ಕನ್ನಡಪ್ರಭ ವಾರ್ತೆ ಬೇಲೂರುಮಾಜಿ ಶಾಸಕ ಕೆ ಎಸ್ ಲಿಂಗೇಶ್ ಅವರ ಬಂಧನವು ರಾಜಕೀಯ ಕುತಂತ್ರ ಹಾಗೂ ಕೆಲ ಅಧಿಕಾರಿಗಳ ಷಡ್ಯಂತ್ರದಿಂದ ನಡೆದಿದ್ದು ಉದ್ದೇಶಪೂರ್ವಕವಾಗಿ ಬಗರ್‌ಹುಕುಂ ಅರ್ಜಿ ವಿಲೇವಾರಿ ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಘಟಕ ಅಧ್ಯಕ್ಷ ಅಡಗೂರು ಬಸವರಾಜು ಹೇಳಿದರು.ತಾಲೂಕು ಪತ್ರಕರ್ತರ ಸಂಘದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 2013ರಿಂದ 2023ರ ಅವಧಿಯಲ್ಲಿ ಒಟ್ಟು 2,750 ಅರ್ಜಿಗಳು ವಿಲೇವಾರಿಯಾಗಿದ್ದು, ಲಿಂಗೇಶ್ ಅವರ ಅಧಿಕಾರಾವಧಿಯಲ್ಲಿ ಕೇವಲ 200ರಿಂದ 250 ಅರ್ಜಿಗಳು ಮಾತ್ರ ಇತ್ಯರ್ಥವಾಗಿದೆ. ಈ ಪ್ರಕ್ರಿಯೆಯಲ್ಲಿ ಅವರ ಯಾವುದೇ ವೈಯಕ್ತಿಕ ತಪ್ಪನ್ನು ಮಾಜಿ ಶಾಸಕ ಕೆಂಗೇಶ್ ಮಾಡಿಲ್ಲ. ತಾಲೂಕಿನಲ್ಲಿ ಸುಮಾರು 26 ಸಾವಿರ ಅರ್ಜಿಗಳು ಬಾಕಿ ಇದ್ದು, ಅವುಗಳಲ್ಲಿ 10 ಸಾವಿರ ಅರ್ಜಿಗಳು ತಿರಸ್ಕೃತಗೊಂಡಿದ್ದು, 16 ಸಾವಿರ ಅರ್ಜಿಗಳು ಇನ್ನೂ ವಿಲೇವಾರಿಯಾಗದೆ ಉಳಿದಿವೆ. ಈ ಎಲ್ಲ ಅರ್ಜಿಗಳ ಕುರಿತು ಕ್ರಮ ಕೈಗೊಳ್ಳದ ಸರ್ಕಾರ ಕೇವಲ ಲಿಂಗೇಶ್ ಅವರ ಮೇಲೆಯೇ ದ್ವೇಷದ ರಾಜಕಾರಣ ನಡೆಸುತ್ತಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.ಉಪಾಧ್ಯಕ್ಷ ಯೊಗೇಶ್ ಮಾತನಾಡಿ, ಮಾಜಿ ಶಾಸಕ ಲಿಂಗೇಶ್ ಅವರು ತಮ್ಮ ಅಧಿಕಾರಾವಧಿಯಲ್ಲಿ ರೈತರ ಪರವಾಗಿ ನಿರಂತರ ಹೋರಾಟ ನಡೆಸಿ, ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತ ಬಂದಿದ್ದಾರೆ. ಪ್ರತಿ ಹಂತದಲ್ಲೂ ರೈತರ ಹಿತಕ್ಕಾಗಿ ಹೋರಾಟಗಳಲ್ಲಿ ಭಾಗವಹಿಸಿ ಜನಪರ ಕಾಳಜಿಯನ್ನು ತೋರಿದ್ದಾರೆ. ಅಕ್ರಮ-ಸಕ್ರಮ ದಾಖಲೆಗಳ ಮಂಜೂರಾತಿ ಪ್ರಕ್ರಿಯೆಯಲ್ಲಿ ಯಾವುದೇ ದೊಡ್ಡ ಮಟ್ಟದ ತಪ್ಪುಗಳು ನಡೆದಿಲ್ಲ. ಒಂದು ವೇಳೆ ಸಣ್ಣಪುಟ್ಟ ದೋಷಗಳಿದ್ದರೂ ಅದನ್ನು ಉದ್ದೇಶಪೂರ್ವಕವಾಗಿ ದೊಡ್ಡ ತಪ್ಪಾಗಿ ಬಿಂಬಿಸಲಾಗುತ್ತಿದೆ ಎಂದು ಆರೋಪಿಸಿದರು.ಪ್ರಧಾನ ಕಾರ್ಯದರ್ಶಿ ಮದನ್ ಬಳ್ಳೂರು ಮಾತನಾಡಿ, ಮಾಜಿ ಶಾಸಕರ ಬಂಧನವನ್ನು ವೀರಶೈವ ಲಿಂಗಾಯತ ಮಹಾಸಭಾ ತೀವ್ರವಾಗಿ ಖಂಡಿಸಿದ್ದು, ಜನಪರ ಹೋರಾಟಗಾರನ ವಿರುದ್ಧ ಈ ರೀತಿಯ ಕ್ರಮ ಕೈಗೊಳ್ಳುವುದು ರಾಜಕೀಯ ದುರುದ್ದೇಶದಿಂದ ಕೂಡಿದೆ ಎಂದರು.
ಈ ಸಂದರ್ಭದಲ್ಲಿ , ಖಜಾಂಚಿ ರಾಜಣ್ಣ, ಪ್ರಧಾನ ಕಾರ್ಯದರ್ಶಿ ಮದನ್ ಬಳ್ಳೂರು, ಯುವ ಘಟಕದ ಅದ್ಯಕ್ಷ ಚೇತನ್ ಹಳೇಬೀಡು ಇದ್ದರು.ಲಿಂಗೇಶ್ ಬಂಧನದ ಹಿಂದೆ ರಾಜಕೀಯ ಕುತಂತ್ರ
ಯಾವುದೇ ವೈಯಕ್ತಿಕ ತಪ್ಪನ್ನು ಮಾಜಿ ಶಾಸಕ ಕೆಂಗೇಶ್ ಮಾಡಿಲ್ಲ. ತಾಲೂಕಿನಲ್ಲಿ ಸುಮಾರು 26 ಸಾವಿರ ಅರ್ಜಿಗಳು ಬಾಕಿ ಇದ್ದು, ಅವುಗಳಲ್ಲಿ 10 ಸಾವಿರ ಅರ್ಜಿಗಳು ತಿರಸ್ಕೃತಗೊಂಡಿದ್ದು, 16 ಸಾವಿರ ಅರ್ಜಿಗಳು ಇನ್ನೂ ವಿಲೇವಾರಿಯಾಗದೆ ಉಳಿದಿವೆ. ಈ ಎಲ್ಲ ಅರ್ಜಿಗಳ ಕುರಿತು ಕ್ರಮ ಕೈಗೊಳ್ಳದ ಸರ್ಕಾರ ಕೇವಲ ಲಿಂಗೇಶ್ ಅವರ ಮೇಲೆಯೇ ದ್ವೇಷದ ರಾಜಕಾರಣ ನಡೆಸುತ್ತಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.