ಸಾರಾಂಶ
೧೪ ವರ್ಷದೊಳಗಿನ ಮಕ್ಕಳು ಹೊರಗೆ ಕೆಲಸ ಮಾಡಿದರೆ ಬಾಲ ಕಾರ್ಮಿಕರಾಗಲಿದ್ದು, ೧೪ ವರ್ಷದೊಳಗಿನ ಮಕ್ಕಳನ್ನು ದುಡಿಸುವ ಬದಲು,ಓದುವ ಕೆಲಸ ಪೋಷಕರು ಮಾಡಬೇಕು ಅಲ್ಲದೆ ಬಾಲ ಕಾರ್ಮಿಕರನ್ನು ಕೆಲಸಕ್ಕೆ ಸೇರಿಸಿಕೊಳ್ಳಬಾರದು, ಒಂದು ವೇಳೆ ಬಾಲ ಕಾರ್ಮಿಕರಿಂದ ದುಡಿಸಿಕೊಳ್ಳುವುದು ಅಪರಾಧ.
ಕನ್ನಡಪ್ರಭ ವಾರ್ತೆ ಗುಂಡ್ಲುಪೇಟೆ
ಮಕ್ಕಳನ್ನು ಬಾಲ ಕಾರ್ಮಿಕರು ಅಂದರೆ ಯಾರು? ಬಾಲ ಕಾರ್ಮಿಕರ ನೋಡಿಲ್ವ? ಬಾಲ ಕಾರ್ಮಿಕರಾಗಲು ಬಡತನವೂ ಕಾರಣ ಎಂದು ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷರೂ ಆದ ಹಿರಿಯ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶ ಬಸವರಾಜ ತಳವಾರ ಹೇಳಿದರು.ಪಟ್ಟಣದ ಕ್ರೈಸ್ಟ್ ಸಿಎಂಐ ಪಬ್ಲಿಕ್ ಶಾಲೆಯಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘದ, ಶಿಕ್ಷಣ ಹಾಗೂ ಕಾರ್ಮಿಕ ಇಲಾಖೆ, ಸಿಎಂಐ ಪಬ್ಲಿಕ್ ಶಾಲೆಯ ಸಹಯೋಗದಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಬಡತನ ಇದೆ ಎಂದು ಮಕ್ಕಳನ್ನು ಕೆಲಸಕ್ಕೆ ಕಳುಹಿಸಬಾರದು ಎಂದರು.
೧೪ ವರ್ಷದೊಳಗಿನ ಮಕ್ಕಳು ಹೊರಗೆ ಕೆಲಸ ಮಾಡಿದರೆ ಬಾಲ ಕಾರ್ಮಿಕರಾಗಲಿದ್ದು, ೧೪ ವರ್ಷದೊಳಗಿನ ಮಕ್ಕಳನ್ನು ದುಡಿಸುವ ಬದಲು,ಓದುವ ಕೆಲಸ ಪೋಷಕರು ಮಾಡಬೇಕು ಅಲ್ಲದೆ ಬಾಲ ಕಾರ್ಮಿಕರನ್ನು ಕೆಲಸಕ್ಕೆ ಸೇರಿಸಿಕೊಳ್ಳಬಾರದು, ಒಂದು ವೇಳೆ ಬಾಲ ಕಾರ್ಮಿಕರಿಂದ ದುಡಿಸಿಕೊಳ್ಳುವುದು ಅಪರಾಧ ಎಂದರು.ಅಧ್ಯಕ್ಷತೆ ವಹಿಸಿದ್ದ ಗುಂಡ್ಲುಪೇಟೆ ಕ್ರೈಸ್ಟ್ ಸಿಎಂಐ ಪಬ್ಲಿಕ್ ಶಾಲೆಯ ಮುಖ್ಯ ಶಿಕ್ಷಕ ಫಾದರ್ ರೇಜೇಶ್ ಪುತಿಯಾ ಪರಂಬಿಲ್ ಮಾತನಾಡಿದರು.
ವಿಶೇಷ ಆಹ್ವಾನಿತರಾಗಿ ತಾಲೂಕು ಕಾನೂನು ಸೇವೆಗಳ ಸಮಿತಿಯ ಸದಸ್ಯ ಕಾರ್ಯದರ್ಶಿಗಳೂ ಆದ ಪ್ರಧಾನ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶ ಶಿವಕುಮಾರ್ ಜಿ.ಜೆ, ಮುಖ್ಯ ಅತಿಥಿಗಳಾಗಿ, ವಕೀಲರ ಸಂಘದ ಅಧ್ಯಕ್ಷ ಟಿ.ಎಸ್. ವೆಂಕಟೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ರಾಜಶೇಖರ್, ಕಾರ್ಮಿಕ ನಿರೀಕ್ಷಕ ನಾರಾಯಣಮೂರ್ತಿ, ವಕೀಲರ ಸಂಘದ ಕಾರ್ಯದರ್ಶಿ ಬಿ.ಪಿ. ಪುಟ್ಟಸ್ವಾಮಿ, ದಲಿತ ಸಾಹಿತಿ ಕಾಳಿಂಗಸ್ವಾಮಿ ಸಿದ್ಧಾರ್ಥ ಹಾಗೂ ಜಿ.ಸಿ.ನಾರಾಯಣಸ್ವಾಮಿ ಸೇರಿದಂತೆ ನೂರಾರು ಮಂದಿ ವಿದ್ಯಾರ್ಥಿಗಳಿದ್ದರು.