ಶಿಕ್ಷಕರ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಲೋಕೇಶ್‌ ಪರ ಮತಯಾಚನೆ

| Published : May 20 2024, 01:32 AM IST

ಶಿಕ್ಷಕರ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಲೋಕೇಶ್‌ ಪರ ಮತಯಾಚನೆ
Share this Article
  • FB
  • TW
  • Linkdin
  • Email

ಸಾರಾಂಶ

ಆಗ್ನೇಯ ಶಿಕ್ಷಕರ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ಮತಯಾಚನೆ ಮಾಡಿದರು.

ಕನ್ನಡಪ್ರಭ ವಾರ್ತೆ ಮುಳಬಾಗಿಲು ಶಿಕ್ಷಕರ ಕ್ಷೇತ್ರದ ಎಲ್ಲಾ ಸಮಸ್ಯೆಗಳನ್ನು ಸಂಪೂರ್ಣವಾಗಿ ಪರಿಹರಿಸಲು ಕರ್ನಾಟಕ ರಾಜ್ಯ ಖಾಸಗಿ ಶಾಲಾ ಕಾಲೇಜುಗಳ ಸಂಘ 3 ಬಾರಿ ವೈ.ಎ.ನಾರಾಯಣ ಸ್ವಾಮಿಗೆ ಸಹಕಾರ ನೀಡಿ ಗೆಲ್ಲಿಸಿದರೂ, ಶಿಕ್ಷಕರ ಸಮಸ್ಯೆಗಳನ್ನು ಪರಿಹರಿಸಿಲ್ಲ. ಹೀಗಾಗಿ ರೂಪ್ಸಾಯಿಂದಲೇ ಅಭ್ಯರ್ಥಿಯಾಗಿ ಚುನಾವಣೆಗೆ ನಿಲ್ಲಲಾಗಿದೆ ಎಂದು ಆಗ್ನೇಯ ಶಿಕ್ಷಕರ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ಹೇಳಿದರು.ನಗರದ ಹಾಗೂ ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಮತ ಪ್ರಚಾರ ನಡೆಸಿ ಮಾತನಾಡಿ, ೨೦ ವರ್ಷದಿಂದ ಶಿಕ್ಷಣ ವ್ಯವಸ್ಥೆ ಸೊರಗಿದ್ದು ಶಿಕ್ಷಣ ಹಾಗೂ ಶಿಕ್ಷಕರ ಬಗ್ಗೆ ವಿಧಾನ ಪರಿಷತ್ತಿನಲ್ಲಿ ಮಾತನಾಡುವವರೇ ಇಲ್ಲವಾಗಿದೆ ಎಂದರು.ಖಾಸಗಿ ಶಿಕ್ಷಕರ ಸಮಸ್ಯೆಗಳು ರಾಜ್ಯದಲ್ಲಿ ಬೆಟ್ಟದಷ್ಟಿದೆ, ಸಮಸ್ಯೆಗಳಿಂದ ಈಚೆಗೆ 5 ಮಂದಿ ಶಿಕ್ಷಕರು ಆತ್ಮಹತ್ಯೆ ಮಾಡಿಕೊಂಡರೂ ವಿಪ ಸದಸ್ಯ ವೈ.ಎ.ನಾರಾಯಣ ಸ್ವಾಮಿ ಕನಿಷ್ಠ ಸೌಜನ್ಯಕ್ಕಾದರೂ ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿಲ್ಲ. 3 ಬಾರಿ ಶಿಕ್ಷಕರ ಕ್ಷೇತ್ರದಿಂದ ವೈ.ಎ.ಎನ್‌ರನ್ನು ಗೆಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಟೀಕಿಸಿದರು.ಖಾಸಗಿ ಶಾಲೆಗಳಲ್ಲಿ ಕರ್ತವ್ಯ ನೀಡುವವರಿಗೆ ಕನಿಷ್ಠ ವೇತನವಿಲ್ಲ, ವೇತನ ತಾರತಮ್ಯವಾಗಿದೆ, ಯಾವುದೇ ಭದ್ರತೆಯಿಲ್ಲ, ಟಿ.ಡಿ.ಎಫ್ ಸದಸ್ಯತ್ವವೂ ಇಲ್ಲದೆ ಖಾಸಗಿ ಶಿಕ್ಷಕರು ಅತಂತ್ರ ಸ್ಥಿತಿಯಲ್ಲಿ ಬದುಕು ಸಾಗಿಸುತ್ತಿದ್ದಾರೆ. ಇದರಿಂದ ನನ್ನನ್ನು ಗೆಲ್ಲಿಸಿದರೆ ಖಾಸಗೀ ಶಿಕ್ಷಕರ ಹಾಗೂ ಶಾಲೆಗಳ ಸಂಪೂರ್ಣ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಹೇಳಿದರು.ಈಗಾಗಲೇ ನಡೆಸಿದ ಹಲವಾರು ಹೋರಾಟಗಳಲ್ಲಿ ಅನುದಾನ ರಹಿತ ಶಿಕ್ಷಕರಿಗೆ ಕೋವಿಡ್ ಪ್ಯಾಕೇಜ್ ಒದಗಿಸಲಾಗಿದೆ, ಶಿಕ್ಷಕರ ಕಲ್ಯಾಣ ನಿಧಿ ಸಂಸ್ಥೆಯಲ್ಲಿ ನಗದು ರಹಿತ ಆರೋಗ್ಯ ವಿಮಾ ಸೌಲಭ್ಯ ಒದಗಿಸಲಾಗಿದೆ, ಸರ್ಕಾರಿ ಶಾಲೆಗಳಲ್ಲಿ ೧೫ ಸಾವಿರ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಆದೇಶ ಮಾಡಿಸಲಾಗಿದೆ, ೮ ನೆಯ ತರಗತಿ ಬೋರ್ಡ್ ಪರೀಕ್ಷೆ ನಡೆಸುವಂತಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯದಲ್ಲಿ ತೀರ್ಪು ಪಡೆದಿದ್ದು ಹಾಗೂ ಅನ್ಯ ಪಠ್ಯಕ್ರಮದ ಅನುಮತಿಗೆ ಡಿಡಿಪಿಐಗೆ ಅಧಿಕಾರ ನೀಡುವಂತೆ ಮಾಡಲಾಗಿದೆ ಎಂದು ಹೇಳಿದರು.ಚುನಾವಣೆಯಲ್ಲಿ ಗೆದ್ದರೆ ಹಳೆಯ ಪಿಂಚಣಿ ವ್ಯವಸ್ಥೆ ಜಾರಿ, ಕಾಲ್ಪನಿಕ ವೇತನ, ಬಡ್ತಿ ಶಿಕ್ಷಕರಿಗೆ ಟೈಮ್ ಬಾಂಡ್, ಅನುದಾನ ರಹಿತ ಶಾಲೆಗಳ ಶಿಕ್ಷಕರಿಗೆ ಸೇವಾ ಭದ್ರತೆ ಮತ್ತಿತರ ೧೪ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮಾಡಲಾಗುವುದು ಎಂದು ಹೇಳಿದರು. ರೂಪ್ಸಾ ರಾಜ್ಯ ಉಪಾಧ್ಯಕ್ಷ ಮುನಿಯಪ್ಪ, ವೈ.ನಾಗರಾಜ್, ಕೆ.ಎನ್.ನಾರಾಯಣ ಸ್ವಾಮಿ ಇದ್ದರು.