ಸಾರಾಂಶ
ಹುಮನಾಬಾದ್: ಹುಮನಾಬಾದ್, ಚೀಟಗುಪ್ಪಾ ತಾಲೂಕಿನಾದ್ಯಂತ ಮಾ.3ರಿಂದ 6ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಾಲೂಕು ವೈದ್ಯಾಧಿಕಾರಿ ಶಿವಕುಮಾರ ಸಿದ್ದೇಶ್ವರ ಮಾಹಿತಿ ನೀಡಿದರು.
ತಾಲೂಕು ಆಡಳಿತ ಸೌಧದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಪೂರ್ವಭಾವಿಯಾಗಿ ತಾಲೂಕುಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾಹಿತಿ ನೀಡಿದ ಎರಡು ತಾಲೂಕಿನ 5 ವರ್ಷದೊಳಗಿನ ಮಕ್ಕಳ ಸಮೀಕ್ಷೆ ಕಾರ್ಯ ಕೈಗೊಂಡು ಪೋಲಿಯೋ ಲಸಿಕೆಯಿಂದ ಮಕ್ಕಳು ವಂಚಿತರಾಗದಂತೆ 31978 ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ.ಈ ಹಿಂದೆ ವರ್ಷದಲ್ಲಿ ಎರಡು ಸುತ್ತಿನಲ್ಲಿ ಲಸಿಕೆ ನೀಡಲಾಗುತ್ತಿತ್ತು. ಆದರೆ, ಈಗ ಒಂದೇ ಸುತ್ತಿನಲ್ಲಿ ಲಸಿಕೆ ನೀಡಲಾಗುವುದೆಂದು ಸಭೆಯ ಗಮನಕ್ಕೆ ತಂದ ಅವರು, ಒಟ್ಟು 10 ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ 54 ಉಪ ಕೇಂದ್ರ, 3 ಸಮುದಾಯ ಆರೋಗ್ಯ ಕೇಂದ್ರ, ಸಾವರ್ಜನಿಕ ಆಸ್ಪತ್ರೆ ಸೇರಿದಂತೆ 181 ಬೂತ್ಗಳಲ್ಲಿ 400 ಸಿಬ್ಬಂದಿ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ತಂಡ 5 ವರ್ಷದ ಪ್ರತಿ ಮಗುವಿಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮ ಮೂಲಕ ಪಾಲ್ಗೊಳ್ಳಲಿದ್ದಾರೆ.
ಮಾ.4ರಿಂದ ಪಲ್ಸ್ ಪೋಲಿಯೋ ಲಸಿಕೆ ಮನೆ ಮನೆಗಳಿಗೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಈ ಒಂದು ಲಸಿಕಾ ಕಾರ್ಯಕ್ರಮ ಜರುಗಲಿದೆ. ಇದಕ್ಕೆ ಸಾರ್ವಜನಿಕರು ಹಾಗೂ ಇತರೆ ಸಂಘ ಸಂಸ್ಥೆಗಳು ಕೈಜೊಡಿಸುವ ಮೂಲಕ ಯಶಸ್ಸಿಗೋಳಿಸಬೇಕೆಂದು ಮನವಿ ಮಾಡಿದರು.ಗ್ರೇಡ-2 ತಹಸೀಲ್ದಾರ್ ಮಂಜುನಾಥ ಪಂಚಾಳ, ಶಿರಸ್ತೆದಾರ ಶಿವಕುಮಾರ ಮಠಪತಿ, ಆರೋಗ್ಯ ಅಧಿಕಾರಿಗಳಾದ ಮೋಹನದಾಸ ಕುಲಕರ್ಣಿ, ವಿಕಾಸ ಕುಲಕರ್ಣಿ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು ಸಭೆಯಲ್ಲಿದ್ದರು.