ಕನ್ನಡಪ್ರಭ ವಾರ್ತೆ ತುಮಕೂರುವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಲಾಗಿರುವ ಇಕೋವಿಷನ್ 2026 ರಾಜ್ಯಮಟ್ಟದ ಪರಿಸರ ಕಾರ್ಯಕ್ರಮದ ಪೋಸ್ಟರ್ ಅನ್ನು ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಬಿಡುಗಡೆಗೊಳಿಸಿದರು.ನಂತರ ಮಾತನಾಡಿದ ಅವರು ಪರಿಸರ ಸಂರಕ್ಷಣೆ, ಸುಸ್ಥಿರ ಅಭಿವೃದ್ಧಿ ಹಾಗೂ ಪರಿಸರ ಜಾಗೃತಿಯ ಮಹತ್ವ ಇಂದಿನ ದಿನಗಳಲ್ಲಿ ಅತ್ಯಂತ ಅಗತ್ಯವಾಗಿದೆ. ಪ್ರಸ್ತುತ ಎದುರಾಗುತ್ತಿರುವ ಪರಿಸರ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ವಿದ್ಯಾರ್ಥಿಗಳು, ಶಿಕ್ಷಕರು, ಸಂಶೋಧಕರು ಹಾಗೂ ಸಾರ್ವಜನಿಕರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದರು.ತುಮಕೂರು ವಿವಿ ಕುಲಸಚಿವ ನಾಹಿದ್ ಜಮ್ ಜಮ್ ಅವರು ಮಾತನಾಡಿ, ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಆದ್ಯ ಜವಾಬ್ದಾರಿಯಾಗಿದೆ. ನಾವೆಲ್ಲರೂ ಪರಿಸರ ಸ್ನೇಹಿ ಜೀವನಶೈಲಿಯನ್ನು ಅಳವಡಿಸಿಕೊಳ್ಳುವ ಮೂಲಕ ಮಾತ್ರವೇ ಉತ್ತಮ ಭವಿಷ್ಯವನ್ನು ನಿರ್ಮಿಸಲು ಸಾಧ್ಯ ಎಂದರು. ತುಮಕೂರು ವಿವಿ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಪ್ರೊ. ಎಸ್. ಶ್ರೀನಿವಾಸ್ ಅವರು ಮಾತನಾಡಿ ಇಕೋವಿಷನ್ 2026 ಕಾರ್ಯಕ್ರಮವು ಪರಿಸರ ಶಿಕ್ಷಣ, ಹಸಿರು ತಂತ್ರಜ್ಞಾನ, ಸುಸ್ಥಿರ ಜೀವನ ಶೈಲಿ ಹಾಗೂ ಪರಿಸರ ಸಂರಕ್ಷಣೆಯ ಕುರಿತು ಸಾರ್ವಜನಿಕರಲ್ಲಿ ಜನಜಾಗೃತಿ ಮೂಡಿಸಲು ಒಂದು ಮಹತ್ವದ ವೇದಿಕೆಯಾಗಲಿದೆ ಎಂದರು. ರಾಜ್ಯದಾದ್ಯಂತ ಪರಿಸರ ಸಂರಕ್ಷಣೆಯ ಸಂದೇಶವನ್ನು ಪರಿಣಾಮಕಾರಿಯಾಗಿ ಹರಡುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ವಿನಂತಿಸಿದರು.
ಇಕೋವಿಷನ್ 2026 ಕಾರ್ಯಕ್ರಮದ ಪೋಸ್ಟರ್ ಅನಾವರಣ
ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಲಾಗಿರುವ ಇಕೋವಿಷನ್ 2026 ರಾಜ್ಯಮಟ್ಟದ ಪರಿಸರ ಕಾರ್ಯಕ್ರಮದ ಪೋಸ್ಟರ್ ಅನ್ನು ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಬಿಡುಗಡೆಗೊಳಿಸಿದರು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.