ಧಾರವಾಡ: ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಜಿಲ್ಲೆಯಲ್ಲಿ ಭಾನುವಾರ ಶುರುವಾಗಿದ್ದು, ಜಿಲ್ಲಾಡಳಿತದ ವತಿಯಿಂದ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಸ್ಪತ್ರೆಯಲ್ಲಿ ಶಾಸಕ ಎನ್.ಎಚ್. ಕೋನರೆಡ್ಡಿ ಹಾಗೂ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷ ಅಡಿವೇಶ ಇಟಗಿ, ಮೇಯರ್ ಜ್ಯೋತಿ ಪಾಟೀಲ, ಸಭಾನಾಯಕ ಈರೇಶ ಅಂಚಟಗೇರಿ, ಪಾಲಿಕೆ ಸದಸ್ಯ ಸುರೇಶ ಬೇದರೆ, ಕುಷ್ಠರೋಗ ವಿಭಾಗದ ಜಂಟಿ ನಿರ್ದೇಶಕಿ ಡಾ. ಉಮಾ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಸಂಗಪ್ಪ ಗಾಬಿ, ಆರೋಗ್ಯಾಧಿಕಾರಿ ಡಾ. ಸುಜಾತಾ ಹಸವಿಮಠ, ವೈದ್ಯಾಧಿಕಾರಿ ಡಾ. ತನುಜಾ, ಡಾ. ಗೌರಿ ಬೆಲ್ಲದ, ಡಾ. ಅಶ್ವಿನಿ ಇದ್ದರು. ಡಿಎಚ್‌ಒ ಡಾ. ಪರಶುರಾಮ ಎಫ್.ಕೆ. ಪ್ರಾಸ್ತಾವಿಕ ನುಡಿಗಳನ್ನಾಡಿದರು.ಸೈದಾಪುರದಲ್ಲಿ ಪಲ್ಸ್ ಪೋಲಿಯೋ
ನಗರದ ಸೈದಾಪುರ ಅಂಗನವಾಡಿ ಕೇಂದ್ರದ ವತಿಯಿಂದ ಕಲ್ಮೇಶ್ವರ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ''''''''ಪಲ್ಸ್ ಪೋಲಿಯೋ'''''''' ಲಸಿಕಾಕರಣದಲ್ಲಿ ಸಮಾನ ಮನಸ್ಕರ ವೇದಿಕೆಯ ಅಧ್ಯಕ್ಷ ಮೋಹನ ರಾಮದುರ್ಗ ಮಕ್ಕಳಿಗೆ ಪೋಲಿಯೋ ಲಸಿಕೆಯ ಎರಡು ಹನಿಗಳನ್ನು ಹಾಕುವ ಮೂಲಕ ಈ ಅಭಿಯಾನಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, "ಪೋಲಿಯೋ ಮುಕ್ತ ಸಮಾಜ ನಿರ್ಮಾಣದಲ್ಲಿ ಪ್ರತಿಯೊಬ್ಬ ಪಾಲಕರ ಪಾತ್ರವೂ ಪ್ರಮುಖ. ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆ ಹಾಕಿಸುವ ಮೂಲಕ ಮಕ್ಕಳ ಆರೋಗ್ಯಕರ ಭವಿಷ್ಯವನ್ನು ಕಾಪಾಡಬೇಕು ಎಂದರು.ಈ ಸಂದರ್ಭದಲ್ಲಿ ಗುರಯ್ಯ ಬಾಲ್ಯದಮಠ, ಪುಷ್ಪಾ ಮಜ್ಜಗಿ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತರಾದ ಮಂಜುಳಾ ದನದಮನಿ, ರಾಧಾ ವೀರಕರ, ರಾಣಿ ಹಡಪದ, ಸ್ಫೂರ್ತಿ ಯಡಳ್ಳಿ ಇದ್ದರು. ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ
ಕುಂದಗೋಳ: ತಾಲೂಕಿನಾದ್ಯಂತ ಐದು ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಭಾನುವಾರ ಚಾಲನೆ ನೀಡಲಾಯಿತು.ಮಗುವಿಗೆ ಪೋಲಿಯೋ ಹನಿ ಹಾಕುವ ಮೂಲತ ಚಾಲನೆ ನೀಡಿದ ತಹಸೀಲ್ದಾರ್ ರಾಜು ಮಾವರ್ಕರ್, ದೇಶದಾದ್ಯಂತ ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವುದು ಸರ್ಕಾರದ ಪ್ರಮುಖ ಉದ್ದೇಶವಾಗಿದೆ. ತಾಲೂಕಿನ ಪ್ರತಿಯೊಂದು ಮಗುವಿಗೂ ಕಡ್ಡಾಯವಾಗಿ ಲಸಿಕೆ ತಲುಪಬೇಕು. ಇದರ ನಿರ್ಮೂಲನೆಯ ಕುರಿತು ಪೋಷಕರಲ್ಲಿ ಜಾಗೃತಿ ಮೂಡಿಸುವ ಮೂಲಕ ಈ ರಾಷ್ಟ್ರೀಯ ಅಭಿಯಾನವನ್ನು ತಾಲೂಕಿನಲ್ಲಿ ಸಂಪೂರ್ಣ ಯಶಸ್ವಿಗೊಳಿಸಬೇಕೆಂದು ಕರೆ ನೀಡಿದರು.ತಾಲೂಕು ಆರೋಗ್ಯಾಧಿಕಾರಿ ಮಂಜುನಾಥ್ ಮಾತನಾಡಿದರು. ಜಿಲ್ಲಾ ಮೇಲ್ವಿಚಾರಕ ಅಶೋಕ ಪತ್ತಾರ, ಆರೋಗ್ಯ ನಿರೀಕ್ಷಣಾಧಿಕಾರಿ ವಿರೇಶ ಅಂಗಡಿ ಸೇರಿದಂತೆ ತಾಲೂಕು ಮಟ್ಟದ ಆರೋಗ್ಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.