ಸಾರಾಂಶ
ಕನ್ನಡಪ್ರಭ ವಾರ್ತೆ ಕೋಲಾರಜಿಲ್ಲೆಯಲ್ಲಿನ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಕಂಪ್ಯೂಟರ್ ಆಪರೇಟರ್ ಸೊಸೈಟಿಯ ಎರಡು ಕಣ್ಣುಗಳಿದ್ದಂತೆ. ಯಾರು ದಾರಿ ತಪ್ಪಿದರೂ ಸಂಘದ ಅವನತಿಗೆ ಕಾರಣವಾಗುತ್ತದೆ. ಈ ನಿಟ್ಟಿನಲ್ಲಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕೆಂದು ಜಿಲ್ಲಾ ಸಹಕಾರ ಒಕ್ಕೂಟದ ಪಾಕರಹಳ್ಳಿ ಪಿ.ಎಂ. ವೆಂಕಟೇಶ್ ಅಭಿಪ್ರಾಯಪಟ್ಟರು.ಬಂಗಾರಪೇಟೆ, ಕೆ.ಜಿ.ಎಫ್ ಮತ್ತು ಮುಳಬಾಗಿಲು ತಾಲೂಕುಗಳ ವ್ಯಾಪ್ತಿಯಲ್ಲಿ ಬರುವ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಸಹಕಾರ ಸಂಘಗಳ ಮುಖ್ಯಕಾರ್ಯನಿರ್ವಹಣಾಧಿಕಾರಿಗಳಿಗೆ ಮತ್ತು ಕಂಪ್ಯೂಟರ್ ಆಪರೇಟರ್‌ಗಳಿಗೆ ನಗರದ ಜಿಲ್ಲಾ ಸಹಕಾರ ಒಕ್ಕೂಟದ ಸಭಾಂಗಣದಲ್ಲಿ ಒಂದು ದಿನದ ಜಿಲ್ಲಾ ಮಟ್ಟದ ವಿಶೇಷ ತರಬೇತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಬ್ಯಾಂಕ್‌ಗೆ ಜೀವ ತುಂಬಿದ್ದ ಬ್ಯಾಲಹಳ್ಳಿ
ಬ್ಯಾಲಹಳ್ಳಿ ಗೋವಿಂದಗೌಡರು ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷರಾದ ವೇಳೆ ಬ್ಯಾಂಕಿನ ಅಭಿವೃದ್ಧಿಯ ಜೊತೆಗೆ ಸಹಕಾರ ಕ್ಷೇತ್ರ, ಸೊಸೈಟಿಗಳ ಮೂಲಕ ರೈತರಿಗೆ, ಮಹಿಳಾ ಸಂಘಗಳಿಗೆ ಸಾಲ ನೀಡುವ ಮೂಲಕ ಸ್ವಾವಲಂಭಿ ಜೀವನಕ್ಕೆ ದಾರಿ ಮಾಡಿಕೊಟ್ಟಿದ್ದರು. ಆದರೆ ಇತ್ತೀಚೆಗೆ ಕೆಲವರ ವಕ್ರ ದೃಷ್ಟಿಯಿಂದ ಬ್ಯಾಂಕ್ ಸ್ಥಿತಿ ಶೋಚನೀಯ ಎಂದು ಬೇಸರಿಸಿದರು.ಜಿಲ್ಲಾ ಸಹಕಾರ ಒಕ್ಕೂಟದ ನಿರ್ದೇಶಕ ಉರಿಗಿಲಿ ಎಸ್.ಆರ್.ರುದ್ರಸ್ವಾಮಿ ಮಾತನಾಡಿ, ಡಿ.ಸಿ.ಸಿ ಬ್ಯಾಂಕಿನ ಹೆಸರನ್ನು ರಾಷ್ಟ್ರಮಟ್ಟದಲ್ಲಿ ಬೆಳೆಗಿಸಿದ ಕೀರ್ತಿ ಗೋವಿಂದಗೌಡರಿಗೆ ಸಲ್ಲುತ್ತದೆ. ಗೋವಿಂದಗೌಡರ ಏಳಿಗೆ ಸಹಿಸಿದ ಸಂಸ್ಥೆಯ ಮೇಲೆ ರಾಜಕಾರಣ ಮಾಡಿ ಸಂಸ್ಥೆಯನ್ನು ಹಾಳು ಮಾಡಲು ಮುಂದಾಗಿರುವುದು ನಾಚಿಕಗೇಡಿನ ಸಂಗತಿ ಎಂದರು.ಸಹಕಾರ ಕ್ಷೇತ್ರದಲ್ಲಿ ರಾಜಕೀಯರಾಜಕಾರಣ ಮಾಡಲು ಅನೇಕ ಕ್ಷೇತ್ರಗಳಿವೆ. ಆದರೆ ವ್ಯಕ್ತಿಯ ಮೇಲಿನ ಕೋಪದಿಂದ ಸಹಕಾರಿ ಕ್ಷೇತ್ರವನ್ನು ನಾಶ ಮಾಡಲು ಮುಂದಾಗಿರುವುದು ಸರಿಯೇ, ಬ್ಯಾಂಕಿನ ಅಭಿವೃದ್ದಿಯಲ್ಲಿ ಎಲ್ಲರೂ ಸಹಕರಿಸಬೇಕೆಂದು ಕಿವಿಮಾತು ಹೇಳಿದರು.ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಯೋಜನೆ ಮತ್ತು ಅಭಿವೃದ್ಧಿ ವಿಭಾಗದ ವ್ಯವಸ್ಥಾಪಕ ಹುಸೇನ್ ಸಾಬ್. ಎಂ.ದೊಡ್ಡಮನಿ ಅವರು ಲೆಕ್ಕ ಪತ್ರಗಳ ನಿರ್ವಹಣೆ ಕುರಿತು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಸಹಕಾರ ಒಕ್ಕೂಟದ ಉಪಾಧ್ಯಕ್ಷ ಕಲ್ವಮಂಜಲಿ ಟಿ.ಕೆ.ಬೈರೇಗೌಡ, ಸಿ.ಇ.ಒ ಭಾರತಿ ಕೆ.ಎಂ, ಲಕ್ಷ್ಮೀದೇವಮ್ಮ, ರವಿಕುಮಾರ್ ಇದ್ದರು.