ಎಸ್‌ಎಫ್‌ಐ ನೇತೃತ್ವದಲ್ಲಿ ಪಾರ್ಲಿಮೆಂಟ್ ಚಲೋ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ

| Published : Jan 09 2024, 02:00 AM IST

ಎಸ್‌ಎಫ್‌ಐ ನೇತೃತ್ವದಲ್ಲಿ ಪಾರ್ಲಿಮೆಂಟ್ ಚಲೋ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ
Share this Article
  • FB
  • TW
  • Linkdin
  • Email

ಸಾರಾಂಶ

ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ರದ್ದು ಮಾಡಲು ಆಗ್ರಹಿಸಿ ಸ್ವಾಮಿ ವಿವೇಕಾನಂದ ಜನ್ಮ ದಿನಾಚರಣೆದಂದು ಭಾರತ ವಿದ್ಯಾರ್ಥಿ ಫೆಡರೇಷನ್ ನಿಂದ ಪಾರ್ಲಿಮೆಂಟ್ ಚಲೋ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಹೋರಾಟದಲ್ಲಿ ಭಾಗವಹಿಸಬೇಕು.

ಗಂಗಾವತಿ: ಭಾರತ ರಕ್ಷಿಸಿ, ಬಿಜೆಪಿ ತಿರಸ್ಕರಿಸಿ ಘೋಷಣೆಯಡಿ ಜ.12ರಂದು ಎಸ್‌ಎಫ್‌ಐ ನೇತೃತ್ವದಲ್ಲಿ ಪಾರ್ಲಿಮೆಂಟ್ ಚಲೋ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಮಾಡಲಾಯಿತು.ನಗರದ ಶ್ರೀಕೃಷ್ಣದೇವರಾಯ ವೃತ್ತದಲ್ಲಿ ಸಂಘಟನೆ ರಾಜ್ಯಾಧ್ಯಕ್ಷ ಅಮರೇಶ ಕಡಗದ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ರದ್ದು ಮಾಡಲು ಆಗ್ರಹಿಸಿ ಸ್ವಾಮಿ ವಿವೇಕಾನಂದ ಜನ್ಮ ದಿನಾಚರಣೆದಂದು ಭಾರತ ವಿದ್ಯಾರ್ಥಿ ಫೆಡರೇಷನ್ ನಿಂದ ಪಾರ್ಲಿಮೆಂಟ್ ಚಲೋ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಹೋರಾಟದಲ್ಲಿ ಭಾಗವಹಿಸಬೇಕು ಎಂದು ಕರೆ ನೀಡಿದರು.

ಶಿಕ್ಷಣದ ಖಾಸಗೀಕರಣ, ವಾಣಿಜ್ಯೀಕರಣ ಮತ್ತು ಕೇಂದ್ರೀಕರಣವನ್ನು ನಿಲ್ಲಿಸಿ ಸ್ನಾತಕೋತ್ತರ ಹಂತದವರೆಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣ ಜಾರಿಗೊಳಿಸಿಬೇಕು. ಸರ್ವರಿಗೂ ಶಿಕ್ಷಣ ಮತ್ತು ಉದ್ಯೋಗವನ್ನು ಖಾತರಿಪಡಿಸಲು ಭಗತ್ ಸಿಂಗ್ ರಾಷ್ಟ್ರೀಯ ಉದ್ಯೋಗ ಖಾತರಿ ಕಾಯಿದೆಯನ್ನು ಜಾರಿಗೊಳಿಸಿಬೇಕು ಎಂದರು.ಈ ಸಂದರ್ಭದಲ್ಲಿ ಎಸ್ಎಫ್ಐ ರಾಜ್ಯ ಅಧ್ಯಕ್ಷ ಅಮರೇಶ್ ಕಡಗದ ತಾಲೂಕು ಅಧ್ಯಕ್ಷ ಗ್ಯಾನೇಶ್ ಕಡಗದ, ಮುಖಂಡರಾದ ನಾಗರಾಜ್, ಬಸಯ್ಯ್, ಶಂಕರ, ರಾಜಭಕ್ಸಿ, ರುದ್ರಗೌಡ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.