ಪೊನ್ನಾಚಿ ಸುತ್ತಮುತ್ತಲಿನ ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ಹಾಗೂ ಗ್ರಾಮಸ್ಥರಿಗೆ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಿದ ಹಿನ್ನೆಲೆ ಸಂತೋಷಗೊಂಡ ಗ್ರಾಮಸ್ಥರು ಬಸ್ಸಿಗೆ ವಿಶೇಷ ಪೂಜೆ ಸಲ್ಲಿಸಿ ಹರ್ಷ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಹನೂರು

ಪೊನ್ನಾಚಿ ಸುತ್ತಮುತ್ತಲಿನ ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ಹಾಗೂ ಗ್ರಾಮಸ್ಥರಿಗೆ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಿದ ಹಿನ್ನೆಲೆ ಸಂತೋಷಗೊಂಡ ಗ್ರಾಮಸ್ಥರು ಬಸ್ಸಿಗೆ ವಿಶೇಷ ಪೂಜೆ ಸಲ್ಲಿಸಿ ಹರ್ಷ ವ್ಯಕ್ತಪಡಿಸಿದರು.

ಹನೂರು ತಾಲೂಕಿನ ಪೊನ್ನಾಚಿ ಸುತ್ತಮುತ್ತಲಿನ ಗ್ರಾಮಗಳಾದ ಮರೂರು ಸೇರಿದಂತೆ ಹಲವು ಕಡೆ ದಿನನಿತ್ಯ ನೂರಾರು ವಿದ್ಯಾರ್ಥಿಗಳು ನಿಗದಿತ ಸಮಯಕ್ಕೆ ತೆರಳಲು ಸಾರಿಗೆ ವ್ಯವಸ್ಥೆ ಇರಲಿಲ್ಲ. ಇದನ್ನು ಮನಗಂಡ ಸಾರಿಗೆ ನಿಗಮವು ಬಸ್‌ ವ್ಯವಸ್ಥೆ ಕಲ್ಪಿಸಿದೆ. ಹೀಗಾಗಿ ಊರಿಗೆ ಬಂದ ಬಸ್ಸನ್ನು ಮದುವಣಗಿತ್ತಿಯಂತೆ ಅಲಂಕರಿಸಿ ಪೂಜೆ ಸಲ್ಲಿಸಿದ್ದಾರೆ. ಬಳಿಕ ಗ್ರಾಮಸ್ಥರು ಸಿಹಿ ಹಂಚಿ ಸಂಭ್ರಮಿಸಿದರು. ಇದೇ ಸಂದರ್ಭದಲ್ಲಿ ಸಾರಿಗೆ ಅಧಿಕಾರಿಗಳಿಗೆ ಬಸ್‌ ವ್ಯವಸ್ಥೆಯನ್ನು ಕಲ್ಪಿಸಿದ್ದಕ್ಕಾಗಿ ಧನ್ಯವಾದ ಸಲ್ಲಿಸಿದರು.