ಕಳಪೆ ಊಟ, ಉಪಹಾರ: ವಸತಿ ನಿಲಯ ವಿದ್ಯಾರ್ಥಿಗಳಿಂದ ಪ್ರತಿಭಟನೆ

| Published : Mar 13 2024, 02:02 AM IST

ಕಳಪೆ ಊಟ, ಉಪಹಾರ: ವಸತಿ ನಿಲಯ ವಿದ್ಯಾರ್ಥಿಗಳಿಂದ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ವಸತಿ ನಿಲಯದಲ್ಲಿ ಕಳಪೆ ಮಟ್ಟದ ಊಟ, ಉಪಹಾರ ನೀಡಲಾಗುತ್ತಿದೆ ಎಂದು ನೊಂದ ವಿದ್ಯಾರ್ಥಿಗಳೆಲ್ಲರು ಮಿನಿ ವಿಧಾನಸೌಧಕ್ಕೆ ತೆರಳಿ ಮಂಗಳವಾರ ಪ್ರತಿಭಟನೆ ನಡೆಸಿದ ಪ್ರಸಂಗ ಜರುಗಿದೆ.

ಕನ್ನಡಪ್ರಭ ವಾರ್ತೆ ಜೇವರ್ಗಿ

ಪಟ್ಟಣದ ವಿಜಯಪುರ ರಸ್ತೆಯಲ್ಲಿರುವ ಹಿಂದುಳಿದ ವರ್ಗಗಳ ಇಲಾಖೆಯ ಮೆಟ್ರೀಕ್ ನಂತರದ ವಸತಿ ನಿಲಯದಲ್ಲಿ ಕಳಪೆ ಮಟ್ಟದ ಊಟ, ಉಪಹಾರ ನೀಡಲಾಗುತ್ತಿದೆ ಎಂದು ನೊಂದ ವಿದ್ಯಾರ್ಥಿಗಳೆಲ್ಲರು ಮಿನಿ ವಿಧಾನಸೌಧಕ್ಕೆ ತೆರಳಿ ಮಂಗಳವಾರ ಪ್ರತಿಭಟನೆ ನಡೆಸಿದ ಪ್ರಸಂಗ ಜರುಗಿದೆ.

ಹೂಳ, ಹೂಪ್ಪಟಿಗಳು ತುಂಬಿದ ಕಳಪೆ ಆಹಾರ ಧಾನ್ಯಗಳನ್ನೆ ಬಳಸಿ ಊಟ, ಉಪಹಾರ ಮಾಡಲಾಗುತ್ತಿದೆ. ಸಾಕಷ್ಟು ಬಾರಿ ವಲಯ ಮೇಲ್ವಿಚಾರಕರು ಅಡುಗೆ ಸಹಾಯಕರ ಗಮನಕ್ಕೆ ತಂದರು ಹಾರಿಕೆ ಹಾಗೂ ಬೆದರಿಕೆ ಉತ್ತರ ನೀಡುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ ಮಲ್ಲಣ್ಣ ಯಲಗೋಡ ಅವರ ಬಳಿ ಅಳಲು ತೋಡಿಕೊಂಡರು. ಸರ್ಕಾರ ಗ್ರಾಮೀಣ ಮಟ್ಟದ ಬಡ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಹತ್ತಾರು ಯೋಜನೆಗಳನ್ನು ರೂಪಿಸಿದ್ದಾರೆ. ಆದರೆ ಅಧಿಕಾರಿಗಳ ಬೇಜವಾಬ್ದಾರಿಯಿಂದ ವಿದ್ಯಾರ್ಥಿಗಳು ಸಂಕಷ್ಟ ಎದುರಿಸುವಂತಾಗಿದೆ. ಇಲ್ಲಿರುವ ವಸತಿ ನಿಲಯದ ಮೇಲ್ವಿಚಾರಕ ವಾರಕ್ಕೋಮ್ಮೆ ವಸತಿ ನಿಲಯಕ್ಕೆ ಭೇಟಿ ನೀಡುತ್ತಿದ್ದು, ವಾರಸುದಾರರಿಲ್ಲದ ಈ ವಸತಿ ನಿಲಯಕ್ಕೆ ಹೇಳುವವರು ಕೇಳುವವರು ಯಾರು ಇಲ್ಲದಂತಾಗಿದೆ. ಹೀಗಾಗಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ ಗಗನ ಕುಸುಮದಂತಾಗಿದಂತು ಸತ್ಯ.

ಕೂಡಲೆ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ವಸತಿ ನಿಲಯಕ್ಕೆ ಭೇಟಿ ನೀಡಿ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಬೇಕು. ವಿದ್ಯಾರ್ಥಿಗಳನ್ನು ಕಡೆಗಣಿಸುತ್ತಿರುವ ಮೇಲ್ವಿಚಾರಕರು ಹಾಗೂ ಅಡುಗೆ ಅವರನ್ನು ವರ್ಗಾವಣೆ ಮಾಡಿ ಬೇರೆಯವರನ್ನು ನೇಮಿಸಬೇಕೆಂದು ವಿದ್ಯಾರ್ಥಿಗಳು ಆಗ್ರಹಿಸಿದರು. ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದ ತಹಸೀಲ್ದಾರ ಮಲ್ಲಣ್ಣ ಯಲಗೋಡ ಅವರು ಸಮಸ್ಯೆಗೆ ಪರಿಹಾರ ಕಲ್ಪಿಸುವ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆಯಲಾಯಿತು.