ಸಾರಾಂಶ
ಕನ್ನಡಪ್ರಭ ವಾರ್ತೆ ಕೋಟ
ಇಲ್ಲಿನ ಕೋಟತಟ್ಟು ಗ್ರಾಮ ಪಂಚಾಯಿತಿ ಹಾಗೂ ಕೋಟ ಕಲ್ಮಾಡಿ ಅಂಗನವಾಡಿ ಸಹಯೋಗದೊಂದಿಗೆ ಕಾರಂತ ಥೀಮ್ ಪಾರ್ಕ್‌ನಲ್ಲಿ ಪೋಷಣ್ ಮಾಸಾಚರಣೆಯ ಕಾರ್ಯಕ್ರಮ ಇತ್ತೀಚಿಗೆ ನಡೆಯಿತು.ಕಾರ್ಯಕ್ರಮವನ್ನು ಕೋಟತಟ್ಟು ಗ್ರಾಪಂ ಅಧ್ಯಕ್ಷ ಸತೀಶ್ ಬಾರಿಕೆರೆ ಉದ್ಘಾಟಿಸಿ ಮಾತನಾಡಿ, ಕೇಂದ್ರ ಸರ್ಕಾರದ ಪೋಷಣ್ ಮಾಸಾಚರಣೆಯ ಅಭಿಯಾನವು ಪ್ರತಿ ಮನೆಗಳನ್ನು ತಲುಪುವಲ್ಲಿ ಅಂಗನವಾಡಿ ಕೇಂದ್ರಗಳ ಕಾರ್ಯ ಶ್ಲಾಘನೀಯ ಎಂದರು. ಮುಖ್ಯ ಅಭ್ಯಾಗತರಾಗಿ ಥೀಮ್ ಪಾರ್ಕ್‌ನ ಟ್ರಸ್ಟಿ ಸುಬ್ರಾಯ ಆಚಾರ್ ಮಾತನಾಡಿ, ಸ್ಪರ್ಧಾತ್ಮಕ ವ್ಯವಸ್ಥೆಯಲ್ಲಿ ಮಕ್ಕಳ ಸರ್ವತೋಮುಖ ಬೆಳವಣಿಗೆಯ ಆರಂಭ ಅಂಗನವಾಡಿ ಕೇಂದ್ರದಲ್ಲಿ ಮಾತ್ರವೇ ಸಾಧ್ಯ ಎಂದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಬಗ್ಗೆ ಮೇಲ್ವಿಚಾರಕಿ ಸವಿತಾ ಅವರು ಪೋಷಣ್ ಯೋಜನೆಯ ಬಗ್ಗೆ ಮಾಹಿತಿ ನೀಡಿದರು. ನಂತರ ಮಕ್ಕಳ ತೂಕ ಹಾಗೂ ಗರ್ಭಿಣಿಯರ ತೂಕವನ್ನು ಪರಿಶೀಲಿಸಲಾಯಿತು. ತಾಯಿಯ ಹೆಸರಲ್ಲಿ ಗಿಡ ನೀಡುವುದಕ್ಕೆ ಗಿಡಗಳನ್ನು ವಿತರಿಸಲಾಯಿತು. ವಿವಿಧ ಬಗೆಯ ಪೌಷ್ಟಿಕ ಆಹಾರಗಳು ಸೊಪ್ಪು ತರಕಾರಿಗಳು ಹಾಗೂ ಔಷಧೀಯ ಸಸ್ಯಗಳನ್ನು ಪ್ರದರ್ಶನಗೊಳಿಸಲಾಯಿತು.ಕಾರ್ಯಕ್ರಮದಲ್ಲಿ ಗ್ರಾಪಂ ಉಪಾಧ್ಯಕ್ಷೆ ಸರಸ್ವತಿ, ಪಂಚಾಯಿತಿ ಸದಸ್ಯ ವಾಸು ಪೂಜಾರಿ ಉಪಸ್ಥಿತರಿದ್ದರು. ಮಕ್ಕಳ ಪೋಷಕರು ಸ್ತ್ರೀಶಕ್ತಿ ಸದಸ್ಯರು, ಅಂಗನವಾಡಿ ಫಲಾನುಭವಿಗಳು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದರು.ಶಿಕ್ಷಕರ ದಿನಾಚರಣೆಯ ವಿಷೇಶವಾಗಿ ಅಂಗನವಾಡಿ ಕಾರ್ಯಕರ್ತೆಯರಿಗೆ ವಿವಿಧ ಆಟೋಟಗಳನ್ನು ಆಯೋಜಿಸಲಾಗಿತ್ತು. ಕೋಟತಟ್ಟು ಕಲ್ಮಾಡಿ ಅಂಗನವಾಡಿ ಕಾರ್ಯಕರ್ತೆ ಜಯಲಕ್ಷ್ಮೀ.ಎನ್ ಕಾರ್ಯಕ್ರಮವನ್ನು ನಿರೂಪಿಸಿ ನಿರ್ವಹಿಸಿದರು.ಕೋಟತಟ್ಟು ಗ್ರಾಮ ಪಂಚಾಯಿತಿ ಹಾಗೂ ಕೋಟ ಕಲ್ಮಾಡಿ ಅಂಗನವಾಡಿ ಸಹಯೋಗದೊಂದಿಗೆ ನಡೆದ ಪೋಷಣ್ ಮಾಸಾಚರಣೆಯ ಕಾರ್ಯಕ್ರಮವನ್ನು ಕೋಟತಟ್ಟು ಗ್ರಾಮಪಂಚಾಯಿತಿ ಅಧ್ಯಕ್ಷ ಸತೀಶ್ ಬಾರಿಕೆರೆ ಉದ್ಘಾಟಿಸಿದರು. ಕಾರಂತ ಥೀಂ ಪಾರ್ಕ್‌ನ ಟ್ರಸ್ಟಿ ಸುಬ್ರಾಯ ಆಚಾರ್, ಕೋಟತಟ್ಟು ಕಲ್ಮಾಡಿ ಅಂಗನವಾಡಿ ಕಾರ್ಯಕರ್ತೆ ಜಯಲಕ್ಷ್ಮೀ ಎನ್. ಮತ್ತಿತರರು ಇದ್ದರು.