ಪುಸ್ತಕ ಓದುವುದರಿಂದ ಸಕಾರಾತ್ಮಕ ಭಾವನೆ ಬೆಳೆಯುತ್ತವೆ : ಸಿಇಓ ಕೀರ್ತನಾ

| Published : Aug 31 2024, 01:30 AM IST

ಪುಸ್ತಕ ಓದುವುದರಿಂದ ಸಕಾರಾತ್ಮಕ ಭಾವನೆ ಬೆಳೆಯುತ್ತವೆ : ಸಿಇಓ ಕೀರ್ತನಾ
Share this Article
  • FB
  • TW
  • Linkdin
  • Email

ಸಾರಾಂಶ

ಚಿಕ್ಕಮಗಳೂರು, ಪುಸ್ತಕಗಳು ಓದುವುದರಿಂದ ವೈಯಕ್ತಿಕ ಬೆಳವಣಿಗೆ, ಮಾನಸಿಕ ಆರೋಗ್ಯವೃದ್ಧಿಯಾಗಲಿದೆ ಮತ್ತು ಒತ್ತಡದಿಂದ ಹೊರಗೆ ಬರಲು ಸಕಾರಾತ್ಮಕ ಭಾವನೆ ಬೆಳೆಸಿಕೊಳ್ಳಲು ಕಾರಣವಾಗುತ್ತದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಚ್.ಎಸ್. ಕೀರ್ತನಾ ಹೇಳಿದರು.

ಗ್ರಂಥಾಲಯ ಪಿತಾಮಹ ಡಾ. ಎಸ್.ಆರ್.ರಂಗನಾಥನ್‌ ಅವರ ಜನ್ಮ ದಿನಾಚರಣೆ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಪುಸ್ತಕಗಳು ಓದುವುದರಿಂದ ವೈಯಕ್ತಿಕ ಬೆಳವಣಿಗೆ, ಮಾನಸಿಕ ಆರೋಗ್ಯವೃದ್ಧಿಯಾಗಲಿದೆ ಮತ್ತು ಒತ್ತಡದಿಂದ ಹೊರಗೆ ಬರಲು ಸಕಾರಾತ್ಮಕ ಭಾವನೆ ಬೆಳೆಸಿಕೊಳ್ಳಲು ಕಾರಣವಾಗುತ್ತದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಚ್.ಎಸ್. ಕೀರ್ತನಾ ಹೇಳಿದರು.

