ಸಾರಾಂಶ
ದ್ರ ಸರ್ಕಾರದ ಯೋಜನೆಗಳನ್ನು ಸಮಾಜದ ಕಟ್ಟಕಡೆ ವ್ಯಕ್ತಿಗೆ ತಲುಪಿಸಲು ಕ್ರಮ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಕೇಂದ್ರ ಸರ್ಕಾರದ ಜನಪರ ಯೋಜನೆಗಳನ್ನು ಜನರಿಗೆ ಮನವರಿಕೆ ಮಾಡಿ ನೈತಿಕತೆ ಆಧಾರದಲ್ಲಿ ಮತಯಾಚನೆ ಮಾಡುತ್ತೇವೆ ಎಂದು ವಿಧಾನಪರಿಷತ್ ಉಪ ಸಭಾಪತಿ ಎಂ.ಕೆ. ಪ್ರಾಣೇಶ್ ಹೇಳಿದರು.ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಯೋಜನೆಗಳನ್ನು ಸಮಾಜದ ಕಟ್ಟಕಡೆ ವ್ಯಕ್ತಿಗೆ ತಲುಪಿದೆಯೇ ಎಂಬ ಬಗ್ಗೆ ಯುವ ಮತದಾರರು ಹಾಗೂ ಸಂಘ ಸಂಸ್ಥೆಗಳೊಂದಿಗೆ ತಂಡವಾಗಿ ಬಿಜೆಪಿ ಮುಖಂಡರು ಪ್ರವಾಸ ಮಾಡುತ್ತಿದ್ದಾರೆ ಎಂದರು. ಈಗಾಗಲೇ ಮಂಗಳೂರು, ಉಡುಪಿ, ಹಾಸನ ಜಿಲ್ಲೆಗಳ ಪ್ರವಾಸ ಮುಕ್ತಾಯಗೊಳಿಸಿದ್ದು ಸ್ಥಳೀಯ ಸಮಸ್ಯೆಗಳ ಬಗ್ಗೆ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿ ಇತ್ಯರ್ಥ ಪಡಿಸಲಾಗುವುದೆಂದು ಭರವಸೆ ನೀಡಿದರು. ಪ್ರವಾಸದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಆಡಳಿತ ವೈಖರಿ ಬಗ್ಗೆ ಜನರಲ್ಲಿ ಸದಭಿಪ್ರಾಯ ವ್ಯಕ್ತವಾಗುತ್ತಿದೆ. ವಿರೋಧ ಪಕ್ಷಗಳು ಅಪಸ್ವರ ಎತ್ತಿರುವುದು ಬಿಟ್ಟರೆ ಜನರ ಅಭಿಪ್ರಾಯ ಮತ್ತೊಮ್ಮೆ ಮೋದಿ ಎಂಬ ಅಭಿಪ್ರಾಯವಿದೆ ಎಂದರು. ಯುವಕರಲ್ಲಿ ಪ್ರಧಾನಿ ಮೋದಿಯವರ ಬಗ್ಗೆ ಅಪಾರ ಅಭಿಮಾನ ತುಂಬಿ ಬರುತ್ತಿದೆ. ಹಲವಾರು ಜನಪರ ಯೋಜನೆಗಳ ಮೂಲಕ ದೇಶದ ಜನರ ಮನಸ್ಸನ್ನು ಗೆದ್ದಿರುವ ಮೋದಿಯವರನ್ನು ರಾಜ್ಯ ಸರ್ಕಾರ ಟೀಕಿಸುವ ಮೂಲಕ ಜನರ ದಿಕ್ಕು ತಪ್ಪಿಸುತ್ತಿದೆ ಎಂದು ಆರೋಪಿಸಿದರು. ಗ್ಯಾರಂಟಿ ಯೋಜನೆಗಳಿಗೆ ಹಣ ವಿನಿಯೋಗಿಸುತ್ತಿರುವ ರಾಜ್ಯ ಸರ್ಕಾರ ಬರ ನಿರ್ವಹಣೆ, ಸಮರ್ಪಕ ವಿದ್ಯುತ್ ಸರಬರಾಜು ಮಾಡುವಲ್ಲಿ ವಿಫಲವಾಗಿದ್ದು ಅವರ ಎಲ್ಲಾ ನ್ಯೂನ್ಯತೆಗಳನ್ನು ಮುಚ್ಚಿಕೊಳ್ಳಲು ಕೇಂದ್ರ ಸರ್ಕಾರವನ್ನು ದೂರುತ್ತಿದ್ದಾರೆ. ಈ ಬಗ್ಗೆ ಶ್ವೇತಪತ್ರ ಹೊರಡಿಸಬೇಕೆಂದು ಆಗ್ರಹಿಸಿದರು. ವಿಧಾನಪರಿಷತ್ ಸದಸ್ಯೆ ಭಾರತಿ ಶೆಟ್ಟಿ ಮಾತನಾಡಿ, ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದು ಕೇಂದ್ರ ಸರ್ಕಾರ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಹೆಚ್ಚು ಒತ್ತು ನೀಡಿದೆ. ಮಹಿಳಾ ಮಸೂದೆ ಜಾರಿ, ತ್ರಿವಳಿ ತಲಾಖ್ ನಿರ್ಧಾರ, ಜನೌಷಧಿ ಕೇಂದ್ರಗಳ ಸ್ಥಾಪನೆ ಮುಂತಾದವುಗಳ ಮೂಲಕ ಪ್ರಧಾನಿ ನರೇಂದ್ರ ಮೋದಿ ಜನರಿಗೆ ಬದುಕು ಕಟ್ಟಿಕೊಟ್ಟಿದ್ದಾರೆಂದು ಹೇಳಿದರು.ಸುದ್ಧಿಗೋಷ್ಠಿಯಲ್ಲಿ ವಿಧಾನಪರಿಷತ್ ಸದಸ್ಯ ಪ್ರತಾಪ್‌ಸಿಂಹ ನಾಯಕ್, ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್. ದೇವರಾಜಶೆಟ್ಟಿ, ಮುಖಂಡರಾದ ಸಿ.ಹೆಚ್. ಲೋಕೇಶ್, ಪುಷ್ಪರಾಜ್, ಹೆಚ್.ಎಸ್. ಪುಟ್ಟಸ್ವಾಮಿ, ಸೋಮಶೇಖರ್ ಉಪಸ್ಥಿತರಿದ್ದರು.ಪೋಟೋ ಫೈಲ್ ನೇಮ್ 11 ಕೆಸಿಕೆಎಂ 2