ದಾಬಸ್‍ಪೇಟೆ: ರಸ್ತೆ ಬದಿಯಲ್ಲಿ ಕೋಳಿ ಮಾಂಸದ ತ್ಯಾಜ್ಯವನ್ನು ಬೇಕಾಬಿಟ್ಟಿ ಎಸೆಯುತ್ತಿರುವುದರಿಂದ ರಸ್ತೆಯಲ್ಲಿ ಓಡಾಡುವವರು ದುರ್ವಾಸನೆ ತಡೆಯಲಾಗದೆ ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ
ದಾಬಸ್‍ಪೇಟೆ: ರಸ್ತೆ ಬದಿಯಲ್ಲಿ ಕೋಳಿ ಮಾಂಸದ ತ್ಯಾಜ್ಯವನ್ನು ಬೇಕಾಬಿಟ್ಟಿ ಎಸೆಯುತ್ತಿರುವುದರಿಂದ ರಸ್ತೆಯಲ್ಲಿ ಓಡಾಡುವವರು ದುರ್ವಾಸನೆ ತಡೆಯಲಾಗದೆ ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಸೋಂಪುರ ಹೋಬಳಿಯ ವೀರಸಾಗರ ಗ್ರಾಮಕ್ಕೆ ಸಂಪರ್ಕಿಸುವ ಮುಖ್ಯ ರಸ್ತೆಯ ಬದಿಯಲ್ಲಿ ಕೆಲ ದಿನಗಳಿಂದ ರಾತ್ರೋರಾತ್ರಿ ಕೋಳಿ ತ್ಯಾಜ್ಯ ತಂದು ಸುರಿಯಲಾಗುತ್ತಿದೆ. ಇದರಿಂದಾಗಿ ರಸ್ತೆಯಲ್ಲಿ ಸಂಚರಿಸದಷ್ಟು ದುರ್ವಾಸನೆ ಹರಡಿದೆ. ವಾಹನ ಸವಾರರು ಹಾಗೂ ಪಾದಚಾರಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.ನಾಯಿ, ಕಾಗೆಗಳ ಕಾಟಕ್ಕೆ ಅಪಘಾತ ಭೀತಿ: ರಸ್ತೆ ಬದಿಯಲ್ಲಿ ಬಿಸಾಡಿರುವ ಮಾಂಸದ ತ್ಯಾಜ್ಯವನ್ನು ತಿನ್ನಲು ಬೀದಿ ನಾಯಿಗಳು ಹಾಗೂ ಕಾಗೆಗಳು ಹಿಂಡು ಹಿಂಡಾಗಿ ಜಮಾಯಿಸುತ್ತಿವೆ. ನಾಯಿಗಳು ಈ ತ್ಯಾಜ್ಯವನ್ನು ರಸ್ತೆ ಮಧ್ಯಕ್ಕೆ ಎಳೆದುಕೊಂಡು ಬರುತ್ತಿರುವುದರಿಂದ ದ್ವಿಚಕ್ರ ವಾಹನ ಸವಾರರು ಆತಂಕದಲ್ಲೇ ಚಲಿಸಬೇಕಾಗಿದೆ. ಹಲವು ಬಾರಿ ನಾಯಿಗಳ ಹಾವಳಿಯಿಂದಾಗಿ ವಾಹನ ಸವಾರರು ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ಉದಾಹರಣೆಗಳೂ ಇವೆ.
