ವಿದ್ಯುತ್‌ ನಿಗಮದ ನೌಕರರು ಸುರಕ್ಷತೆ, ಜಾಗೃತಿಯಿಂದ ಕೆಲಸ ನಿರ್ವಹಿಸಿ: ನೌಕರರ ಸಂಘದ ಕೆ.ಬಲರಾಮ್

| Published : Oct 22 2024, 12:01 AM IST

ವಿದ್ಯುತ್‌ ನಿಗಮದ ನೌಕರರು ಸುರಕ್ಷತೆ, ಜಾಗೃತಿಯಿಂದ ಕೆಲಸ ನಿರ್ವಹಿಸಿ: ನೌಕರರ ಸಂಘದ ಕೆ.ಬಲರಾಮ್
Share this Article
  • FB
  • TW
  • Linkdin
  • Email

ಸಾರಾಂಶ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘವು ನೌಕರರಿಗೆ ಇಲಾಖೆಯಿಂದ ದೊರೆಯುವ ಎಲ್ಲ ಸವಲತ್ತುಗಳನ್ನು ಕೊಡಿಸುವಲ್ಲಿ ಯಶ್ವಸಿಯಾಗಿದೆ ಎಂದು ಸಂಘದ ಅಧ್ಯಕ್ಷ ಕೆ.ಬಲರಾಮ್ ಹೇಳಿದರು. ಚಾಮರಅಜನಗರದಲ್ಲಿ ನೂತನ ಪದಾಧಿಕಾರಿಗಳಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘವು ನೌಕರರಿಗೆ ಇಲಾಖೆಯಿಂದ ದೊರೆಯುವ ಎಲ್ಲ ಸವಲತ್ತುಗಳನ್ನು ಕೊಡಿಸುವಲ್ಲಿ ಯಶ್ವಸಿಯಾಗಿದೆ ಎಂದು ಸಂಘದ ಅಧ್ಯಕ್ಷ ಕೆ.ಬಲರಾಮ್ ಹೇಳಿದರು.

