ಸಾರಾಂಶ
ಚಿತ್ರದುರ್ಗ ಜಿಲ್ಲೆ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿದ್ದು, ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳು ಬಡತನದಿಂದ ಕಲಿಕಾ ಸಾಮಗ್ರಿಗಳನ್ನು ಖರೀದಿಸಲು ಸಾಧ್ಯವಾಗದೆ ಶೈಕ್ಷಣಿಕ ಚಟುವಟಿಕೆಗಳು ಕುಂಠಿತವಾಗಿವೆ..
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿದ್ದು, ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳು ಬಡತನದಿಂದ ಕಲಿಕಾ ಸಾಮಗ್ರಿಗಳನ್ನು ಖರೀದಿಸಲು ಸಾಧ್ಯವಾಗದೆ ಶೈಕ್ಷಣಿಕ ಚಟುವಟಿಕೆಗಳು ಕುಂಠಿತವಾಗಿವೆ ಎಂದು ಪಿಕೆಎಸ್ ಫೌಂಡೇಷನ್ ಸಂಸ್ಥಾಪಕ, ವಾಣಿಜ್ಯಶಾಸ್ತ್ರ ಅಧ್ಯಾಪಕ ಪಿ.ಕೆ.ಸಂತೋಷ್ ಕುಮಾರ್ ತಿಳಿಸಿದರು.
ಚಿತ್ರದುರ್ಗ ತಾಲೂಕು ಇಂಗಳದಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂಚಿಗನಾಳ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸುಮಾರು 150 ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಸಹಾಯ ಹಸ್ತದ ಬೆಸುಗೆ ಕಾರ್ಯಕ್ರಮದಡಿ ಬಡ, ಹಿಂದುಳಿದ ವಿದ್ಯಾರ್ಥಿಗಳಿಗೆ ಉಚಿತವಾಗಿ ಕಲಿಕಾ ಸಾಮಗ್ರಿಗಳನ್ನು ವಿತರಿಸಿ ಪ್ರೋತ್ಸಾಹಿಸುತ್ತಿರುವುದಾಗಿ ತಿಳಿಸಿದರು.ವಾಣಿಜ್ಯ ಶಾಸ್ತ್ರದ ವಿಶ್ರಾಂತ ಸಹ ಪ್ರಾಧ್ಯಾಪಕ ಕೆ.ರಾಮರಾವ್ ಮಾತನಾಡಿ, ಗ್ರಾಮೀಣ ವಿದ್ಯಾರ್ಥಿಗಳಲ್ಲಿ ಪ್ರತಿಭೆಗೆ ಕೊರತೆಯಿದಿಲ್ಲ. ಸಕಾಲದಲ್ಲಿ ಅವರಿಗೆ ಮಾರ್ಗದರ್ಶನ ಮತ್ತು ಪ್ರೋತ್ಸಾಹ ಸಿಗುತ್ತಿಲ್ಲ. ಗ್ರಾಮೀಣ ಭಾಗದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಪಿಕೆಎಸ್ ಫೌಂಡೇಷನ್‌ನಿಂದ ಉಚಿತವಾಗಿ ನೋಟ್ ಪುಸ್ತಕಗಳನ್ನು ವಿತರಿಸುತ್ತಿರುವುದು ಸಂತೋಷದ ವಿಷಯ ಎಂದರು.
ಎಸ್.ಜೆಎಂ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಹಾಗೂ ಗ್ರಾಮದ ಮುಖಂಡ ಲಕ್ಷ್ಮೀಕಾಂತ್ ಗ್ರಾಮ ಪಂಚಾಯಿತಿ ಸದಸ್ಯೆ ಚೈತ್ರ ಲಕ್ಷಿಕಾಂತ, ಶಾಲಾ ಮುಖ್ಯೋಪಾಧ್ಯಾಯ ವೀರ ಮಂಜುಳಾದೇವಿ, ಸಹ ಶಿಕ್ಷಕಿಯರಾದ ಇಂದಿರಾ, ತ್ರಿವೇಣಿ, ಶಾರದಮ್ಮ, ಮಂಜುಳ, ರಚಿತ ಹಾಜರಿದ್ದರು.