ಸಾರಾಂಶ
ರಾಜ್ಯಪಾಲರ ಮೂಲಕ ದ್ವೇಷದ ರಾಜಕೀಯ: ಶ್ರೀನಿವಾಸ್
ಕನ್ನಡಪ್ರಭವಾರ್ತೆ ದಾಬಸ್‌ಪೇಟೆ
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರ ಮೂಲಕ ಕೇಂದ್ರ ಸರ್ಕಾರ ದ್ವೇಷದ ರಾಜಕೀಯ ಮಾಡುತ್ತಿದೆ ಎಂದು ಶಾಸಕ ಎನ್.ಶ್ರೀನಿವಾಸ್ ಆರೋಪಿಸಿದರು.ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕರು, ಸಿಎಂ ಹಾಗೂ ಡಿಸಿಎಂ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಎಲ್ಲಾ ನಮ್ಮ ಶಾಸಕರು, ಸಚಿವರು, ನಾಯಕರು ಸರ್ವಾನುಮತದಿಂದ ಮಾನ್ಯ ಮುಖ್ಯಮಂತ್ರಿಗಳಿಗೆ ಬೆಂಬಲ ಸೂಚಿಸಿದ್ದೇವೆ. ಯಾವ ತನಿಖೆಯೂ ಇಲ್ಲದೆ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸುತ್ತೇವೆ. ಇಡೀ ರಾಜ್ಯದ ಜನತೆ ೧೩೬ ಸೀಟುಗಳ ಗೆಲುವು ನೀಡಿ, ನಮ್ಮ ಸರ್ಕಾರಕ್ಕೆ ಆಡಳಿತ ಮಾಡಲು ಅವಕಾಶ ಮಾಡಿಕೊಟ್ಟಿರುವುದನ್ನು ಸಹಿಸದ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದವರು ಸರ್ಕಾರವನ್ನು ಉರುಳಿಸಲು ಹೊರಟಿದ್ದಾರೆ. ಅವರು ಏನೇ ಮಾಡಿದರೂ ನಮ್ಮ ಸರ್ಕಾರವನ್ನು ಬೀಳಿಸಲು ಸಾಧ್ಯವಿಲ್ಲ ಎಂದರು.