ನಗರದ ಜಿಲ್ಲಾ ಡಾ.ರಾಜ್‌ಕುಮಾರ್ ಕಲಾಮಂದಿರದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ, ಸ್ಥಳೀಯ ಸಮಿತಿ, ಚಾಮರಾಜನಗರ ಪ್ರಾಥಮಿಕ ಸಮಿತಿ ಗುಂಡ್ಲುಪೇಟೆ ಮತ್ತು ಹರದನಹಳ್ಳಿ ಸಂಯುಕ್ತಾಶ್ರಯದಲ್ಲಿ 22ತ್ರೈ ವಾರ್ಷಿಕ ಮಹಾ ಅಧಿವೇಶನದಲ್ಲಿ ಕವಿಪ್ರನಿನಿ ನೌಕರ ಸಂಘಕ್ಕೆ ಅವಿರೋಧವಾಗಿ ಆಯ್ಕೆಯಾಗಿರುವ ಕೇಂದ್ರ ಕಾರ್ಯಕಾರಿ ಸಮಿತಿಗೆ ನೂತನ ಪದಾಧಿಕಾರಿಗಳಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.ಸಕರಾತ್ಮಕ ಸ್ಪಂದನೆ ಸಿಕ್ಕಿದೆ. ಅಪಘಾತ, ವಿದ್ಯುತ್ ಅವಘಡದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ 1.15 ಕೋಟಿ ಕೊಡುವಂತಹ ವ್ಯವಸ್ಥೆ ಹಾಗೂ ಸ್ವಾಭಾವಿಕ ಸಾವಿಗೆ 5 ಲಕ್ಷ ರು. ಕೊಡುವಂತಹ ವ್ಯವಸ್ಥೆಯನ್ನು ಸಂಘ ಮಾಡಿಸಿ ಕುಟುಂಬದವರಿಗೆ ಅನುಕೂಲ ಮಾಡಿಕೊಟ್ಟಿದೆ. ಈ ವರ್ಷದಲ್ಲಿ 12 ಮಂದಿ ನೌಕರರು ಮೃತಪಟ್ಟಿದ್ದಾರೆ. ನೌಕರರ ಕುಟುಂಬಕ್ಕೆ ಒಳ್ಳೆಯದಾಗುವ ನಿಟ್ಟಿನಲ್ಲಿ ಕೆಲಸ ಮಾಡಿದೆ. ಅಲ್ಲದೆ ಕವಿಪ್ರನಿ ನೌಕರರಿಗೆ ಗುಣಮಟ್ಟದ ಸುರಕ್ಷತ ಕಿಟ್ ನೀಡುವಂತೆ ಸಂಘ ಬೇಡಿಕೆ ಇಟ್ಟಿದ್ದು, ನೌಕರರ ಒಳಿತಿಗಾಗಿ ಶ್ರಮಿಸುತ್ತಿದೆ ಎಂದರು.ಅದ್ಧೂರಿ ಮೆರವಣಿಗೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಸಂಘದ ಅಧ್ಯಕ್ಷ ಕೆ. ಬಲರಾಮ್ ಅವರನ್ನು ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಆವರಣದಿಂದ ಮೆರವಣಿಗೆಯಲ್ಲಿ ವೇದಿಕೆಗೆ ಕರೆತಲಾಯಿತು. ಕಾರ್ಯಕ್ರಮದಲ್ಲಿ ನೌಕರರ ಸಂಘದ ಕಾರ್ಯಾಧ್ಯಕ್ಷ ಡಾಕ್ಯಾನಾಯಕ್, ಹಿರಿಯ ಉಪಾಧ್ಯಕ್ಷ ಹೆಚ್.ಆರ್. ಅಶ್ಬಥಪ್ಪ, ಪ್ರಧಾನ ಕಾರ್ಯದರ್ಶಿ ಶಿವರಾಮ್, ಅಧಿಕ ಕಾರ್ಯದರ್ಶಿಗಳಾದ ಸತ್ಯನಾರಾಯಣ, ಕುಮಾರ್, ಉಪ ಕಾರ್ಯದರ್ಶಿ ಸಂತೋಷ್, ಉಪಾಧ್ಯಕ್ಷ ರಾದ ಗೋವಿಂದರಾಜ, ಹೆಚ್.ವಿ.ಸಂದೀಪ್, ಎನ್. ಮಹೇಶ್, ಸ್ಥಳೀಯ ಸಮಿತಿ ಅಧ್ಯಕ್ಷ ಮುರುಳಿಕೃಷ್ಣಸ್ವಾಮಿ, ಕಾರ್ಯದರ್ಶಿ ಸಿದ್ದರಾಜಪ್ಪ, ಉಪಾಧ್ಯಕ್ಷ ಮಂಜುನಾಥ್, ಖಜಾಂಚಿ ರಮೇಶ್, ಸಹ ಕಾರ್ಯದರ್ಶಿ ಮಹೇಶ್, ನಿರ್ದೇಶಕ ರಾದ ರಾಜು, ಶಿವಪ್ಪ, ನಾಗರಾಜು, ಸೋಮಣ್ಣ, ಗುಂಡ್ಲುಪೇಟೆ ಪ್ರಾಥಮಿಕ ಸಮಿತಿ ಅಧ್ಯಕ್ಷ ಶರಣಬಸಪ್ಪ, ಕಾರ್ಯದರ್ಶಿ ಪ್ರಕಾಶ್, ಹರದನಹಳ್ಳಿ ಅಧ್ಯಕ್ಷ ಮಹದೇವಸ್ವಾಮಿ, ಕಾರ್ಯದರ್ಶಿ ಚನ್ನಂಜ ಕುಮಾರ್,ಚಾಮರಾಜನಗರ ವಿಭಾಗದ ಕಾರ್ಯನಿರ್ವಾಹಕ ಟಿ.ಪ್ರದೀಪ್, ಲೆಕ್ಕಾಧಿಕಾರಿ ಆರ್.ಭಾಸ್ಕರ್, ಉಪ ವಿಭಾಗಾಧಿಕಾರಿ, ಶಾಖಾಧಿಕಾರಿಗಳು ಹಾಜರಿದ್ದರು.