ಪೋಲಿಯೋ ಒಂದು ವೈರಸ್‌ನಿಂದ ಬರುವ ಖಾಯಿಲೆಯಾಗಿದ್ದು, ಇದನ್ನು ಪೋಲಿಯೋ ಮೈಲೈಟಿಸ್ ಎಂದು ಕರೆಯುವುದಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್. ಚಿದಂಬರ ಹೇಳಿದರು.
ಕನ್ನಡಪ್ರಭ ವಾರ್ತೆ, ಚಾಮರಾಜನಗರ
ಪೋಲಿಯೋ ಒಂದು ವೈರಸ್‌ನಿಂದ ಬರುವ ಖಾಯಿಲೆಯಾಗಿದ್ದು, ಇದನ್ನು ಪೋಲಿಯೋ ಮೈಲೈಟಿಸ್ ಎಂದು ಕರೆಯುವುದಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್. ಚಿದಂಬರ ಹೇಳಿದರು.ನಗರದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಮಟ್ಟದ ಪಲ್ಸ್ ಪೋಲಿಯೋ ಜಾಥಾಗೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ಪೋಲಿಯೋ ಲಸಿಕೆಯನ್ನು ಹಾಕಿಸುವುದರಿಂದ ಅಂಗವಿಕಲತೆಯನ್ನು ತಡೆಗಟ್ಟಬಹುದು, ಪೋಲಿಯೋ ಖಾಯಿಲೆಯು ಸಾಮಾನ್ಯವಾಗಿ ಕಲುಷಿತ ನೀರು ಮತ್ತು ಆಹಾರದಿಂದ ಹರಡುತ್ತದೆ. ವೈಲ್ಡ್ ಪೋಲಿಯೋ ವೈರಸ್ ಮಲದ ಮೂಲಕ ಹರಡುತ್ತದೆ ಎಂದರು.ನಮ್ಮ ದೇಶದಲ್ಲಿ ೨೦೧೧ರಲ್ಲಿ ಕೊನೆಯ ಪೋಲಿಯೋ ಪ್ರಕರಣ ವರದಿಯಾಗಿತ್ತು. ತದನಂತರ ಯಾವುದೇ ಪ್ರಕರಣಗಳು ವರದಿಯಾಗಿಲ್ಲ. ಆದ ಕಾರಣ ೨೦೧೪ರಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಭಾರತವನ್ನು "ಪೋಲಿಯೋ ಮುಕ್ತ ದೇಶ "ವೆಂದು ಘೋಷಿಸಿತು. ಆದರೂ ನೆರೆಯ ರಾಜ್ಯಗಳಾದ ಪಾಕಿಸ್ತಾನ ಮತ್ತು ಅಫ್ಘಾನಿಸ್ಥಾನದಲ್ಲಿ ಕೆಲವು ಪ್ರಕರಣಗಳು ವರದಿಯಾಗುತ್ತಿರುವ ಹಿನ್ನಲೆಯಲ್ಲಿ ನಮ್ಮ ದೇಶದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ. ಪೋಲಿಯೋ ನಿರ್ಮೂಲನೆ ಮಾಡಲು ತಾವೆಲ್ಲರೂ ಕೈಜೋಡಿಸಬೇಕು ಎಂದು ತಿಳಿಸಿದರು.
ಜಿಲ್ಲಾ ಆರ್.ಸಿ. ಎಚ್ ಅಧಿಕಾರಿ ಡಾ. ರಾಜೇಶ್ ಕುಮಾರ್ ಮಾತನಾಡಿ, ಪಲ್ಸ್ ಪೋಲಿಯೋ ಕಾರ್ಯಕ್ರಮವು ಡಿಸೆಂಬರ್ ೨೧ ರಿಂದ ೨೪ರವರೆಗೆ ನಡೆಯಲಿದ್ದು ಮೂರು ದಿನ ಗ್ರಾಮೀಣ ಪ್ರದೇಶಗಳಲ್ಲಿ ಹಾಗೂ ನಾಲ್ಕು ದಿನ ಪಟ್ಟಣ ಪ್ರದೇಶಗಳಲ್ಲಿ ಹಮ್ಮಿಕೊಳ್ಳಲಾಗಿದೆ. ಈಗತಾನೇ ಹುಟ್ಟಿದ ಮಗುವಿನಿಂದ ೫ ವ?ದೊಳಗಿನ ಒಟ್ಟು ೬೧೧೬೧ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದರು.ಪೊಲೀಯೋ ಲಸಿಕೆ ನೀಡಲು ಜಿಲ್ಲಾ ವ್ಯಾಪ್ತಿಯಲ್ಲಿ ೬೪೧ ಬೂತ್‌ಗಳನ್ನು ತೆರೆಯಲಾಗಿದೆ. ಪಲ್ಸ್ ಪೋಲಿಯೋ ಅಭಿಯಾನದಲ್ಲಿ ಜಿಲ್ಲೆಯಲ್ಲಿ ಒಟ್ಟು ೨೫೨೮ ವ್ಯಾಕ್ಸಿನೇಟರ್‌ಗಳು ಹಾಗೂ ೧೩೦ ಮೇಲ್ವಿಚಾರಕರು ಕಾರ್ಯನಿರ್ವಹಿಸಲಿದ್ದಾರೆ ಎಂದು ತಿಳಿಸಿದರು.
ರೋಟರಿ ಸಂಸ್ಥೆಯ ಅಧ್ಯಕ್ಷ ಕಾಗಲವಾಡಿ ಚಂದ್ರಶೇಖರ್ ಮಾತನಾಡಿ, ಪೋಲಿಯೋ ನಿರ್ಮೂಲನೆ ಮಾಡಲು ರಾಜ್ಯಾದ್ಯಂತ ರೋಟರಿ ಸಂಸ್ಥೆಯು ಕಳೆದ ೩೦ ವರ್ಷಗಳಿಂದ ನಿರಂತರವಾಗಿ ಕಾರ್ಯನಿರ್ವಹಿಸಿಕೊಂಡು ಬಂದಿದ್ದು ಪೋಲಿಯೋ ಮುಕ್ತ ಭಾರತ ನಿರ್ಮಾಣಕ್ಕೆ ಕೈಜೋಡಿಸಿದೆ ಎಂದರು.ತಾಲೂಕು ಆರೋಗ್ಯಾಧಿಕಾರಿ ಡಾ. ಶ್ರೀನಿವಾಸ್, ನಗರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಲೋಕೇಶ್, ರೋಟರಿ ಸಂಸ್ಥೆಯ ರೋಟೆರಿಯನ್ ಚಂದ್ರಪ್ರಭ ಜೈನ್, ಜಿ.ಎಸ್.ಎಸ್ ನಸಿಂಗ್ ಶಾಲೆಯ ಬೋಧಕರಾದ ಮಧು, ಜಿಲ್ಲಾ ಆರೋಗ್ಯ ಮೇಲ್ವಿಚಾರಣಾಧಿಕಾರಿ ವೆಂಕಟೇಶ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ದೊರೆಸ್ವಾಮಿ ನಾಯ್ಕ, ಜಿಲ್ಲಾ ಶುಶ್ರೂ?ಣಾಧಿಕಾರಿ ಮಣಿಯಮ್ಮ, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರಾದ ದುಶ್ಯಂತ್ ಕುಮಾರ್, ಇತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.