ಸಾರಾಂಶ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ: ಜಗತ್ತಿನಲ್ಲಿ ಹೆಚ್ಚುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸುವುದು ಪ್ರಸ್ತುತ ದಿನಗಳಲ್ಲಿ ಅತಿ ದೊಡ್ಡ ಸವಾಲಾಗಿ ಪರಿಣಮಿಸಿದೆ. ಜನಸಂಖ್ಯೆ ಹೆಚ್ಚಳದಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಜುಲೈ 11 ರಂದು ವಿಶ್ವ ಜನಸಂಖ್ಯಾ ದಿನವನ್ನು ಆಚರಣೆ ಮಾಡಲಾಗುತ್ತದೆ ಎಂದು ಎಂಜಿವ್ಹಿಸಿ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ.ಆರ್.ಎಸ್.ಸಜ್ಜನ ಹೇಳಿದರು.
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ: ಜಗತ್ತಿನಲ್ಲಿ ಹೆಚ್ಚುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸುವುದು ಪ್ರಸ್ತುತ ದಿನಗಳಲ್ಲಿ ಅತಿ ದೊಡ್ಡ ಸವಾಲಾಗಿ ಪರಿಣಮಿಸಿದೆ. ಜನಸಂಖ್ಯೆ ಹೆಚ್ಚಳದಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಜುಲೈ 11 ರಂದು ವಿಶ್ವ ಜನಸಂಖ್ಯಾ ದಿನವನ್ನು ಆಚರಣೆ ಮಾಡಲಾಗುತ್ತದೆ ಎಂದು ಎಂಜಿವ್ಹಿಸಿ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ.ಆರ್.ಎಸ್.ಸಜ್ಜನ ಹೇಳಿದರು
ಪಟ್ಟಣದ ಎಂಜಿವ್ಹಿಸಿ ಬಿ.ಎಡ್.ಮಹಾ ವಿದ್ಯಾಲಯದಲ್ಲಿ ನಡೆದ ವಿಶ್ವ ಜನಸಂಖ್ಯೆ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆರೋಗ್ಯಕರ ಜೀವನ ಮತ್ತು ಸಣ್ಣ ಕುಟುಂಬಗಳ ಪ್ರಾಮುಖ್ಯತೆ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು ಮುಖ್ಯ ಎಂದರು.ಸಹಾಯಕ ಪ್ರಾಧ್ಯಾಪಕ ಬಿ.ಎಸ್.ಓದ್ಸುಮಠ ಮಾತನಾಡಿ, ಕರ್ನಾಟಕವು ಸುಮಾರು 8 ಕೋಟಿ ಜನಸಂಖ್ಯೆ ಹೊಂದಿದೆ. ಭಾರತದ ಜನಸಂಖ್ಯೆಯು 142 ಕೋಟಿಗಿಂತ ಹೆಚ್ಚು ಎಂಬುದು ಸತ್ಯ. ಅತಿ ದೊಡ್ಡ ವಿಪರ್ಯಾಸವೆಂದರೆ ಜನಸಂಖ್ಯೆ ಹೆಚ್ಚಾದಂತೆ ಮೂಲಭೂತ ಅವಶ್ಯಕತೆಗಳು ಮತ್ತು ಸೌಲಭ್ಯಗಳು ದೊರೆಯುತ್ತಿಲ್ಲ. ಇದನ್ನು ಯುವಕರು ಮತ್ತು ಯುವತಿಯರು ಅರಿತುಕೊಂಡರೆ ಜನಸಂಖ್ಯೆ ನಿಯಂತ್ರಿಸಬಹುದು ಎಂದು ಸಲಹೆ ನೀಡಿದರು.ತಾಲೂಕ ಆಸ್ಪತ್ರೆಯ ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಎಸ್.ಗೌಡರ ಮಾತನಾಡಿ ಜನಸಂಖ್ಯಾ ಸ್ಫೋಟದಿಂದ ಆಗುವ ಸಮಸ್ಯೆಗಳು ಹಾಗೂ ಜನಸಂಖ್ಯೆ ತಡೆಗಟ್ಟಲು ಇರುವ ಮಾರ್ಗಗಳು ಆರೋಗ್ಯಕರ ಜೀವನ ಮತ್ತು ಸಣ್ಣ ಕುಟುಂಬಗಳ ಪ್ರಾಮುಖ್ಯತೆ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು ಅಗತ್ಯ ಎಂದರು.ಕಾಲೇಜಿನ ಆಡಳಿತ ಮಂಡಳಿಯಿಂದ ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಎಸ್.ಗೌಡರ ಅವರನ್ನು ಗೌರವಿಸಲಾಯಿತು.
ಸಹಾಯಕ ಪ್ರಾಧ್ಯಾಪಕರಾದ ಬಿ.ಎನ್.ಬೋಳಶೆಟ್ಟಿ, ಶಿಕ್ಷಕರು ಹಾಗೂ ಸಿಬ್ಬಂದಿ, ಪ್ರಶಿಕ್ಷಣಾರ್ಥಿಗಳು ಹಾಜರಿದ್ದರು. ಸರಸ್ವತಿ ಹಲ್ಯಾಳ ನಿರೂಪಿಸಿದರು. ಬಸವರಾಜೇಶ್ವರಿ ಕರಿಹೊಳೆ ವಂದಿಸಿದರು.