ನಗರದ ಕುವೆಂಪು ಕಲಾಮಂದಿರದಲ್ಲಿ ಗ್ರಾಮಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಅರಿವು ಕೇಂದ್ರ ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಗ್ರಂಥಪಾಲಕ ಸಂಘದ ಸಹಯೋಗದಲ್ಲಿ ನಡೆದ ಗ್ರಂಥಾಲಯ ಪಿತಾಮಹ ಡಾ. ಎಸ್.ಆರ್.ರಂಗನಾಥನ್‌ ಜನ್ಮ ದಿನ ಮತ್ತು ಗ್ರಂಥಪಾಲಕ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.ಎಸ್.ಆರ್.ರಂಗನಾಥನ್ ಅವರು ಗ್ರಂಥಾಲಯಗಳ ಪರಿಕಲ್ಪನೆಯೊಂದಿಗೆ ಇಂದು ಸಮಾಜದ ಪ್ರತಿಯೊಬ್ಬರಿಗೂ ಓದಲು ಪುಸ್ತಕ ಸಿಗುವಂತೆ ಮಾಡಿದ್ದಾರೆ, ಅವರ ಆದರ್ಶ ಪಾಲನೆ ಅಗತ್ಯವಾಗಿದೆ ಎಂದ ಅವರು, ಗ್ರಂಥಾಲಯಗಳು ಜ್ಞಾನ ಭಂಡಾರ ಮಾತ್ರವಲ್ಲ, ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಶಕ್ತಿ ನೀಡುವ ಕೇಂದ್ರಗಳಾಗಿವೆ ಎಂದು ತಿಳಿಸಿದರು.ಅರಿವು ಕೇಂದ್ರ ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಗ್ರಂಥಪಾಲಕ ಸಂಘದ ರಾಜ್ಯಾಧ್ಯಕ್ಷ ಪಂಪನಗೌಡ ಪಾಟೀಲ್ ಮಾತನಾಡಿ, ಗ್ರಂಥಪಾಲಕರು ಎಲೆ ಮರೆ ಕಾಯಿಯಂತೆ ಯಾವ ಪ್ರಚಾರದ ಹಂಗಿಲ್ಲದೆ ತೆರೆ ಮರೆಯಲ್ಲಿ ಜ್ಞಾನ ಪ್ರಸಾರ ಮಾಡುವಂತಹ ಕೈಂಕರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ದೇಶದ ಅಭಿವೃದ್ಧಿಗೆ ತಮ್ಮದೆ ಕಾಣಿಕೆ ನೀಡುತ್ತಿದ್ದಾರೆ ಎಂದರು. ಅರಿವು ಕೇಂದ್ರ ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಗ್ರಂಥಪಾಲಕ ಸಂಘದ ಜಿಲ್ಲಾಧ್ಯಕ್ಷ ಟಿ.ಎನ್. ಪರಮೇಶ್ ಮಾತನಾಡಿ, ಡಾ.ಎಸ್.ಆರ್.ರಂಗನಾಥನ್ ಅವರು ಭಾರತದಲ್ಲಿ ಗ್ರಂಥಾಲಯ ವಿಜ್ಞಾನಕ್ಕೆ ವೈಜ್ಞಾನಿಕ ತಳಹದಿ ನೀಡಿದಂತಹ ಅಗ್ರಮಾನ್ಯರಾಗಿದ್ದು, ಭಾರತದಲ್ಲಿ ಗ್ರಂಥಪಾಲಕರಿಗೆ ಸೂಕ್ತ ಸ್ಥಾನಮಾನ ಕಲ್ಪಿಸುವಲ್ಲಿ ಇವರ ಪಾತ್ರ ಅತ್ಯಂತ ಮಹತ್ವದ್ದು ಎಂದರು.ಕಾರ್ಯಕ್ರಮದಲ್ಲಿ ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಯಾಧಿಕಾರಿ ಹಸೀನಾ ತಾಜ್, ಜಿ.ಉಮೇಶ್, ಗ್ರಂಥಾಲಯ ಪ್ರಾಧಿಕಾರದ ಸದಸ್ಯ ರವೀಶ್ ಕ್ಯಾತನಬೀಡು, ಪಿಡಿಒ ಸಂಘದ ಅಧ್ಯಕ್ಷ ಯೋಗೀಶ್, ಗ್ರಾಮ ಡಿ.ಜಿ. ವಿಕಸನ ಜಿಲ್ಲಾ ಸಂಯೋಜಕ ನವೀನ್, ಆನಂದ್ ಉಪಸ್ಥಿತರಿದ್ದರು. 30 ಕೆಸಿಕೆಎಂ 1ಚಿಕ್ಕಮಗಳೂರಿನ ಕುವೆಂಪು ಕಲಾಮಂದಿರದಲ್ಲಿ ನಡೆದ ಗ್ರಂಥಾಲಯ ಪಿತಾಮಹ ಡಾ. ಎಸ್.ಆರ್.ರಂಗನಾಥನ್‌ ಅವರ ಜನ್ಮ ದಿನಾಚರಣೆಯನ್ನು ಜಿಪಂ ಸಿಇಒ ಕೀರ್ತನಾ ಉದ್ಘಾಟಿಸಿದರು. ಪಂಪನಗೌಡ ಪಾಟೀಲ್, ಪರಮೇಶ್‌ ಇದ್ದರು.