ಸಾರಾಂಶ
ಸಿಂಧನೂರಿನ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನಕ್ಕೆ ಶಾಸಕ ಹಂಪನಗೌಡ ಬಾದರ್ಲಿ ಚಾಲನೆ ನೀಡಿದರು.
ಸಿಂಧನೂರು: 5 ವರ್ಷದೊಳಗಿನ ಪ್ರತಿ ಮಗುವಿಗು ಕಡ್ಡಾಯವಾಗಿ ಪೋಲಿಯೋ ಲಸಿಕೆ ಹಾಕಿಸಿ ಹಾಕಿಸಬೇಕು ಎಂದು ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು.
ನಗರದ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.0 ದಿಂದ 5 ವರ್ಷದೊಳಗಿನ ಮಕ್ಕಳು ತಾಲೂಕಿನಲ್ಲಿ 45345 ಇದ್ದು, 248 ತಂಡಗಳಲ್ಲಿ 596 ಸಿಬ್ಬಂದಿ ಕರ್ತವ್ಯ ನಿರ್ವಹಿಸಲಿದ್ದಾರೆ. ಇದಲ್ಲದೆ 10 ಸಂಚಾರಿ ಬೂತ್‌ಗಳನ್ನು ಆರಂಭ ಮಾಡಿದ್ದು, ಇಂದಿನಿಂದ ಮಾ.6 ರವರೆಗೆ ಪೋಲಿಯೋ ಲಸಿಕೆ ಹಾಕುವ ಕೆಲಸ ಮಾಡಲಿದ್ದಾರೆ ಎಂದು ತಿಳಿಸಿದರು.
ತಹಸೀಲ್ದಾರ್ ಅರುಣ್ ಎಚ್.ದೇಸಾಯಿ ಮಾತನಾಡಿದರು. ನಗರಸಭೆ ಪೌರಾಯುಕ್ತ ಮಂಜುನಾಥ ಗುಂಡೂರು, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಅಯ್ಯನಗೌಡ, ಮುಖ್ಯ ವೈದ್ಯಾಧಿಕಾರಿ ನಾಗರಾಜ ಕಾಟ್ವಾ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಲಿಂಗನಗೌಡ, ಜಿಲ್ಲಾ ಉಪಆರೋಗ್ಯ ಶಿಕ್ಷಣಾಧಿಕಾರಿ ಬಸ್ಸಯ್ಯ, ತಾಲೂಕು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಗೀತಾ ಹಿರೇಮಠ, ಡಿಎಚ್‌ಒ ಕಚೇರಿಯ ಗುರುರಾಜ, ಹಿರಿಯ ಆರೋಗ್ಯ ನಿರೀಕ್ಷಕರಾದ ಸಂಗನಗೌಡ ಪಾಟೀಲ್, ರಂಗನಾಥ ಗುಡಿ, ಶಶಿಧರ್ ಹಳ್ಳಿ ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಇದ್ದರು.