ಸಾರಾಂಶ
ಪೌಷ್ಟಿಕ ಆಹಾರ ಸೇವನೆ ಮಾಡುವ ಜತೆಗೆ ನಮ್ಮ ಆಹಾರ ಸೇವನೆ ಮಿತವಾಗಿರಬೇಕು, ಯೋಗ, ವ್ಯಾಯಾಮ ಮಾಡುವ ಮೂಲಕ ಆರೋಗ್ಯದ ಉತ್ತಮವಾಗಿಟ್ಟುಕೊಳ್ಳುವ ಕಡೆಗೂ ಹೆಚ್ಚು ಗಮನಹರಿಸಬೇಕು. ಪೌಷ್ಟಿಕ ಆಹಾರ ನೀಡುವ ಮೂಲಕ ಮಕ್ಕಳ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಪಡಿಸಬೇಕು.
ಕನ್ನಡಪ್ರಭ ವಾರ್ತೆ ಪಾಂಡವಪುರ
ಪೌಷ್ಟಿಕ ಆಹಾರ ನೀಡುವ ಮೂಲಕ ಮಕ್ಕಳ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಪಡಿಸಬೇಕು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕೆ.ಆರ್.ಪೂರ್ಣಿಮಾ ಸಲಹೆ ನೀಡಿದರು.ತಾಲೂಕಿನ ಸಣಬದಕೊಪ್ಪಲು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಆಯೋಜಿಸಿದ್ದ ಪೋಷಣ್ ಅಭಿಯಾನ ಮಾಸಾಚರಣೆ ಉದ್ಘಾಟಿಸಿ ಮಾತನಾಡಿ, ಪೌಷ್ಟಿಕ ಆಹಾರ ಸೇವನೆ ಮಾಡುವ ಜತೆಗೆ ನಮ್ಮ ಆಹಾರ ಸೇವನೆ ಮಿತವಾಗಿರಬೇಕು, ಯೋಗ, ವ್ಯಾಯಾಮ ಮಾಡುವ ಮೂಲಕ ಆರೋಗ್ಯದ ಉತ್ತಮವಾಗಿಟ್ಟುಕೊಳ್ಳುವ ಕಡೆಗೂ ಹೆಚ್ಚು ಗಮನಹರಿಸಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಎರಡು ವರ್ಷದ ಮಕ್ಕಳಿಗೆ ಸ್ತನ್ಯಪಾನ, ೬ ತಿಂಗಳ ಮೇಲ್ಪಟ್ಟ ಮಕ್ಕಳಿಗೆ ಅನ್ನಪ್ರಾಷನ ಮಾಡಿಸಲಾಯಿತು. ಗರ್ಭಿಣಿಯರಿಗೆ ಇಲಾಖೆಯಿಂದ ಸೀಮಂತ ಮಾಡಲಾಯಿತು. ಇದೇ ವೇಳೆ ಪೌಷ್ಠಿಕ ಆಹಾರಗಳ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು.ಸಮಾರಂಭದಲ್ಲಿ ಗ್ರಾಪಂ ಸದಸ್ಯರಾದ ನರಸಿಂಹೇಗೌಡ, ಉಮಾರಾಜೇಗೌಡ, ಸಿಡಿಪಿಒ ಕಚೇರಿಯ ಮೇಲ್ವಿಚಾರಕಿಯರಾದ ಜಕೀಯಾ ಬಾನು, ಲಕ್ಷ್ಮಿ ಎಲ್.ದೇಶಪಾಂಡೆ, ಪೋಷನ್ ಅಭಿಯಾನದ ತಾಲೂಕು ಸಂಯೋಜಕಿ ಅನುಷ, ಶಾಲಾ ಮುಖ್ಯಶಿಕ್ಷಕ ಜಯಚಂದ್ರ, ಮಹದೇವಪ್ಪ, ವಿನುತ ಹಾಗೂ ವಿವಿಧ ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಥರು ಹಾಜರಿದ್ದರು.