ಸಂತೋಷಕೂಟ ಸಮಾರೋಪದಲ್ಲಿ ಪೊನ್ನಣ್ಣ, ಬೋಪಯ್ಯಗೆ ಸನ್ಮಾನ

| Published : Oct 05 2025, 01:02 AM IST

ಸಾರಾಂಶ

ಚೇರಂಬಾಣೆ ಗೌಡ ಸಮಾಜದಲ್ಲಿ ಕೈಲ್‌ ಮುಹೂರ್ತ ಸಂತೋಷ ಕೂಟ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಿತು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ಸಮೀಪದ ಚೇರಂಬಾಣೆ ಗೌಡ ಸಮಾಜದಲ್ಲಿ ಇತ್ತೀಚೆಗೆ ಆಯೋಜಿಸಲಾಗಿದ್ದ ಕೈಲ್ ಮುಹೂರ್ತ ಸಂತೋಷಕೂಟ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಶಾಸಕರು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್ ಪೊನ್ನಣ್ಣ ಹಾಗೂ ಮಾಜಿ ವಿಧಾನಸಭಾ ಅಧ್ಯಕ್ಷ, ಮಾಜಿ ಶಾಸಕ ಕೆ. ಜಿ ಬೋಪಯ್ಯ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಚೇರಂಬಾಣೆ ಗೌಡ ಸಮಾಜದ ಅಧ್ಯಕ್ಷ ಕೊಡಪಾಲು ಗಪ್ಪು ಗಣಪತಿ ಅವರ ಅಧ್ಯಕ್ಷತೆಯಲ್ಲಿ ಜರುಗಿದ್ದ ಕಾರ್ಯಕ್ರಮದಲ್ಲಿ ಕೊಡಗು ಗೌಡ ಒಕ್ಕೂಟದ ಉಪಾಧ್ಯಕ್ಷ ತೇನನ ರಾಜೇಶ್, ಕೊಡಗು ಗೌಡ ಮಹಿಳಾ ಒಕ್ಕೂಟದ ಅಧ್ಯಕ್ಷೆ ದಮಯಂತಿ, ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಕೊಲ್ಯದ ಗಿರೀಶ್, ಬೇಕಲ್ ರಮಾನಾಥ್, ಮಹಿಳಾ ಒಕ್ಕೂಟದ ಅಧ್ಯಕ್ಷ ಕಡ್ಲೇರ ತುಳಸಿ ಮೋಹನ್, ಸಮಾಜದ ಆಡಳಿತ ಮಂಡಳಿಯ ಪದಾಧಿಕಾರಿಗಳು ಹಾಗೂ ನಿರ್ದೇಶಕರು ಸೇರಿದಂತೆ ಗಣ್ಯರು ಹಾಜರಿದ್ದರು.