ಸಾಂಕ್ರಾಮಿಕಗ ರೋಗಗಳ ಭೀತಿ:ತ್ಯಾಜ್ಯ ಕೊಳೆತು ನಾರುತ್ತಿರುವುದರಿಂದ ಸೊಳ್ಳೆ ಹಾಗೂ ನೊಣಗಳ ಕಾಟ ವಿಪರೀತವಾಗಿದೆ. ಮಳೆ ಬಂದರೆ ಈ ಕಸವೆಲ್ಲ ರಸ್ತೆಗೆ ಕೊಚ್ಚಿಕೊಂಡು ಬಂದು ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ. ಸ್ಥಳೀಯ ಅಂಗಡಿ ಮುಂಗಟ್ಟುಗಳ ಮಾಲೀಕರು ಹಾಗೂ ನಿವಾಸಿಗಳು ಮನೆಯಿಂದ ಹೊರಬರಲು ಹಿಂಜರಿಯುತ್ತಿದ್ದಾರೆ ಎಂದು ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿ. ಕೋಳಿ ಅಂಗಡಿಗಳ ಮಾಲೀಕರು ನಿಯಮಾವಳಿಗಳ ಪ್ರಕಾರ ತ್ಯಾಜ್ಯ ವಿಲೇವಾರಿ ಮಾಡದೆ, ಹಣ ಉಳಿಸಲು ಈ ರೀತಿ ಸಾರ್ವಜನಿಕ ಜಾಗದಲ್ಲಿ ಕಸ ಎಸೆಯುತ್ತಿದ್ದಾರೆಂದು ಆರೋಪಿಸಿದ್ದಾರೆ.
ನಿಯಮಗಳ ಉಲ್ಲಂಘನೆ:ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಆರೋಗ್ಯ ಇಲಾಖೆಯ ಕಟ್ಟುನಿಟ್ಟಿನ ನಿಯಮಗಳ ಪ್ರಕಾರ, ಮಾಂಸದ ತ್ಯಾಜ್ಯವನ್ನು ವೈಜ್ಞಾನಿಕವಾಗಿ ಸಂಸ್ಕರಣಾ ಘಟಕಗಳಿಗೆ ತಲುಪಿಸಬೇಕು. ಆದರೆ ಇಲ್ಲಿ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಲಾಗಿದೆ. ಮಳೆ ಬಂದರೆ ಈ ಕೊಳೆತ ತ್ಯಾಜ್ಯವೆಲ್ಲ ರಸ್ತೆಯಲ್ಲೇ ಹರಿದು, ಸೊಳ್ಳೆ ಮತ್ತು ನೊಣಗಳ ಉತ್ಪತ್ತಿ ಕೇಂದ್ರವಾಗಿ ಮಾರ್ಪಡುತ್ತಿದೆ ಎಂದು ಸ್ಥಳೀಯ ನಿವಾಸಿಗಳು ಅಳಲು ತೋಡಿಕೊಂಡಿದ್ದಾರೆ.
ಕೋಟ್ 1ಕೋಳಿ ಅಂಗಡಿಗಳ ಮಾಲೀಕರು ರಾತ್ರಿ ಸಮಯದಲ್ಲಿ ರಸ್ತೆಪಕ್ಕ ತಂದು ಕೋಳಿ ತ್ಯಾಜ್ಯ ಎಸೆದು ಹೋಗುತ್ತಿದ್ದಾರೆ. ಕೆಟ್ಟ ವಾಸನೆ ಬರುತ್ತದೆ. ಇದರಿಂದ ರಸ್ತೆಯಲ್ಲಿ ಸಂಚರಿಸಲು ಸಾಧ್ಯವಾಗುತ್ತಿಲ್ಲ. ನಾಯಿಗಳು ಅಡ್ಡಬಂದು ಅಪಘಾತಗಳು ಸಂಭವಿಸುತ್ತಿವೆ. ಕೂಡಲೇ ಗ್ರಾಪಂ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿ ಕೋಳಿ ತ್ಯಾಜ್ಯ ಎಸೆಯುವವರ ವಿರುದ್ದ ಕ್ರಮ ಕೈಗೊಳ್ಳಬೇಕು.
-ಮಂಜುನಾಥ್, ವೀರಸಾಗರ ಗ್ರಾಮಸ್ಥಪೋಟೋ 8 *9 :
ಸೋಂಪುರ ಹೋಬಳಿಯ ವೀರಸಾಗರ ಗ್ರಾಮಕ್ಕೆ ಸಂಪರ್ಕಿಸುವ ಮುಖ್ಯರಸ್ತೆ ಬದಿಯಲ್ಲಿ ಕೋಳಿ ತ್ಯಾಜ್ಯ ಎಸೆದಿರುವುದು.