ಸಾರಾಂಶ
ಶಿಗ್ಗಾಂವಿ: ಬಿಜೆಪಿಯವರಿಗೆ ಮಾಡಲು ಬೇರೆ ಕೆಲಸವಿಲ್ಲದೆ ವಕ್ಫ್ ವಿಷಯವನ್ನು ಇಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ. ಈಗಾಗಲೆ ಮುಖ್ಯಮಂತ್ರಿಗಳು ಸ್ಪಷ್ಟವಾಗಿ ಹೇಳಿದ್ದಾರೆ. ಯಾವ ರೈತರಿಗೂ ನೋಟಿಸ್ ಕೊಟ್ಟಿಲ್ಲ, ಕೊಟ್ಟಿದ್ದರು ವಾಪಸ್ ತಗೊಬೇಕೆಂದು ಆದೇಶ ಮಾಡಿದ್ದಾರೆ ಎಂದು ಮಾಜಿ ಶಾಸಕ ಅಜ್ಜಂಪಿರ್ ಖಾದ್ರಿ ಹೇಳಿದರು.ಶಿಗ್ಗಾಂವಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಬೆಂಗಳೂರಿನ ಹಜ್ ಭವನದಲ್ಲಿ ಮೌಲ್ವಿಗಳು, ವಕ್ಫ್ ಸಂಸ್ಥೆಯ ಅಧ್ಯಕ್ಷರು, ಪ್ರತಿನಿಧಿಗಳ ಸಭೆಯಲ್ಲಿ ಉರ್ದು ಭಾಷೆಯಲ್ಲಿ ಅವತ್ತು ಬಹಳ ಸ್ಪಷ್ಪವಾಗಿ ಹೇಳಿದ್ದಾರೆ. ವಕ್ಫ್ ಆಸ್ತಿ ಎಂದರೆ ಅದು ಅಲ್ಲಾನ ಆಸ್ತಿ, ಪರಮಾತ್ಮನ ಆಸ್ತಿ ,ಆ ಆಸ್ತಿಯನ್ನು ರಕ್ಷಣೆ ಮಾಡುವ ಜವಾಬ್ದಾರಿ ವಕ್ಫ್ ಸಂಸ್ಥೆಗಿದೆ. ನಿಮ್ಮ ವಕ್ಫ್ ಆಸ್ತಿ ಬಹಳ ಇದೆ, ಅದನ್ನು ಯಾರ್ಯಾರೂ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಅದನ್ನು ರಕ್ಷಣೆ ಮಾಡಿ, ನಾನು ನಿಮ್ಮ ಜತೆ ಇರುತ್ತೇನೆ ಎಂದು ಅಂದು ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ ಅವರೇ ಸ್ವತಃ ಹೇಳಿದ್ದ ವಿಡಿಯೋ ಇದೆ. ಹಾಗಾಗಿ ಈ ರಾಜ್ಯದಲ್ಲಿ ನಡೆಯುತ್ತಿರುವ ಉಪ ಚುನಾವಣೆ ಹಿನ್ನೆಲೆಯಲ್ಲಿ ಸುಮ್ಮನೆ ಗೊಂದಲ ಸೃಷ್ಟಿ ಮಾಡುವ ಹಿನ್ನೆಲೆಯಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ. ಆದರೆ ಮುಖ್ಯಮಂತ್ರಿಗಳು ನೋಟಿಸ್ ವಾಪಸ್ ತಗೆದುಕೊಳ್ಳಬೇಕು ಎಂದು ಆದೇಶ ಮಾಡಿದ ಹಿನ್ನೆಲೆಯಲ್ಲಿ ರೈತರು ಸಿಹಿ ಹಂಚಿ ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಹಾಗಾಗಿ ಶಿಗ್ಗಾಂವಿಯಲ್ಲಿ ಇಂದು ಸುಮ್ಮನೆ ಪ್ರತಿಭಟನೆ ಹೆಸರಲ್ಲಿ ಗೊಂದಲ ಸೃಷ್ಟಿಸಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿರುವುದು ಸರಿ ಅಲ್ಲ ಎಂದರು.ಬಸವರಾಜ ಜೇಕಿನಕಟ್ಟಿ, ರವಿ ಕೋಣಪ್ಪನವರ, ಬೀರೇಶಕುಮಾರ ಜೆಟ್ಟೆಪ್ಪನವರ ಇದ್ದರು.