ಇಲ್ಲಿನ ಕಕ್ಕುಂದ ಕಾಡು ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಾಲಯಕ್ಕೆಶಾಸಕ ಎ.ಎಸ್. ಪೊನ್ನಣ್ಣ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ನವೀಕರಣಗೊಳ್ಳುತ್ತಿರುವ ದೇವಸ್ಥಾನವನ್ನು ವೀಕ್ಷಿಸಿದರು.
ನಾಪೋಕ್ಲು: ಇಲ್ಲಿನ ಕಕ್ಕುಂದ ಕಾಡು ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಾಲಯಕ್ಕೆಶಾಸಕ ಎ.ಎಸ್. ಪೊನ್ನಣ್ಣ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ನವೀಕರಣಗೊಳ್ಳುತ್ತಿರುವ ದೇವಸ್ಥಾನವನ್ನು ವೀಕ್ಷಿಸಿದರು.ದೇವಾಲಯದ ಆಡಳಿತ ಮಂಡಳಿ ಪದಾಧಿಕಾರಿಗಳು ದೇವಾಲಯ ಪುನರ್ ನಿರ್ಮಾಣ ಸಂದರ್ಭದ ಕುಂದುಕೊರತೆಗಳನ್ನು ಶಾಸಕರ ಮುಂದಿಟ್ಟರು. ದೇವಾಲಯ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದ್ದು, ಇನ್ನೂ ಹಲವು ಕಾಮಗಾರಿಗಳು ಬಾಕಿ ಉಳಿದಿವೆ. ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸಲು ಧನ ಸಹಾಯದ ಅಗತ್ಯ ಇರುವ ಬಗ್ಗೆ ಶಾಸಕರಲ್ಲಿ ಮನವಿ ಮಾಡಲಾಯಿತು.
ಸ್ಥಳೀಯ ಭಕ್ತಾದಿಗಳ ಕೋರಿಕೆ ಮೇರೆಗೆ ದೇವಾಲಯಕ್ಕೆ ಆಗಮಿಸಿದ ಶಾಸಕರು, ದೇವಸ್ಥಾನದ ಪುರಾಣಗಳನ್ನು ಆಲಿಸಿದರು. ನವೀಕರಣಗೊಳ್ಳುತ್ತಿರುವ ದೇವಸ್ಥಾನದ ಅಭಿವೃದ್ಧಿಗೆ ಶಾಸಕರಿಗೆ ಮನವಿ ಸಲ್ಲಿಸಿದಾಗ ಎಲ್ಲವನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ನಾಪೋಕ್ಲು ಗ್ರಾಪಂ ಮಾಜಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್, ಸದಸ್ಯರಾದ ಕುಲ್ಲೇಟಿರ ಅರುಣ್ ಬೇಬ, ಮಾಚೆಟ್ಟಿರ ಕುಸು ಕುಶಾಲಪ್ಪ, ಡಿಸಿಸಿ ಸದಸ್ಯ ಬಾಚಮಾಂಡ ಲವ ಚಿಣ್ಣಪ್ಪ, ಬೊಳ್ಳಚೆಟ್ಟಿರ ಸುರೇಶ್ , ಎಂ.ಎಚ್. ಅಬ್ದುಲ್ ರೆಹಮಾನ್, ಸೌಕತ್ ಆಲಿ ಹಾಗೂ ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ ಗೋಪಾಲ, ಪ್ರಮುಖರಾದ ಆನಂದ ಸ್ವಾಮಿ, ಸುಜಿ ಕುಮಾರ್, ತಂಗ, ಭವಾನಿ, ಆಶಾ, ವಸಂತ, ಮಂದಪ್ಪ, ದೇವಪ್ಪ ಇದ್ದರು.