ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಆರೋಗ್ಯ ಇಲಾಖೆಯ ಜಂಟಿ ಸಹಯೋಗದೊಂದಿಗೆ ಮಡಿಕೇರಿ ತಾಲೂಕಿನ ನಾಪೋಕ್ಲು ವೃತ್ತದ ಬೇತು ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಯಾಗಿ ಹಮ್ಮಿಕೊಳ್ಳಲಾಯಿತು.

ನಾಪೋಕ್ಲು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಆರೋಗ್ಯ ಇಲಾಖೆಯ ಜಂಟಿ ಸಹಯೋಗದೊಂದಿಗೆ ಮಡಿಕೇರಿ ತಾಲೂಕಿನ ನಾಪೋಕ್ಲು ವೃತ್ತದ ಬೇತು ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಯಾಗಿ ಹಮ್ಮಿಕೊಳ್ಳಲಾಯಿತು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಾಪೋಕ್ಲು ವೃತ್ತದ ಮೇಲ್ವಿಚಾರಕಿ ಶೀಲಾ ಅಶೋಕ್, ನಾಪೋಕ್ಲು ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷರಾದ ವನಜಾಕ್ಷಿ ರೇಣುಕೇಶ್, ಆಶಾ ಕಾರ್ಯಕರ್ತೆ ಆಶಾ ಅಪ್ಪಣ್ಣ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಮಕ್ಕಳ ತಾಯಂದಿರು ಚಾಲನೆ ನೀಡಿದರು.ಬಳಿಕ ಮಾತನಾಡಿದ ಮೇಲ್ವಿಚಾರಕಿ ಶೀಲಾ ಅಶೋಕ್ ಅವರು, ಪೋಷಣ್ ಅಭಿಯಾನ ಕಾರ್ಯಕ್ರಮದ ಮುಖ್ಯ ಉದ್ದೇಶ ಹಾಗೂ ಪ್ರಾಮುಖ್ಯತೆಯ ಕುರಿತು ನೆರೆದಿದ್ದವರಿಗೆ ವಿವರಣೆ ನೀಡಿದರು. ‘ಪ್ರತಿಯೊಬ್ಬರೂ ತಮ್ಮ ದೈನಂದಿನ ಆಹಾರದಲ್ಲಿ ಸ್ಥಳೀಯವಾಗಿ ದೊರೆಯುವ ತಾಜಾ ಹಣ್ಣು ಮತ್ತು ತರಕಾರಿಗಳನ್ನು ಕಡ್ಡಾಯವಾಗಿ ಬಳಸಬೇಕು’ ಎಂದು ಮನವಿ ಮಾಡಿದರು. ಇದೇ ವೇಳೆ ಇಲಾಖೆಯಿಂದ ಸಾರ್ವಜನಿಕರಿಗೆ ದೊರೆಯುವ ವಿವಿಧ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದ ಅವರು, ‘ಗೃಹಲಕ್ಷ್ಮಿ’ ಯೋಜನೆಯ ಮರು ಪರಿಶೀಲನೆ ಕುರಿತು ವಿವರಣೆ ನೀಡಿದರು. ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿ ಅಂಗನವಾಡಿ ಕಾರ್ಯಕರ್ತೆಯರು ಸ್ಥಳೀಯವಾಗಿ ತಯಾರಿಸಿದ ವಿವಿಧ ಮಾದರಿಯ ಪೌಷ್ಟಿಕಾಂಶಯುಕ್ತ ಖಾದ್ಯಗಳನ್ನು ಪ್ರದರ್ಶನಕ್ಕಿಟ್ಟಿದ್ದರು.ಈ ಸಂದರ್ಭದಲ್ಲಿ ನಾಪೋಕ್ಲು ವೃತ್ತದ ಎಲ್ಲ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಗರ್ಭಿಣಿಯರು ಉಪಸ್ಥಿತರಿದ್ದರು.