲ ಹೇಳಿದರು.

ತಾಲೂಕಿನ ಕೊರಡಕೇರಾ ಗ್ರಾಮದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನದ ಅಂಗವಾಗಿ ಮಗುವಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

2011ರಲ್ಲಿ ನಮ್ಮ ದೇಶದಲ್ಲಿ ಯಾವುದೇ ಪೋಲಿಯೋ ಪ್ರಕರಣಗಳು ದಾಖಲಾಗದೇ ಪೋಲಿಯೋ ಕಾರ್ಯಕ್ರಮ ಯಶಸ್ವಿಯಾಗಿದೆ ಎಂದ ಅವರು, ಪೋಲಿಯೋ ಇನ್ನೂ ಕೆಲ ದೇಶಗಳಲ್ಲಿ ಮಕ್ಕಳನ್ನು ಕಾಡುತ್ತಿದೆ. ಅದು ಮತ್ತೆ ಮರುಕಳಿಸಬಾರದು. ಈ ನಿಟ್ಟಿನಲ್ಲಿ ಎಲ್ಲರೂ 5 ವರ್ಷದೊಳಗಿನ ಎಲ್ಲ ಮಕ್ಕಳನ್ನು ಪೋಲಿಯೋ ಲಸಿಕಾ ಕೇಂದ್ರಗಳಿಗೆ ಕರೆತಂದು ಪೋಲಿಯೋ ಲಸಿಕೆ ಹಾಕಿಸಿ. ಇತರರಿಗೂ ಜಾಗೃತಿ ಮೂಡಿಸಲು ಮುಂದಾಗಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವೈದ್ಯಾಧಿಕಾರಿಗಳು, ಆರೋಗ್ಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಇದ್ದರು.