ಚನ್ನಪಟ್ಟಣ: ಮೃತ ವ್ಯಕ್ತಿಯ ಮರಣೋತ್ತರ ಪರೀಕ್ಷೆ ವಿಳಂಬವಾದ ಹಿನ್ನೆಲೆಯಲ್ಲಿ ಮೃತ ವ್ಯಕ್ತಿಯ ಕುಟುಂಬಸ್ಥರು ಮೃತದೇಹವನ್ನು ನಗರದ ಪುರ ಪೊಲೀಸ್ ಠಾಣೆ ಮುಂದೆ ಇಟ್ಟು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿತು
ಚನ್ನಪಟ್ಟಣ: ಮೃತ ವ್ಯಕ್ತಿಯ ಮರಣೋತ್ತರ ಪರೀಕ್ಷೆ ವಿಳಂಬವಾದ ಹಿನ್ನೆಲೆಯಲ್ಲಿ ಮೃತ ವ್ಯಕ್ತಿಯ ಕುಟುಂಬಸ್ಥರು ಮೃತದೇಹವನ್ನು ನಗರದ ಪುರ ಪೊಲೀಸ್ ಠಾಣೆ ಮುಂದೆ ಇಟ್ಟು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿತು.
ನಗರದ ಮಂಗಳವಾರ ಪೇಟೆ ನಿವಾಸಿ ಲಕ್ಷ್ಮಣ್ (೪೫) ಭಾನುವಾರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಬಳಿಕ ಮೃತದೇಹವನ್ನು ಚನ್ನಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಆದರೆ, ಭಾನುವಾರದಿಂದಲೂ ಮರಣೋತ್ತರ ಪರೀಕ್ಷೆ ನಡೆಸದ ಹಿನ್ನೆಲೆಯಲ್ಲಿ ಆಸ್ಪತ್ರೆಯ ನಿರ್ಲಕ್ಷ್ಯದ ವಿರುದ್ಧ ಮೃತನ ಕುಟುಂಬಸ್ಥರು ಅಸಮಾಧಾನ ವ್ಯಕ್ತಪಡಿಸಿದರು.ಸೋಮವಾರ ಆಸ್ಪತ್ರೆಯಿಂದ ಮೃತದೇಹವನ್ನು ತಂದು ಚನ್ನಪಟ್ಟಣದ ಪುರ ಪೊಲೀಸ್ ಠಾಣೆಯ ಮುಂದಿಟ್ಟು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಇದರಿಂದ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.
ನಂತರ ಪೊಲೀಸರು ಕುಟುಂಬಸ್ಥರನ್ನು ಮನವೊಲಿಸಿ, ಮರಣೋತ್ತರ ಪರೀಕ್ಷೆ ನಡೆಸಲು ಹಾರೋಹಳ್ಳಿ ಸಮೀಪದ ಖಾಸಗಿ ಆಸ್ಪತ್ರೆಗೆ ಮೃತದೇಹವನ್ನು ರವಾನಿಸಲು ಕ್ರಮ ಕೈಗೊಂಡರು.ಪೋಟೊ೨೬ಸಿಪಿಟಿ೩: ಚನ್ನಪಟ್ಟಣದ ಪುರ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ಮೂಲಕ ಆಕ್ರೋಶ ವ್ಯಕ್ತಪಡಿಸಿದ ಮೃತನ ಕುಟುಂಬಸ್ಥರು.