ಉತ್ತಮ ಫಲಿತಾಂಶಕ್ಕೆ ಸಕಾರಾತ್ಮಕ ಚಿಂತನೆ ಬೇಕು

| Published : Jan 02 2025, 12:33 AM IST

ಸಾರಾಂಶ

ಮಕ್ಕಳು ಶೈಕ್ಷಣಿಕ ಕಾಳಜಿಯೊಂದಿಗೆ ಶಿಕ್ಷಣದ ಕಡೆ ಗುರಿ ಇಟ್ಟುಕೊಂಡು ನಕಾರಾತ್ಮಕತೆ ಬಿಟ್ಟು ಸಕಾರಾತ್ಮಕ ಚಿಂತನೆಯೊಂದಿಗೆ ಪರೀಕ್ಷೆ ಎದುರಿಸಬೇಕು. ಆಗ ಮಾತ್ರ ಉತ್ತಮ ಫಲಿತಾಂಶ ಸಾಧ್ಯ. ಇದರಿಂದ ಪೋಷಕರು ಕನಸು ನನಸಾಗುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ದಾವಣಗೆರೆಯಲ್ಲಿ ಹೇಳಿದ್ದಾರೆ.

- ಎಸ್ಸೆಸ್ಸೆಲ್ಸಿ ಪರೀಕ್ಷೆ ಪೂರ್ವಸಿದ್ಧತಾ ಕಾರ್ಯಾಗಾರದಲ್ಲಿ ಎಸ್‌ಪಿ ಉಮಾ ಪ್ರಶಾಂತ್‌ - - -

ಕನ್ನಡಪ್ರಭ ವಾರ್ತೆ ದಾವಣಗೆರೆ

ಮಕ್ಕಳು ಶೈಕ್ಷಣಿಕ ಕಾಳಜಿಯೊಂದಿಗೆ ಶಿಕ್ಷಣದ ಕಡೆ ಗುರಿ ಇಟ್ಟುಕೊಂಡು ನಕಾರಾತ್ಮಕತೆ ಬಿಟ್ಟು ಸಕಾರಾತ್ಮಕ ಚಿಂತನೆಯೊಂದಿಗೆ ಪರೀಕ್ಷೆ ಎದುರಿಸಬೇಕು. ಆಗ ಮಾತ್ರ ಉತ್ತಮ ಫಲಿತಾಂಶ ಸಾಧ್ಯ. ಇದರಿಂದ ಪೋಷಕರು ಕನಸು ನನಸಾಗುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಹೇಳಿದರು.

ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿರುವ ಪೊಲೀಸ್ ಸಭಾಂಗಣದಲ್ಲಿ ಭಾನುವಾರ ಜಿಲ್ಲಾ ಪೊಲೀಸ್ ಇಲಾಖೆ, ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ಸಹಯೋಗದಲ್ಲಿ ಆಯೋಜಿಸಿದ ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಪರೀಕ್ಷೆ ಎದುರಿಸುವ, ಧೈರ್ಯ ತುಂಬುವ ಪೂರ್ವಸಿದ್ಧತಾ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮಕ್ಕಳು ಕಷ್ಟ ಎಂದುಕೊಳ್ಳದೇ ಇಷ್ಟಪಟ್ಟು ಪಠ್ಯಗಳ ಓದಿ ಪರೀಕ್ಷೆ ಬರೆದರೆ ಅತ್ಯುತ್ತಮ ಫಲಿತಾಂಶ ಬರುವುದು. ಇದರಿಂದ ತಂದೆ- ತಾಯಿಗಳಿಗೆ, ವ್ಯಾಸಂಗ ಮಾಡಿದ ಶಿಕ್ಷಣ ಸಂಸ್ಥೆಗೆ, ಜಿಲ್ಲೆಗೆ ಒಳ್ಳೆಯ ಹೆಸರು ಬರುತ್ತದೆ ಎಂದರು.

ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ಸಂಸ್ಥಾಪಕ ಸಾಲಿಗ್ರಾಮ ಗಣೇಶ ಶೆಣೈ ಕಾರ್ಯಾಗಾರ ನಡೆಸಿಕೊಟ್ಟು, ಮಕ್ಕಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ವಿಜಯಕುಮಾರ್ ಎಂ.ಸಂತೋಷ್, ಜಿ.ಮಂಜುನಾಥ, ನಗರ ಉಪ ವಿಭಾಗದ ಉಪಾಧೀಕ್ಷಕ ಮಲ್ಲೇಶ್ ದೊಡ್ಮನಿ, ಡಿಎಆರ್ ಪೊಲೀಸ್ ಉಪಾಧೀಕ್ಷಕ ಪಿ.ಬಿ.ಪ್ರಕಾಶ, ಪೊಲೀಸ್ ನಿರೀಕ್ಷಕ ಎಚ್.ಬಿ. ಸೋಮೇಶ್ವರ, ಕಲಾಕುಂಚದ ಅಧ್ಯಕ್ಷ ಕೆ.ಎಚ್.ಮಂಜುನಾಥ, ಜ್ಯೋತಿ ಗಣೇಶ ಶೆಣೈ, ವಸಂತಿ ಮಂಜುನಾಥ, ಜಯಶ್ರೀ ಇತರರು ಇದ್ದರು.

ಇದೇ ಸಂದರ್ಭದಲ್ಲಿ ಗಣೇಶ ಶೆಣೈ, ಕೆ.ಎಚ್.ಮಂಜುನಾಥ್ ಅವರನ್ನು ಸನ್ಮಾನಿಸಲಾಯಿತು. ಮಕ್ಕಳು ಪ್ರಾರ್ಥಿಸಿದರು. ಪಿ.ಬಿ.ಪ್ರಕಾಶ ಸ್ವಾಗತಿಸಿದರು. ಪೊಲೀಸ್ ಹೆಡ್‌ ಕಾನ್‌ಸ್ಟೇಟೇಬಲ್ ಅಂಬರೀಷ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆ ಕಾರ್ಯದರ್ಶಿ ಕೆ.ಸಿ.ಉಮೇಶ ವಂದಿಸಿದರು.

- - -

-30ಕೆಡಿವಿಜಿ34:

ಎಸ್ಸೆಸ್ಸೆಲ್ಸಿ ಕಾರ್ಯಾಗಾರವನ್ನು ಎಸ್‌ಪಿ ಉಮಾ ಪ್ರಶಾಂತ್ ಉದ್ಘಾಟಿಸಿದರು.