ಸಾರಾಂಶ
ವೆಂಕಟೇಶ್ವರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ ನಡೆಯಿತು.
ಕನ್ನಡಪ್ರಭವಾರ್ತೆ ಸೋಮವಾರಪೇಟೆ
ವೆಂಕಟೇಶ್ವರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾ ಆಚರಣೆ ಕಾರ್ಯಕ್ರಮ ನಡೆಯಿತು.ಇಲ್ಲಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ವೈದ್ಯರಾದ ತೀರ್ಥ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪಟ್ಟಣ ಪಂಚಾಯಿತಿ ಉಪಾಧ್ಯಕ್ಷೆ ಮೋಹಿನಿ, ಬಾಲ ವಿಕಾಸ ಸಮಿತಿಯ ಅಧ್ಯಕ್ಷೆ ಜಿ. ಐಶ್ವರ್ಯ, ಆರೋಗ್ಯ ಕಾರ್ಯಕರ್ತೆಯಾರಾದ ಬಿ.ಎಂ. ಅನಿತಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಸಾವಿತ್ರಿ, ಸ್ತ್ರೀ ಶಕ್ತಿ ಸದಸ್ಯರು, ಅಂಗನವಾಡಿ ಶಿಕ್ಷಕಿ ತಾರಾ ಲೋಬೋ ಹಾಗೂ ಮತ್ತು ಸಹಾಯಕಿಯರು, ಮಕ್ಕಳ ತಾಯಂದಿರು, ಗರ್ಭಿಣಿಯರು ಪಾಲ್ಗೊಂಡಿದ್ದರು.ಕಾರ್ಯಕ್ರಮದಲ್ಲಿ ಸೀಮಂತ, ಮಕ್ಕಳಿಗೆ ಅಕ್ಷರ ಅಭ್ಯಾಸ, ಅನ್ನಪ್ರಾಶನ ಕಾರ್ಯಕ್ರಮ ಮಾಡಲಾಯಿತು.